ನವದೆಹಲಿ : ಭಾರತದ ರಾಜಕೀಯ ಇತಿಹಾಸದಲ್ಲಿ ಇಂದು (ಜೂನ್ 10-2026) ಸುವರ್ಣಾಕ್ಷರಗಳಲ್ಲಿ ಬರೆದಿಡುವಂತಹ ದಿನ. ಪ್ರಧಾನಿ ನರೇಂದ್ರ ಮೋದಿ ಅವರು ಭಾರತದ ಮೊದಲ ಪ್ರಧಾನಿ ಪಂಡಿತ್ ಜವಾಹರ್‌ಲಾಲ್ ನೆಹರು ಅವರ ದಶಕಗಳ ಹಿಂದಿನ ದಾಖಲೆಯನ್ನು ಅಧಿಕೃತವಾಗಿ ಹಿಂದಿಕ್ಕುವ ಮೂಲಕ ಸತತವಾಗಿ ಅತಿ ದೀರ್ಘ ಅವಧಿಗೆ ಪ್ರಜಾಸತ್ತಾತ್ಮಕವಾಗಿ ಚುನಾಯಿತರಾದ ಪ್ರಧಾನಿ ಎಂಬ ಅಭೂತಪೂರ್ವ ಇತಿಹಾಸ ಬರೆದಿದ್ದಾರೆ. ಈ ಮೂಲಕ ನೆಹರೂ ಅವರ 4,398 ದಿನಗಳ ದಾಖಲೆಯನ್ನ ಮುರಿದು 4,399 ದಿನಗಳ ನಿರಂತರ ಸೇವೆಯ ಮೈಲುಗಲ್ಲು ತಲುಪಿದ್ದಾರೆ.
2014ರ ಮೇ 26ರಂದು ಮೊದಲ ಬಾರಿಗೆ ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಮೋದಿ ಅವರು ಇಂದಿಗೆ 4,399 ದಿನಗಳ ನಿರಂತರ ಅಧಿಕಾರಾವಧಿಯನ್ನ ಪೂರೈಸಿದ್ದಾರೆ. ಇದರೊಂದಿಗೆ ಅವರು ಭಾರತದ ಪ್ರಜಾಪ್ರಭುತ್ವದ ಇತಿಹಾಸದಲ್ಲಿ ಅತ್ಯಂತ ದೀರ್ಘಕಾಲ ಸೇವೆ ಸಲ್ಲಿಸಿದ ಪ್ರಧಾನಿ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.
ನೆಹರೂ ಅವರು 1952ರ ಮೇ 13ರಂದು ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕರಿಸಿ, 1964ರ ಮೇ 27ರವರೆಗೆ ಒಟ್ಟು 4,398 ದಿನಗಳ ಕಾಲ ನಿರಂತರವಾಗಿ ಸೇವೆ ಸಲ್ಲಿಸಿದ್ದರು. ಈ ದಾಖಲೆಯು ಕಳೆದ 64 ವರ್ಷಗಳಿಂದಲೂ ಅಚ್ಚಳಿಯದೇ ಉಳಿದಿತ್ತು.
ಇದಕ್ಕೂ ಮುನ್ನ ಮೋದಿ ಅವರು 2025ರ ಜುಲೈ 25ರಂದು ಮತ್ತೊಂದು ಮೈಲುಗಲ್ಲು ದಾಟಿದ್ದರು. ಆ ದಿನ ಅವರು 4,077 ದಿನಗಳೊಂದಿಗೆ ಮೂರನೇ ಅತ್ಯಂತ ದೀರ್ಘಕಾಲ ಸೇವೆ ಸಲ್ಲಿಸಿದ ಪ್ರಧಾನಿ ಇಂದಿರಾ ಗಾಂಧಿ ಅವರ ದಾಖಲೆಯನ್ನು ಹಿಂದಿಕ್ಕಿದ್ದರು. ಇಂದಿರಾ ಗಾಂಧಿ ಅವರು 1966ರ ಜನವರಿ 24ರಿಂದ 1977ರ ಮಾರ್ಚ್ 24ರವರೆಗೆ ಸುಮಾರು 11 ವರ್ಷ 2 ತಿಂಗಳ ಕಾಲ (4,077 ದಿನ) ನಿರಂತರ ಅಧಿಕಾರ ನಡೆಸಿದ್ದರು.
ಇದನ್ನೂ ಓದಿ : ಟಿ20 ವಿಶ್ವಕಪ್ ಅಭ್ಯಾಸ ಪಂದ್ಯದಲ್ಲಿ ಪಾಕಿಸ್ತಾನಕ್ಕೆ ಶಾಕ್ ಕೊಟ್ಟ ಸ್ಕಾಟ್ಲೆಂಡ್



















