ಬೆಂಗಳೂರು: ಸಚಿವ ಜಮೀರ್ ಅಹ್ಮದ್ ವಿರುದ್ಧ ಅವಹೇಳನಾಕಾರಿ ಹೇಳಿಕೆ ನೀಡಿರುವ ರಾಷ್ಟ್ರ ರಕ್ಷಣಾ ಪಜೆ ಮುಖಂಡ ಪುನೀತ್ ಕೆರೆಹಳ್ಳಿಯನ್ನು ಪೊಲೀಸರು ಅರೆಸ್ಟ್ ಮಾಡಲಾಗಿದೆ.
ಪುನೀತ್ ಕೆರೆಹಳ್ಳಿ (Puneeth Kerehalli) ವಿರುದ್ಧ ಧರ್ಮ, ಜಾತಿ ಹೆಸರಿನಲ್ಲಿ ನಿಂದನೆ ಮಾಡಿರುವ ಆರೋಪ ಕೇಳಿ ಬಂದಿದ್ದು, ಬುಧವಾರ ಎಫ್ ಐಆರ್ ದಾಖಲಾಗಿತ್ತು. ರಾತ್ರೋರಾತ್ರಿ ಪೊಲೀಸರು ವಶಕ್ಕೆ (Arrest) ಪಡೆದಿದ್ದಾರೆ.
ಸಚಿವ ಜಮೀರ್ ಅಹಮದ್ ಖಾನ್ ಅವರ ಆಪ್ತ ಸಹಾಯಕ ಬಿ. ಎಸ್. ಅಶೋಕ್ ಅವರು ಪುನೀತ್ ಕೆರೆಹಳ್ಳಿ ವಿರುದ್ಧ ಚಾಮರಾಜಪೇಟೆ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಧರ್ಮ ಧರ್ಮಗಳ ನಡುವೆ ಸಂಘರ್ಷ ಸೃಷ್ಟಿಸುವ ಹೇಳಿಕೆ ನೀಡಿದ್ದಾರೆ. ಅವಾಚ್ಯ ಶಬ್ದಗಳಿಂದ ನಿಂದಿಸಿ, ಪ್ರಾಣ ಬೆದರಿಕೆ ಹಾಕಿದ್ದಾರೆ ಎಂದು ದೂರು ದಾಖಲಿಸಿದ್ದರು. ಹೀಗಾಗಿ ಎಫ್ ಐಆರ್ ದಾಖಲಾಗಿತ್ತು. ಸದ್ಯ ಪೊಲೀಸರು ಪುನೀತ್ ನನ್ನು ಬಂಧಿಸಿದ್ದಾರೆ.
ನವೆಂಬರ್ 11 ರಂದು ಪುನೀತ್ ಕೆರೆಹಳ್ಳಿ ತಮ್ಮ ಸೋಷಿಯಲ್ ಮೀಡಿಯಾ ಫೇಸ್ಬುಕ್ ಖಾತೆಯಲ್ಲಿ ವಿಡಿಯೋವೊಂದನ್ನು ಪೋಸ್ಟ್ ಮಾಡಿ, ‘ಲೇ ಜಮೀರ್ ಅಹಮದ್ ಖಾನ್, ಕುಮಾರಸ್ವಾಮಿ ಅವರನ್ನು ಕರಿಯಾ ಅಂದ ನೀನು ನನ್ನ ಈ ಮಾತುಗಳನ್ನು ಸರಿಯಾಗಿ ಕೇಳಿಸಿಕೊ ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ದರು. ನಮ್ಮದೇ ನಾಡಿನಲ್ಲಿ, ನಮ್ಮದೇ ಜನರ ಮುಂದೆ ಅದೂ ನಮ್ಮ ನಾಯಕರ ಬಗ್ಗೆ ಅವರ ಬಣ್ಣವನ್ನು ಹಂಗಿಸಿ ಮಾತನಾಡಿದ್ದೀಯಾ. ನಿನಗೆಷ್ಟು ದುರಹಂಕಾರ ಹಾಗೂ ದರ್ಪ ಬಂತಾ ಎಂದು ವಾಗ್ದಾಳಿ ನಡೆಸಿದ್ದರು. ನಾವು ಹಿಂದೂಗಳು ಕಪ್ಪಗಿದ್ದೇವೆ. ನಾವು ಪೂಜಿಸುವ ಕೃಷ್ಣ ಕಪ್ಪಗಿದ್ದಾರೆ ಎಂದು ಪುನೀತ್ ಹೇಳಿದ್ದು, ಆಕ್ಷೇಪಾರ್ಹ ಪದ ಬಳಕೆ ಮಾಡಿದ್ದಕ್ಕೆ ಆಕ್ರೋಶ ಕೇಳಿ ಬಂದಿದೆ.
ರಾತ್ರೋರಾತ್ರಿ ಪೊಲೀಸರು, ನ್ಯಾಯಾಧೀಶರ ಮುಂದೆ ಹಾಜರುಪಡಿಸಿದ್ದು, 14 ದಿನಗಳ ನ್ಯಾಯಾಂಗ ಬಂಧನಕ್ಕೆ ನೀಡಿ ಆದೇಶಿಸಲಾಗಿದೆ.