ಬೆಂಗಳೂರು : ಬ್ಯಾಂಕಿಂಗ್ ಕ್ಷೇತ್ರದಲ್ಲಿ ಉತ್ತಮ ಭವಿಷ್ಯ ರೂಪಿಸಿಕೊಳ್ಳಬೇಕು ಎಂದು ಬಯಸುತ್ತಿರುವವರಿಗೆ ಸಿಹಿ ಸುದ್ದಿ ಸಿಕ್ಕಿದೆ. ನವಕಲ್ಯಾಣ ಕರ್ನಾಟಕ ಸೌಹಾರ್ದ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಯಲ್ಲಿ (Navakalyana Karnataka Souharda Credit Co-operative Society Recruitment 2026) ಖಾಲಿ ಇರುವ 2 ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಲಾಗಿದೆ. 2 ಡೆಪ್ಯೂಟಿ ಚೀಫ್ ಎಕ್ಸಿಕ್ಯೂಟಿವ್ ಆಫೀಸರ್ ಹುದ್ದೆಗಳನ್ನು ನೇಮಕಾತಿ ಮಾಡಿಕೊಳ್ಳಲಾಗುತ್ತಿದೆ. ಅರ್ಹ ಹಾಗೂ ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಆಫ್ ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಲು ಅವಕಾಶ ನೀಡಲಾಗಿದೆ.
ಹುದ್ದೆಗಳ ವಿವರ
ನೇಮಕಾತಿ ಸಂಸ್ಥೆ: ನವಕಲ್ಯಾಣ ಕರ್ನಾಟಕ ಸೌಹಾರ್ದ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ
ಹುದ್ದೆಗಳ ಹೆಸರು: ಡೆಪ್ಯೂಟಿ ಚೀಫ್ ಎಕ್ಸಿಕ್ಯೂಟಿವ್ ಆಫೀಸರ್
ಒಟ್ಟು ಹುದ್ದೆಗಳು: 2
ಉದ್ಯೋಗ ಸ್ಥಳ: ಬೆಂಗಳೂರು
ಅರ್ಜಿ ಸಲ್ಲಿಕೆ ವಿಧಾನ: ಆಫ್ ಲೈನ್
ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ: ಅಕ್ಟೋಬರ್ 9
1 ಡೆಪ್ಯೂಟಿ ಚೀಫ್ ಎಕ್ಸಿಕ್ಯೂಟಿವ್ ಆಫೀಸರ್ ಹಾಗೂ 1 ಕಸ್ಟಮರ್ ಸರ್ವಿಸ್ ಮ್ಯಾನೇಜರ್ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುತ್ತಿದೆ. ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ಯಾವುದೇ ವಿಶ್ವವಿದ್ಯಾಲಯ ಅಥವಾ ಮಂಡಳಿಗಳಲ್ಲಿ ಪದವಿ ಹಾಗೂ ಸ್ನಾತಕೋತ್ತರ ಪದವಿ ಮುಗಿಸಿರಬೇಕು ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ. ಅಭ್ಯರ್ಥಿಗಳಿಗೆ 21 ವರ್ಷಗಳಿಂದ ಗರಿಷ್ಠ 45 ವರ್ಷಗಳ ಮಿತಿಯನ್ನು ನಿಗದಿಪಡಿಸಲಾಗಿದೆ.
ನೇಮಕಾತಿ ಹೊಂದಿದವರಿಗೆ ಆಯಾ ಹುದ್ದೆಗಳಿಗೆ ಅನುಗುಣವಾಗಿ ಮಾಸಿಕ 28 ಸಾವಿರ ರೂಪಾಯಿಯಿಂದ 70 ಸಾವಿರ ರೂಪಾಯಿವರೆಗೆ ಸಂಬಳ ನೀಡಲಾಗುತ್ತದೆ. ಅರ್ಜಿ ಸಲ್ಲಿಸಲು ಬಯಸುವವರು nkkcredit.com ವೆಬ್ ಸೈಟ್ ಗೆ ಭೇಟಿ ನೀಡಿ ಅಧಿಸೂಚನೆ ಓದಿಕೊಳ್ಳಬೇಕು. ಅರ್ಜಿ ನಮೂನೆಯ ಪ್ರಿಂಟೌಟ್ ತೆಗೆದುಕೊಂಡು ಭರ್ತಿ ಮಾಡಬೇಕು. ಅರ್ಜಿ ಹಾಗೂ ಅಗತ್ಯ ದಾಖಲೆಗಳನ್ನು ಕೆಳಗಿನ ವಿಳಾಸಕ್ಕೆ ಕಳುಹಿಸಬೇಕು.
ಅರ್ಜಿ ಸಲ್ಲಿಸಬೇಕಾದ ವಿಳಾಸ
To Chief Executive Officer, Navakalyana Karnataka Souharda Credit Co-operative Society Limited, No. 277/27, 59th Crossroads, Vatal Nagaraj Road, 3rd Block, Rajajinagar, Bangalore-560010.
ಇದನ್ನೂ ಓದಿ : ಇಂಡೋ-ಟಿಬೆಟಿಯನ್ ಗಡಿ ಪೊಲೀಸ್ ಪಡೆಯಲ್ಲಿ ನೇಮಕಾತಿ : 81 ಸಾವಿರ ರೂ. ಸ್ಯಾಲರಿ



















