ಬೆಂಗಳೂರು: ಕರ್ನಾಟಕದ ಪ್ರಮುಖ ನೌಕಾನೆಲೆಗಳಲ್ಲಿ ಒಂದಾಗಿರುವ, ಕಾರವಾರದಲ್ಲಿರುವ ಡಾಕ್ ಯಾರ್ಡ್ ನೌಕಾನೆಲೆಯಲ್ಲಿ ಖಾಲಿ ಇರುವ 210 ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಲಾಗಿದೆ. 210 ಅಪ್ರೆಂಟಿಸ್ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುತ್ತಿದೆ. ಇದು ಫ್ರೆಶರ್ ಗಳಿಗೆ ವೃತ್ತಿ ತರಬೇತಿ ಪಡೆಯಲು ಒಳ್ಳೆಯ ಅವಕಾಶವಾಗಿದೆ. ಅರ್ಹ ಹಾಗೂ ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.
ಹುದ್ದೆಗಳ ಸಂಕ್ಷಿಪ್ತ ವಿವರ
ನೇಮಕಾತಿ ಸಂಸ್ಥೆ: ನೇವಲ್ ಡಾಕ್ ಯಾರ್ಡ್ ಕಾರವಾರ
ಒಟ್ಟು ಹುದ್ದೆಗಳು: 210
ಹುದ್ದೆಗಳ ಹೆಸರು: ಅಪ್ರೆಂಟಿಸ್
ಉದ್ಯೋಗ ಸ್ಥಳ: ಕಾರವಾರ, ಗೋವಾ
ಅರ್ಜಿ ಸಲ್ಲಿಕೆ ವಿಧಾನ: ಆನ್ ಲೈನ್
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ನವೆಂಬರ್ 10
ಕರ್ನಾಟಕದಲ್ಲಿ 180 ಹುದ್ದೆಗಳು ಖಾಲಿ ಇವೆ. ಗೋವಾದಲ್ಲಿ 30 ಹುದ್ದೆಗಳನ್ನು ನೇಮಕಾತಿ ಮಾಡಿಕೊಳ್ಳಲಾಗುತ್ತಿದೆ. ಅರ್ಜಿ ಸಲ್ಲಿಸಲು ಬಯಸುವವರು ದೇಶದ ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ ಅಥವಾ ಮಂಡಳಿಯಲ್ಲಿ ಎಸ್ಸೆಸ್ಸೆಲ್ಸಿ, ಐಟಿಐ ಮುಗಿಸಿರಬೇಕು ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ. ಅರ್ಜಿ ಸಲ್ಲಿಸುವವರಿಗೆ 18 ವರ್ಷಗಳ ವಯೋಮಿತಿ ನಿಗದಿಪಡಿಸಲಾಗಿದೆ. ನೇಮಕಾತಿ ಹೊಂದಿದವರಿಗೆ ಮಾಸಿಕ 9,600 ಸ್ಟೈಪೆಂಡ್ ನೀಡಲಾಗುತ್ತದೆ. ಸಲ್ಲಿಕೆಯಾದ ಅರ್ಜಿಗಳನ್ನು ಮೊದಲು ಪರಿಶೀಲನೆ ಮಾಡಲಾಗುತ್ತದೆ. ಇದಾದ ಬಳಿಕ ಲಿಖಿತ ಪರೀಕ್ಷೆ ನಡೆಸಿ ನೇಮಕಾತಿ ಮಾಡಿಕೊಳ್ಳಲಾಗುತ್ತದೆ.
ಅರ್ಜಿ ಸಲ್ಲಿಸುವುದು ಹೇಗೆ?
ಮೊದಲಿಗೆ ಅಧಿಕೃತ ವೆಬ್ ಸೈಟ್ ಆಗಿರುವ www.apprenticeshipindia.gov.in ಗೆ ಭೇಟಿ ನೀಡಬೇಕು
ನಿಮಗೆ ಬೇಕಾದ ಹುದ್ದೆಯ ಅಧಿಸೂಚನೆಯನ್ನು ಓದಬೇಕು
ಅಪ್ರೆಂಟಿಸ್ ಸೇರಲು ನೋಂದಣಿ ಮಾಡಿಕೊಳ್ಳಬೇಕು
ಭರ್ತಿ ಮಾಡಿದ ಅರ್ಜಿ ಹಾಗೂ ದಾಖಲೆಗಳನ್ನು ಈ ಕೆಳಗಿನ ವಿಳಾಸಕ್ಕೆ ಪೋಸ್ಟ್ ಮಾಡಬೇಕು
ಅರ್ಜಿ ಸಲ್ಲಿಸಬೇಕಾದ ವಿಳಾಸ
The Officer-in-Charge
Dockyard Apprentice School
Naval Dockyard, Naval Base
Karwar, Karnataka – 581 308



















