ಬೆಂಗಳೂರು: ನಕ್ಸಲ್ ನಾಯಕನ ಎನ್ ಕೌಂಟರ್ ಬಗ್ಗೆ ಗೃಹ ಸಚಿವ ಡಾ. ಜಿ. ಪರಮೇಶ್ವರ್ ಸ್ಪಷ್ಟನೆ ನೀಡಿದ್ದಾರೆ.
ಸದಾಶಿವನಗರದಲ್ಲಿ ಮಾತನಾಡಿದ ಅವರು, ಉಡುಪಿ ಜಿಲ್ಲೆಯ ಹೆಬ್ರಿ ಸಮೀಪದ ಕಬ್ಬಿನಾಲೆಯಲ್ಲಿ ನಕ್ಸಲ್ ನಾಯಕ ವಿಕ್ರಂ ಗೌಡನನ್ನು ಎನ್ ಕೌಂಟರ್ ನಲ್ಲಿ ಹತ್ಯೆ ಮಾಡಿರುವ ಕುರಿತು ಮಾತನಾಡಿದ್ದಾರೆ. ವಿಕ್ರಮ್ ಗೌಡ ಎಂಬ ಗ್ರೇಡೆಡ್ ನಕ್ಸಲ್ ನನ್ನು ನಕ್ಸಲ್ ನಿಗ್ರಹ ಪಡೆ ಪೊಲೀಸರು ಎನ್ ಕೌಂಟರ್ ಮಾಡಿದ್ದಾರೆ. ಆತ 20 ವರ್ಷಗಳಿಂದಲೂ ಪೊಲೀಸರಿಗೆ ಬೇಕಾಗಿದ್ದು, ತಲೆ ಮರೆಸಿಕೊಂಡಿದ್ದ. ಆದರೆ, ಸೋಮವಾರ ಸಂಜೆ ವಿಕ್ರಂಗೌ ನ ಎನ್ ಕೌಂಟರ್ ಆಗಿದೆ. ಆತನನ್ನು ಹಿಡಿಯಲು ಪೊಲೀಸರು ಧಾವಿಸಿದಾಗ, ಆತ ಪೊಲೀಸರ ಮೇಲೆಯೇ ಗುಂಡಿನ ದಾಳಿ ನಡೆಸಲು ಮುಂದಾಗಿದ್ದ. ಈ ವೇಳೆ ಪೊಲೀಸರು ಪೊಲೀಸರು ಪ್ರತಿ ದಾಳಿ ನಡೆಸಿದ್ದಾರೆ.
ಆತನೊಂದಿಗೆ ಇದ್ದ ಮೂವರು ಪರಾರಿಯಾಗಿದ್ದಾರೆ. ವಿಕ್ರಂಗೌಡನನ್ನು ಎನ್ ಕೌಂಟರ್ ಮಾಡುವುದು ಪೊಲೀಸರಿಗೆ ಅನಿವಾರ್ಯವಾಗಿತ್ತು. ನಾವು ರಾಜ್ಯದಲ್ಲಿ ನಕ್ಸಲ್ ಕಾಲ ಮುಗಿಯಿತು ಅಂದುಕೊಂಡಿದ್ದೆವು. ಆದರೆ, ಕಳೆದ ವಾರ ರಾಜು ಮತ್ತು ಲತಾ ಎಂಬ ನಕ್ಸಲರು ಪತ್ತೆ ಆದರು. ನಂತರ ಅವರಿಬ್ಬರೂ ತಪ್ಪಿಸಿಕೊಂಡು ಹೋಗಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ.


















