ಬೆಂಗಳೂರು : ಕರ್ನಾಟಕದ ಬೆಂಗಳೂರು ಸೇರಿ ದೇಶದ ಹಲವೆಡೆ ಕಚೇರಿಗಳನ್ನು ಹೊಂದಿರುವ, ಕೇಂದ್ರ ಸರ್ಕಾರದ ಸ್ವಾಯತ್ತ ಸಂಸ್ಥೆಯಾದ ನ್ಯಾಷನಲ್ ಬುಕ್ ಟ್ರಸ್ಟ್ ಇಂಡಿಯಾ ಸಂಸ್ಥೆಯಲ್ಲಿ ಖಾಲಿ ಇರುವ 6 ಹುದ್ದೆಗಳ ನೇಮಕಾತಿಗಾಗಿ (NBT India Recruitment 2026) ಅಧಿಸೂಚನೆ ಹೊರಡಿಸಲಾಗಿದೆ. ಆರು ರೀಜನಲ್ ಮ್ಯಾನೇಜರ್ ಸೇರಿ ಹಲವು ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುತ್ತಿದೆ. ಅರ್ಹ ಹಾಗೂ ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಆಫ್ ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.
ನೇಮಕಾತಿ ಸಂಸ್ಥೆ: ನ್ಯಾಷನಲ್ ಬುಕ್ ಟ್ರಸ್ಟ್ ಇಂಡಿಯಾ
ಒಟ್ಟು ಹುದ್ದೆಗಳು: 6
ಉದ್ಯೋಗ ಸ್ಥಳ: ಬೆಂಗಳೂರು ಸೇರಿ ದೇಶದ ಹಲವೆಡೆ
ಅರ್ಜಿ ಸಲ್ಲಿಕೆ ವಿಧಾನ: ಆಫ್ ಲೈನ್
ಹುದ್ದೆಗಳ ಹೆಸರು: ರೀಜನಲ್ ಮ್ಯಾನೇಜರ್ ಇತ್ಯಾದಿ
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಆಗಸ್ಟ್ 21
ರೀಜನಲ್ ಮ್ಯಾನೇಜರ್ ಹಾಗೂ ಡೈರೆಕ್ಟರ್ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುತ್ತಿದೆ. ಕರ್ನಾಟಕದ ಬೆಂಗಳೂರು, ಪಶ್ಚಿಮ ಬಂಗಾಳದ ಕಲ್ಕತ್ತ, ಮಹಾರಾಷ್ಟ್ರದ ಪುಣೆಯಲ್ಲಿ ಹಾಗೂ ನವದೆಹಲಿಯಲ್ಲಿರುವ ಕಚೇರಿಗಳಲ್ಲಿ ನೇಮಕಾತಿ ನಡೆಯುತ್ತಿದೆ. ಅರ್ಜಿಗಳನ್ನು ಸಲ್ಲಿಸಲು ಯಾವುದೇ ಶುಲ್ಕವನ್ನು ನಿಗದಿಪಡಿಸಿಲ್ಲ. ಸಲ್ಲಿಕೆಯಾದ ಅರ್ಜಿಗಳನ್ನು ಮೊದಲು ಪರಿಶೀಲನೆ ಮಾಡಲಾಗುತ್ತದೆ. ಇದಾದ ಬಳಿಕ ಅಭ್ಯರ್ಥಿಗಳನ್ನು ಸಂದರ್ಶನಕ್ಕೆ ಆಹ್ವಾನಿಸಿ ನೇಮಕಾತಿ ಮಾಡಿಕೊಳ್ಳಲಾಗುತ್ತದೆ.
ಅರ್ಜಿ ಸಲ್ಲಿಸುವುದು ಹೇಗೆ?
ಮೊದಲಿಗೆ nbtindia.gov.in ವೆಬ್ ಸೈಟ್ ಗೆ ಭೇಟಿ ನೀಡಬೇಕು. ನಿಮಗೆ ಬೇಕಾದ ಹುದ್ದೆಗಳ ಅಧಿಸೂಚನೆ ಓದಬೇಕು. ಅರ್ಜಿಯ ಪ್ರಿಂಟೌಟ್ ತೆಗೆದುಕೊಂಡು ಭರ್ತಿ ಮಾಡಬೇಕು. ಭರ್ತಿ ಮಾಡಿದ ಅರ್ಜಿಯನ್ನು ಅಗತ್ಯ ದಾಖಲೆಗಳೊಂದಿಗೆ ಅಧಿಸೂಚನೆಯ್ಲಲಿ ತಿಳಿಸಿದ ವಿಳಾಸಕ್ಕೆ ಪೋಸ್ಟ್ ಮಾಡಬೇಕು ಎಂದು ತಿಳಿಸಲಾಗಿದೆ.
ಇದನ್ನೂ ಓದಿ : DHFWS ಸಂಸ್ಥೆಯಲ್ಲಿ 26 ನರ್ಸಿಂಗ್ ಆಫೀಸರ್‌ಗಳ ನೇಮಕಾತಿ : ಡಿ.ಫಾರ್ಮಾ ಮುಗಿಸಿದವರಿಗೆ ಚಾನ್ಸ್


















