ಬೆಂಗಳೂರು: ಕೆಂಪೇಗೌಡ ಏರ್‌ಪೋರ್ಟ್‌ನಲ್ಲಿ ಎನ್‌ಸಿಬಿ ಅಧಿಕಾರಿಗಳು ದಾಳಿ ನಡೆಸಿ ಭಾರೀ ಪ್ರಮಾಣದ ಮಾದಕ ವಸ್ತುವನ್ನು ವಶಕ್ಕೆ ಪಡೆದಿದ್ದಾರೆ.
ಬ್ರೆಜಿಲ್ ಮೂಲದ ಪ್ರಯಾಣಿಕನಿಂದ 4.776 ಕೆಜಿ ಕೊಕೇನ್ ಜಪ್ತಿ ಮಾಡಲಾಗಿದ್ದು, ಇದರ ಮೌಲ್ಯ ಅಂದಾಜು 23.88 ಕೋಟಿ ರೂ. ಎಂದು ತಿಳಿದು ಬಂದಿದೆ. ಆರೋಪಿ ದೋಹಾದಿಂದ ಬೆಂಗಳೂರಿಗೆ ಆಗಮಿಸಿದ್ದನು.
ಚೆಕ್-ಇನ್ ಪ್ರಕ್ರಿಯೆ ವೇಳೆ ಅನುಮಾನಾಸ್ಪದ ಚಲನವಲನ ಕಂಡು ಬಂದ ಹಿನ್ನೆಲೆ ಎನ್‌ಸಿಬಿ ಅಧಿಕಾರಿಗಳು ದಾಳಿ ನಡೆಸಿ ಬ್ಯಾಗ್ ಪರಿಶೀಲನೆ ನಡೆಸಿದರು. ಈ ವೇಳೆ ಬ್ಯಾಗ್‌ನಲ್ಲಿದ್ದ ಬಟ್ಟೆಗಳ ತುಂಡುಗಳೊಳಗೆ ಚಾತುರ್ಯದಿಂದ ಅಡಗಿಸಿದ್ದ ಕೊಕೇನ್ ಪತ್ತೆಯಾಯಿತು.
ತಕ್ಷಣವೇ ಆರೋಪಿಯನ್ನು ವಿಮಾನ ನಿಲ್ದಾಣದಲ್ಲೇ ವಶಕ್ಕೆ ಪಡೆದು ವಿಚಾರಣೆ ನಡೆಸಲಾಗಿದ್ದು. ಪ್ರಕರಣ ಸಂಬಂಧ ಎನ್‌ಡಿಪಿಎಸ್ ಕಾಯ್ದೆ ಅಡಿ ಕಾನೂನು ಕ್ರಮ ಕೈಗೊಳ್ಳಲಾಗಿದೆ.
ಇದನ್ನೂ ಓದಿ : ಸೂರಜ್ ರೇವಣ್ಣಗೂ ಶುರುವಾದ ‘ಲೈಂಕ ದೌರ್ಜ’



















