ಬೆಂಗಳೂರು: ಕೇಂದ್ರ ಸರ್ಕಾರದ ಅಧೀನದಲ್ಲಿ ಕಾರ್ಯನಿರ್ವಹಿಸುವ, ಕರ್ನಾಟಕದ ಬೆಂಗಳೂರಿನಲ್ಲೇ ಕಚೇರಿ ಹೊಂದಿರುವ ನ್ಯಾಷನಲ್ ಸೆಂಟರ್ ಫಾರ್ ಬಯೋಲಾಜಿಕಲ್ ಸೈನ್ಸಸ್ (NCBS Recruitment 2026) ಸಂಸ್ಥೆಯಲ್ಲಿ ಖಾಲಿ ಇರುವ ಹಲವು ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಲಾಗಿದೆ. ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ. ನೇಮಕಾತಿಗೆ ಸಂಬಂಧಿಸಿದಂತೆ ಹೆಚ್ಚಿನ ಮಾಹಿತಿ ಇಲ್ಲಿದೆ.
ನೇಮಕಾತಿ ಸಂಸ್ಥೆ: ನ್ಯಾಷನಲ್ ಸೆಂಟರ್ ಫಾರ್ ಬಯೋಲಾಜಿಕಲ್ ಸೈನ್ಸಸ್ (NCBS)
ಒಟ್ಟು ಹುದ್ದೆಗಳು: ವಿವಿಧ
ಉದ್ಯೋಗ ಸ್ಥಳ: ಬೆಂಗಳೂರು, ಕರ್ನಾಟಕ
ಅರ್ಜಿ ಸಲ್ಲಿಕೆ ವಿಧಾನ: ಆನ್ ಲೈನ್
ಹುದ್ದೆಗಳ ಹೆಸರು: ಅಡ್ಮಿನಿಸ್ಟ್ರೇಟಿವ್ ಅಸಿಸ್ಟಂಟ್
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಜನವರಿ 10
ಅರ್ಜಿ ಸಲ್ಲಿಸಲು ಬಯಸುವವರು ಮಾನ್ಯತೆ ಪಡೆದ ಯಾವುದೇ ವಿಶ್ವವಿದ್ಯಾಲಯ ಅಥವಾ ಮಂಡಳಿಗಳಲ್ಲಿ ಪದವಿ ಮುಗಿಸಿರಬೇಕು ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ. ಗರಿಷ್ಠ 50 ವರ್ಷದೊಳಗಿನವರು ಅರ್ಜಿ ಸಲ್ಲಿಸಲು ಅರ್ಹರು. ಎಸ್ಸಿ, ಎಸ್ಟಿ ಅಭ್ಯರ್ಥಿಗಳಿಗೆ 5 ವರ್ಷ ಹಾಗೂ ಒಬಿಸಿ ಸಮುದಾಯದವರಿಗೆ 3 ವರ್ಷಗಳ ವಯೋಮಿತಿ ಸಡಿಲಿಕೆ ಇದೆ. ಅರ್ಜಿ ಸಲ್ಲಿಸಲು ಯಾವುದೇ ಶುಲ್ಕ ಇರುವುದಿಲ್ಲ. ಲಿಖಿತ ಪರೀಕ್ಷೆ ಹಾಗೂ ಸಂದರ್ಶನದ ಮೂಲಕ ನೇಮಕಾತಿ ಮಾಡಿಕೊಳ್ಳಲಾಗುತ್ತದೆ.
ಅರ್ಜಿ ಸಲ್ಲಿಸುವುದು ಹೇಗೆ?
ಮೊದಲಿಗೆ ಅಧಿಕೃತ ವೆಬ್ ಸೈಟ್ ಆಗಿರುವ ncbs.res.in ಗೆ ಭೇಟಿ ನೀಡಬೇಕು
ನಿಮಗೆ ಬೇಕಾದ ಹುದ್ದೆಗಳ ಅಧಿಸೂಚನೆಯನ್ನು ಓದಿ ಅರ್ಹತೆ ಪರಿಶೀಲಿಸಬೇಕು.
ಆನ್ ಲೈನ್ ಅರ್ಜಿ ನಮೂನೆಯ ಲಿಂಕ್ ತೆರೆದು, ಭರ್ತಿ ಮಾಡಬೇಕು
ಅಗತ್ಯ ದಾಖಲೆಗಳೊಂದಿಗೆ ಅರ್ಜಿಯನ್ನು ಸಲ್ಲಿಸಬೇಕು
ಫ್ಯೂಚರ್ ರೆಫರೆನ್ಸಿಗಾಗಿ ಅರ್ಜಿ ನಮೂನೆಯ ಪ್ರಿಂಟೌಟ್ ತೆಗೆದಿಟ್ಟುಕೊಳ್ಳಬೇಕು
ಇದನ್ನೂ ಓದಿ: ಕರ್ನಾಟಕದ ಬ್ಯಾಂಕುಗಳಲ್ಲಿ ಇದೆ 3,400 ಕೋಟಿ ರೂಪಾಯಿ | ಇದನ್ನು ಕ್ಲೇಮ್ ಮಾಡೋದು ಹೇಗೆ?



















