ಬೆಂಗಳೂರು : ಕೇಂದ್ರ ಸರ್ಕಾರದ ಸಂಸ್ಥೆಯಲ್ಲಿ ಕೆಲಸ ಮಾಡಬೇಕು, ಬೆಂಗಳೂರಿನಲ್ಲಿಯೇ ಉದ್ಯೋಗ ಪಡೆಯಬೇಕು ಎಂದು ಪ್ರಯತ್ನಿಸುತ್ತಿರುವವರಿಗೆ ಸಿಹಿ ಸುದ್ದಿ ದೊರೆತಿದೆ. ಕೇಂದ್ರ ಸರ್ಕಾರಿ ಸ್ವಾಮ್ಯದ ರಾಷ್ಟ್ರೀಯ ಸಹಕಾರಿ ಅಭಿವೃದ್ಧಿ ನಿಗಮದಲ್ಲಿ (NCDC Recruitment 2026) ಖಾಲಿ ಇರುವ 5 ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಲಾಗಿದೆ. ಐದು ಯಂಗ್ ಪ್ರೊಫೇಷನಲ್ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುತ್ತಿದೆ. ಅರ್ಹ ಹಾಗೂ ಆಸಕ್ತಿ ಹೊಂದಿರುವವರು ಆನ್ ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.
ಹುದ್ದೆಗಳ ವಿವರ
ನೇಮಕಾತಿ ಸಂಸ್ಥೆ: ರಾಷ್ಟ್ರೀಯ ಸಹಕಾರಿ ಅಭಿವೃದ್ಧಿ ನಿಗಮ
ಹುದ್ದೆ ಹೆಸರು: ಯಂಗ್ ಪ್ರೊಫೇಷನಲ್
ಒಟ್ಟು ಹುದ್ದೆ: 5
ಉದ್ಯೋಗ ಸ್ಥಳ: ಬೆಂಗಳೂರು ಸೇರಿ ದೇಶದ ಹಲವೆಡೆ
ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ: ಮೇ 5
ಕರ್ನಾಟಕದ ಬೆಂಗಳೂರು, ಆಂಧ್ರಪ್ರದೇಶದ ವಿಜಯವಾಡ, ತಮಿಳುನಾಡಿನ ಚೆನ್ನೈ ಸೇರಿ ದೇಶದ ಹಲವೆಡೆ ಕಾರ್ಯನಿರ್ವಹಿಸಲು ಇಚ್ಛಿಸುವವರು ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಬಯಸುವವರು ಮಾನ್ಯತೆ ಪಡೆದ ಯಾವುದೇ ವಿಶ್ವವಿದ್ಯಾಲಯ ಅಥವಾ ಮಂಡಳಿಗಳಲ್ಲಿ ಸ್ನಾತಕೋತ್ತರ ಪದವಿ ಪೂರ್ಣಗೊಳಿಸಿರಬೇಕು ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.
ಅರ್ಜಿ ಸಲ್ಲಿಸುವವರಿಗೆ ಗರಿಷ್ಠ 45 ವರ್ಷಗಳ ವಯೋಮಿತಿ ನಿಗದಿಪಡಿಸಲಾಗಿದೆ. ಸಲ್ಲಿಕೆಯಾದ ಅರ್ಜಿಗಳನ್ನು ಮೊದಲು ಪರಿಶೀಲನೆ ಮಾಡಲಾಗುತ್ತದೆ. ಇದಾದ ಬಳಿಕ ಸಂದರ್ಶನಕ್ಕೆ ಆಹ್ವಾನಿಸಿ ನೇಮಕಾತಿ ಮಾಡಿಕೊಳ್ಳಲಾಗುತ್ತದೆ. ಅರ್ಜಿ ಸಲ್ಲಿಸುವವರಿಗೆ ಯಾವುದೇ ಶುಲ್ಕವನ್ನು ನಿಗದಿಪಡಿಸಿಲ್ಲ.
ಅರ್ಜಿ ಸಲ್ಲಿಸೋದು ಹೇಗೆ?
ಮೊದಲಿಗೆ ಅಧಿಕೃತ ವೆಬ್ ಸೈಟ್ ಆಗಿರುವ ncdc.in ಗೆ ಭೇಟಿ ನೀಡಬೇಕು.
ಹುದ್ದೆಗೆ ಸಂಬಂಧಿಸಿದ ಅಧಿಸೂಚನೆ ಓದಬೇಕು
ಅರ್ಜಿ ನಮೂನೆಯ ಪ್ರಿಂಟೌಟ್ ತೆಗೆದುಕೊಳ್ಳಬೇಕು
ಭರ್ತಿ ಮಾಡಿದ ಅರ್ಜಿಯನ್ನು ಅಗತ್ಯ ದಾಖಲೆಗಳೊಂದಿಗೆ career@ncdc.in ಗೆ ಮೇಲ್ ಮಾಡಬೇಕು
ಇದನ್ನೂ ಓದಿ : ಸತತ ಕ್ಯಾಚ್ ಡ್ರಾಪ್ : ಪಂಜಾಬ್ ಕಿಂಗ್ಸ್ ತಂಡದ ಫೀಲ್ಡರ್ ಶಶಾಂಕ್ ಸಿಂಗ್‌ಗೆ ಮೈದಾನದಿಂದ ಕೊಕ್!



















