ಬೆಂಗಳೂರು : ಕೇಂದ್ರ ಸರ್ಕಾರದ ಸಂಸ್ಥೆಯಲ್ಲಿ ಉದ್ಯೋಗ ಪಡೆಯಬೇಕು, ಕೈತುಂಬ ಸಂಬಳ ಪಡೆಯಬೇಕು ಎಂದು ಬಯಸುತ್ತಿರುವವರಿಗೆ ಗುಡ್ ನ್ಯೂಸ್ ದೊರೆತಿದೆ. ಕೇಂದ್ರ ಸರ್ಕಾರದ ಅಧೀನದಲ್ಲಿ ಕಾರ್ಯನಿರ್ವಹಿಸುವ ನ್ಯಾಷನಲ್ ಕೋ-ಆಪರೇಟಿವ್ ಡೆವಲಪ್ ಮೆಂಟ್ ಕಾರ್ಪೊರೇಷನ್ (NCDC Recruitment 2026) ಸಂಸ್ಥೆಯಲ್ಲಿ ಖಾಲಿ ಇರುವ 6 ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಲಾಗಿದೆ. ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.
ಹುದ್ದೆಗಳ ಸಂಕ್ಷಿಪ್ತ ವಿವರ
ನೇಮಕಾತಿ ಸಂಸ್ಥೆ: ನ್ಯಾಷನಲ್ ಕೋ-ಆಪರೇಟಿವ್ ಡೆವಲಪ್ ಮೆಂಟ್ ಕಾರ್ಪೊರೇಷನ್ (NCDC)
ಒಟ್ಟು ಹುದ್ದೆಗಳು: 6
ಹುದ್ದೆಗಳ ಹೆಸರು: ಯಂಗ್ ಪ್ರೊಫೇಷನಲ್
ಅರ್ಜಿ ಸಲ್ಲಿಕೆ ವಿಧಾನ: ಆನ್ ಲೈನ್
ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ: ಆಗಸ್ಟ್ 25
3 ಯಂಗ್ ಪ್ರೊಫೇಷನಲ್-1 ಹಾಗೂ 3 ಯಂಗ್ ಪ್ರೊಫೇಷನಲ್-2 ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುತ್ತದೆ. ಅರ್ಜಿ ಸಲ್ಲಿಸಲು ಬಯಸುವವರು ಮಾನ್ಯತೆ ಪಡೆದ ಯಾವುದೇ ವಿಶ್ವವಿದ್ಯಾಲಯದಲ್ಲಿ ಸಿಎ, ಎಂ.ಕಾಂ ಕೋರ್ಸ್ ಮುಗಿಸಿರಬೇಕು ಎಂದು ತಿಳಿಸಲಾಗಿದೆ. ಅರ್ಜಿ ಸಲ್ಲಿಸುವವರಿಗೆ ಗರಿಷ್ಠ 32 ವರ್ಷಗಳ ವಯೋಮಿತಿ ನಿಗದಿಪಡಿಸಲಾಗಿದೆ. ನೇಮಕಾತಿ ಹೊಂದಿದವರಿಗೆ ಮಾಸಿಕ 1 ಲಕ್ಷ ರೂಪಾಯಿವರೆಗೆ ಸಂಬಳ ನೀಡಲಾಗುತ್ತದೆ.
ಸಲ್ಲಿಕೆಯಾದ ಅರ್ಜಿಗಳನ್ನು ಮೊದಲು ಪರಿಶೀಲನೆ ಮಾಡಲಾಗುತ್ತದೆ. ಇದಾದ ಬಳಿಕ ಸಂದರ್ಶನಕ್ಕೆ ಆಹ್ವಾನಿಸಿ ನೇಮಕಾತಿ ಮಾಡಿಕೊಳ್ಳಲಾಗುತ್ತದೆ. ಮೂರು ವರ್ಷಗಳ ಅವಧಿಗೆ ಗುತ್ತಿಗೆ ಆಧಾರದ ಮೇಲೆ ನೇಮಕಾತಿ ಮಾಡಿಕೊಳ್ಳಲಾಗುತ್ತದೆ. ಇದಾದ ಬಳಿಕ ಗರಿಷ್ಠ 1 ಒಂದು ವರ್ಷದ ಅವಧಿಗೆ ವಿಸ್ತರಣೆ ಮಾಡಬಹುದು. ಅರ್ಜಿ ಸಲ್ಲಿಸುವವರು ಮೊದಲು https://www.ncdc.in/ ವೆಬ್ ಸೈಟ್ ಗೆ ಭೇಟಿ ನೀಡಬೇಕು. ಅಧಿಸೂಚನೆ ಓದಿಕೊಂಡ ಬಳಿಕ ಅರ್ಜಿಯ ಪ್ರಿಂಟೌಟ್ ತೆಗೆದುಕೊಳ್ಳಬೇಕು. ಇದಾದ ಬಳಿಕ ಅರ್ಜಿಯನ್ನು ಭರ್ತಿ ಮಾಡಿ ಅಗತ್ಯ ದಾಖಲೆಗಳ ಸಾಪ್ಟ್ ಕಾಪಿಗಳನ್ನು career@ncdc.in ಗೆ ಮೇಲ್ ಮಾಡಬಹುದು.
ಇದನ್ನೂ ಓದಿ : ಕೆಂಪು ಕೋಟೆಯಲ್ಲಿ ಹೊಸ ಇತಿಹಾಸ : ಇದೇ ಮೊದಲ ಬಾರಿಗೆ ಮೊಳಗಿದ ಪೂರ್ಣ ‘ವಂದೇ ಮಾತರಂ’



















