ಬೆಂಗಳೂರು: ಕೇಂದ್ರ ಸರ್ಕಾರದ ಅಧೀನದಲ್ಲಿ ಕಾರ್ಯನಿರ್ವಹಿಸುವ ರಾಷ್ಟ್ರೀಯ ಕಂಪನಿ ಕಾನೂನು ನ್ಯಾಯಾಧೀಕರಣ (NCLT Recruitment 2025) ಸಂಸ್ಥೆಯಲ್ಲಿ ಖಾಲಿ ಇರುವ 32 ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಲಾಗಿದೆ. ಸ್ಟೆನೋಗ್ರಾಫರ್ ಹಾಗೂ ಪರ್ಸನಲ್ ಅಸಿಸ್ಟಂಟ್ ಹುದ್ದೆಗಳನ್ನು ನೇಮಕ ಮಾಡಿಕೊಳ್ಳಲಾಗುತ್ತಿದೆ. ಆನ್ ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಲು ಅವಕಾಶ ನೀಡಲಾಗಿದೆ. ಅಕ್ಟೋಬರ್ 8 ಅರ್ಜಿ ಸಲ್ಲಿಕೆಗೆ ಕೊನೆಯ ದಿನವಾಗಿದೆ.
ಹುದ್ದೆಗಳ ಸಂಕ್ಷಿಪ್ತ ವಿವರ
ನೇಮಕಾತಿ ಸಂಸ್ಥೆ: ರಾಷ್ಟ್ರೀಯ ಕಂಪನಿ ಕಾನೂನು ನ್ಯಾಯಾಧೀಕರಣ (NCLT)
ಒಟ್ಟು ಹುದ್ದೆಗಳು: 32
ಅರ್ಜಿ ಸಲ್ಲಿಕೆ ವಿಧಾನ: ಆನ್ ಲೈನ್
ಅರ್ಜಿ ಸಲ್ಲಿಕೆಗೆ ಕೊನೆಯ ದಿನ: ಅಕ್ಟೋಬರ್ 8
ಹುದ್ದೆಗಳ ಹೆಸರು: ಸ್ಟೆನೋಗ್ರಾಫರ್ ಹಾಗೂ ಪರ್ಸನಲ್ ಅಸಿಸ್ಟಂಟ್
ಉದ್ಯೋಗ ಸ್ಥಳ: ದೇಶಾದ್ಯಂತ
ಮಾನ್ಯತೆ ಪಡೆದ ಯಾವುದೇ ವಿಶ್ವವಿದ್ಯಾಲಯ ಅಥವಾ ಮಂಡಳಿಗಳಲ್ಲಿ ಪದವಿ ಕೋರ್ಸ್ ಗಳನ್ನು ಮುಗಿಸಿರಬೇಕು ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ. 65 ವರ್ಷದೊಳಗಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಅರ್ಹರಾಗಿದ್ದಾರೆ. ಒಬಿಸಿಯವರಿಗೆ 3 ವರ್ಷ ಹಾಗೂ ಎಸ್ಸಿ, ಎಸ್ಟಿ ಸಮುದಾಯದವರಿಗೆ 5 ವರ್ಷಗಳ ವಯೋಮಿತಿ ಸಡಿಲಿಕೆ ಇದೆ.
ದೇಶದ ಯಾವುದೇ ಭಾಗದಲ್ಲಿ ಕೆಲಸ ಮಾಡಲು ಇಚ್ಛಿಸುವವರು ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸಲು ಯಾವುದೇ ಶುಲ್ಕವನ್ನು ನಿಗದಿಪಡಿಸಿಲ್ಲ. ಕೌಶಲ ಪರೀಕ್ಷೆ ಹಾಗೂ ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನು ನೇಮಕಾತಿ ಮಾಡಿಕೊಳ್ಳಲಾಗುತ್ತದೆ. ನೇಮಕಾತಿ ಹೊಂದಿದವರಿಗೆ ಆಯಾ ಹುದ್ದೆಗಳಿಗೆ ಅನುಗುಣವಾಗಿ 45 ಸಾವಿರ ರೂಪಾಯಿಯಿಂದ 50 ಸಾವಿರ ರೂಪಾಯಿವರೆಗೆ ಸಂಬಳ ನೀಡಲಾಗುತ್ತದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು https://nclt.gov.in/ ವೆಬ್ ಸೈಟ್ ಗೆ ಭೇಟಿ ನೀಡಬಹುದಾಗಿದೆ.