ಬೆಂಗಳೂರು: ಒಲಿಂಪಿಕ್ಸ್ ಪದಕ ವಿಜೇತ ನೀರಜ್ ಚೋಪ್ರಾ ಅವರು ಇಂದು ನಗರದಲ್ಲಿ ಸಿಎಂ ಸಿದ್ದರಾಮಯ್ಯರನ್ನು ಭೇಟಿ ಮಾಡಿದ್ದಾರೆ.
ಮುಖ್ಯಮಂತ್ರಿಗಳ ಕಾವೇರಿ ನಿವಾಸದಲ್ಲಿ ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ. ಈ ವೇಳೆ ಬಂಗಾರದ ಹುಡುಗ ನೀರಜ್ ಚೋಪ್ರಾಗೆ ಸಿಎಂ ಸಿದ್ದರಾಮಯ್ಯ ಶುಭ ಹಾರೈಸಿದ್ದಾರೆ. ಈ ವೇಳೆ ಒಲಂಪಿಕ್ ಅಸೋಸಿಯೇಷನ್ ಅಧ್ಯಕ್ಷ, ವಿಧಾನ ಪರಿಷತ್ ಸದಸ್ಯ ಗೋವಿಂದರಾಜು ಕೂಡ ಈ ವೇಳೆ ಇದ್ದರು.