ಬೆಂಗಳೂರು: ಕೇಂದ್ರ ಸರ್ಕಾರದ ಅಧೀನದಲ್ಲಿ ಕಾರ್ಯನಿರ್ವಹಿಸುವ ನ್ಯಾಷನಲ್ ಇ ಗವರ್ನನ್ಸ್ ಡಿವಿಷನ್ ನಲ್ಲಿ (NeGD Recruitment 2025) ಖಾಲಿ ಇರುವ 33 ಹುದ್ದೆಗಳ ನೇಮಕಾತಿಗಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆನ್ ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಲು ಅವಕಾಶ ನೀಡಲಾಗಿದೆ. ಕನ್ಸಲ್ಟಂಟ್, ಸೀನಿಯರ್ ಕನ್ಸಲ್ಟಂಟ್, ಹೆಡ್ (SeMT) ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದ್ದು, ಆಗಸ್ಟ್ 20 ಅರ್ಜಿಗಳನ್ನು ಸಲ್ಲಿಸಲು ಕೊನೆಯ ದಿನವಾಗಿದೆ.
ಹುದ್ದೆಗಳ ವಿವರ
ನೇಮಕಾತಿ ಸಂಸ್ಥೆ: ನ್ಯಾಷನಲ್ ಇ ಗವರ್ನನ್ಸ್ ಡಿವಿಷನ್
ಒಟ್ಟು ಹುದ್ದೆಗಳು: 33
ಅರ್ಜಿ ಸಲ್ಲಿಕೆ ವಿಧಾನ: ಆನ್ ಲೈನ್
ಅರ್ಜಿ ಸಲ್ಲಿಕೆಗೆ ಕೊನೆಯ ದಿನ: ಆಗಸ್ಟ್ 20
B.Tech/B.E, M.E/M.Tech, MBA/PGDM, MCA, MS ಕೋರ್ಸ್ ಗಳನ್ನು ಮುಗಿಸಿದವರು ಅರ್ಜಿ ಸಲ್ಲಿಸಲು ಅರ್ಹರಾಗಿದ್ದಾರೆ. ಆಯಾ ಹುದ್ದೆಗಳಿಗೆ ಅನುಗುಣವಾಗಿ ವಿದ್ಯಾರ್ಹತೆಯನ್ನು ಪರಿಗಣಿಸಲಾಗುತ್ತದೆ. ಗರಿಷ್ಠ 55 ವರ್ಷದೊಳಗಿನವರು ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.
ಯಾವ ಹುದ್ದೆ ಎಷ್ಟು ಖಾಲಿ?
ಕನ್ಸಲ್ಟಂಟ್- 14
ಸೀನಿಯರ್ ಕನ್ಸಲ್ಟಂಟ್- 12
ಹೆಡ್ (SeMT)- 07
ಅರ್ಜಿ ಸಲ್ಲಿಸುವುದು ಹೇಗೆ?
ಮೊದಲಿಗೆ ಅಧಿಕೃತ ವೆಬ್ ಸೈಟ್ ಆಗಿರುವ dic.gov.in. ಗೆ ಭೇಟಿ ನೀಡಬೇಕು
ಕನ್ಸಲ್ಟಂಟ್, ಸೀನಿಯರ್ ಕನ್ಸಲ್ಟಂಟ್, ಹೆಡ್ ವಿಭಾಗವನ್ನು ಆಯ್ಕೆ ಮಾಡಬೇಕು
ಅಧಿಸೂಚನೆಯನ್ನು ಓದಿ, ಅಗತ್ಯ ದಾಖಲೆಗಳನ್ನು ಸಿದ್ಧಪಡಿಸಬೇಕು
ಆನ್ ಲೈನ್ ಮೂಲಕ ಅರ್ಜಿಯನ್ನು ಭರ್ತಿ ಮಾಡಬೇಕು
ಅಗತ್ಯ ದಾಖಲೆಗಳೊಂದಿಗೆ ಅರ್ಜಿಯನ್ನು ಸಲ್ಲಿಸಬೇಕು
ಫ್ಯೂಚರ್ ರೆಫರೆನ್ಸಿಗಾಗಿ ಅರ್ಜಿಯ ಪ್ರತಿ ತೆಗೆದಿಟ್ಟುಕೊಳ್ಳಬೇಕು