ಬೆಂಗಳೂರು: ಪಕ್ಕದ ಮನೆಯವರ ಜಗಳದಿಂದಾಗಿ 8 ವರ್ಷದ ಬಾಲಕ ಸಾವನ್ನಪ್ಪಿರುವ ಘಟನೆ ನಡೆದಿದೆ.
ರಮಾನಂದ (8) ಕೊಲೆಯಾಗಿರುವ ದುರ್ದೈವ ಬಾಲಕ ಎನ್ನಲಾಗಿದೆ. ಮತ್ತೂರು ಎಂಬಾತನಿಂದ ಈ ಕೃತ್ಯ ನಡೆದಿದೆ. ಬಾಲಕ ರಮಾನಂದ ಕುಟುಂಬ ಮತ್ತು ಮತ್ತೂರು ಕುಟುಂಬಗಳ ಮಧ್ಯೆ ಆಗಾಗ ಗಲಾಟೆ ನಡೆಯುತ್ತಿತ್ತು. ಹೀಗಾಗಿ ಆರೋಪಿಯು ಬಾಲಕನನ್ನು ಕಿಡ್ನಾಪ್ ಮಾಡಿ ಕೊಲೆ ಮಾಡಿದ್ದಾನೆ ಎನ್ನಲಾಗಿದೆ.
ಕೊಲೆ ಮಾಡಿ ಮೃತದೇಹವನ್ನು ಚೀಲದಲ್ಲಿ ಕಟ್ಟಿ ಆರೋಪಿ ಎಸೆದಿದ್ದಾನೆ ಎನ್ನಲಾಗಿದೆ. ರಾಯಸಂದ್ರ ಕೆರೆ ಬಳಿ ಮೃತದೇಹ ಪತ್ತೆಯಾಗಿದೆ. ನಿನ್ನೆ ರಾತ್ರಿ ಬಾಲಕನ ಮೃತದೇಹ ಪತ್ತೆಯಾಗಿದೆ. ಈ ಕುರಿತು ಪರಪ್ಪನ ಅಗ್ರಹಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸದ್ಯ ಆರೋಪಿ ಮತ್ತೂರು ಬಂಧಿಸಿ ಪೊಲೀಸರು ವಿಚಾರಣೆ ನಡೆಸಿದ್ದಾರೆ.