ಉಡುಪಿ: ನೇಜಾರಿನಲ್ಲಿ ನಡೆದ ನಾಲ್ವರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಶನಿವಾರ ವಿಚಾರಣೆ ನಡೆಸಿದ್ದು, ಮುಂದಿನ ವಿಚಾರಣೆಯನ್ನು ಜು. 31ಕ್ಕೆ ನಿಗದಿಪಡಿಸಿ ನ್ಯಾಯಾಲಯ ಆದೇಶಿಸಿದೆ.
ಎರಡನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶ ಸಮೀವುಲ್ಲಾ ಅವರ ಪೀಠದಲ್ಲಿ ನಡೆದ ಕಲಾಪದಲ್ಲಿ ಆರೋಪಿ ಪರ ವಕೀಲರಿಗೆ ದೋಷಾರೋಪಣೆ ಪಟ್ಟಿಯನ್ನು ನೀಡಲಾಯಿತು. ಆರೋಪಿ ಪ್ರವೀಣ್ ಅರುಣ್ ಚೌಗುಲೆಯನ್ನು ವೀಡಿಯೋ ಕಾನ್ಸರೆನ್ಸ್ ಮೂಲಕ ಹಾಜರುಪಡಿಸಿ, ನ್ಯಾಯಾಂಗ ಬಂಧನವನ್ನು ವಿಸ್ತರಿಸಲಾಯಿತು. ಸರಕಾರದ ಪರವಾಗಿ ವಿಶೇಷ ಸರಕಾರಿ ಅಭಿಯೋಜಕ ಶಿವಪ್ರಸಾದ್ ಆಳ್ವ, ಆರೋಪಿಯ ಪರವಾಗಿ ಡಿಫೆನ್ಸ್ ಕೌನ್ಸಿಲ್ ಮುಖ್ಯಸ್ಥ ರಾಜು ಪೂಜಾರಿ ಹಾಜರಿದ್ದರು.
ಮಲ್ಪೆ ಪೊಲೀಸ್ ಠಾಣಾ ವ್ಯಾಪ್ತಿಯ ನೇಜಾರು ಮನೆಯೊಂದರಲ್ಲಿ ತಾಯಿ ಮತ್ತು ಮೂವರು ಮಕ್ಕಳ ಹತ್ಯೆ ಪ್ರಕರಣ ಇಡೀ ರಾಜ್ಯವನ್ನೇ ಬೆಚ್ಚಿ ಬೀಳಿಸಿತ್ತು.