ಬೆಂಗಳೂರು, : ನೇಪಾಳದಲ್ಲಿ ಉಂಟಾದ ಭಾರಿ ಜಲಪ್ರಳಯದಲ್ಲಿ ಸಿಲುಕಿರುವ ಕನ್ನಡಿಗರ ರಕ್ಷಣಾ ಕಾರ್ಯಾಚರಣೆಯ ಬಗ್ಗೆ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮಾಹಿತಿ ನೀಡಿದ್ದಾರೆ. ಪ್ರಸ್ತುತ, ಇನ್ನೂ 13 ಕನ್ನಡಿಗರು ಪತ್ತೆಯಾಗಿಲ್ಲ ಎಂದು ಅವರು ಖಚಿತಪಡಿಸಿದ್ದಾರೆ. ಉಳಿದ ಕೆಲವರನ್ನು ಪತ್ತೆ ಹಚ್ಚಲಾಗಿದೆ ಎಂದಿದ್ದಾರೆ.
ಕರ್ನಾಟಕದ ಅಧಿಕಾರಿಗಳು ವಿದೇಶಾಂಗ ವ್ಯವಹಾರಗಳ ಸಚಿವಾಲಯ (ಎಂಇಎ) ಮತ್ತು ಕೇಂದ್ರ ಸರ್ಕಾರದ ಜೊತೆ ನಿರಂತರ ಸಂಪರ್ಕದಲ್ಲಿದ್ದಾರೆ. ಅಲ್ಲದೆ, ಸ್ಥಳೀಯವಾಗಿ ಕನ್ನಡಿಗರನ್ನು ಸಂಪರ್ಕಿಸಲು ಮತ್ತು ರಕ್ಷಣಾ ಕಾರ್ಯಕ್ಕೆ ನೆರವಾಗಲು ರಾಜ್ಯ ಸರ್ಕಾರದಿಂದ ಪ್ರತಿನಿಧಿಗಳನ್ನು ನೇಪಾಳಕ್ಕೆ ಕಳುಹಿಸಲಾಗಿದೆ. ನಾಪತ್ತೆಯಾದವರಲ್ಲಿ ಒಂದು ತಂಡವನ್ನು ಗುರುತಿಸಲು ಇನ್ನೂ ಸಾಧ್ಯವಾಗಿಲ್ಲ ಎಂದು ಅವರು ತಿಳಿಸಿದ್ದಾರೆ.
ಕೆಲವು ಕನ್ನಡಿಗರೊಂದಿಗೆ ತಾವು ಈಗಾಗಲೇ ಮಾತನಾಡಿದ್ದು, ಭಾನುವಾರ ರಾತ್ರಿ ಖಾಸಗಿ ಕೆಲಸದ ನಿಮಿತ್ತ ದೆಹಲಿಗೆ ಹೋಗಿದ್ದಾಗಲೂ, ಈ ವಿಷಯದ ಕುರಿತು ಸಂಬಂಧಪಟ್ಟವರ ಜೊತೆ ಚರ್ಚೆ ನಡೆಸಿದ್ದಾಗಿ ಅವರು ಮಾಹಿತಿ ನೀಡಿದ್ದಾರೆ. ನೇಪಾಳದಲ್ಲಿ ಸಿಲುಕಿರುವ ಕನ್ನಡಿಗರನ್ನು ಸುರಕ್ಷಿತವಾಗಿ ಕರೆತರಲು ಎಲ್ಲಾ ರೀತಿಯ ಪ್ರಯತ್ನಗಳನ್ನು ಮಾಡಲಾಗುತ್ತಿದೆ ಎಂದು ಅವರು ಹೇಳಿದ್ದಾರೆ.
ಇದನ್ನೂ ಓದಿ : “ಮಹಿಳೆಯರು ಮನೆಯೊಳಗೇ ಇರಬೇಕು” : ಸ್ತ್ರೀಯರನ್ನು ಆಭರಣಕ್ಕೆ ಹೋಲಿಸಿ ಮುಸ್ಲಿಂ ಧರ್ಮಗುರು ವಿವಾದಾತ್ಮಕ ಹೇಳಿಕೆ!



















