ಬೆಂಗಳೂರು: ಅಲ್ಲು ಅರ್ಜುನ್ ನಟನೆಯ ‘ಪುಷ್ಪ 2’ ಸಿನಿಮಾ ಭರ್ಜರಿ ಪ್ರದರ್ಶನ ಕಂಡು ಸಾಕಷ್ಟು ಹೆಸರು ಮಾಡಿದೆ. ಡಿಸೆಂಬರ್ 5 ರಂದು ಈ ಚಿತ್ರ ಬಿಡುಗಡೆಯಾಗಿತ್ತು. ಆನಂತರ ಹಲವಾರು ದಾಖಲೆಗಳನ್ನು ಬರೆದಿತ್ತು. ‘ಕೆಜಿಎಫ್ 2’ ಚಿತ್ರದ ನಂತರ ಯಾವುದೇ ಸಿನಿಮಾ ಗಳಿಸದಷ್ಟು ಹಣವನ್ನು ‘ಪುಷ್ಪ 2’ ಸಿನಿಮಾ ಬಾಕ್ಸ್ ಆಫೀಸ್ನಲ್ಲಿ ಕಲೆಕ್ಷನ್ ಮಾಡಿತ್ತು. ಈಗ ಒಟಿಟಿಗೆ ಎಂಟ್ರಿ ಕೊಡಲು ಮುಂದಾಗಿದೆ.
‘ನೆಟ್ಫ್ಲಿಕ್ಸ್’ ನ್ನು ಪುಷ್ಪ ಕಬ್ಜ ಮಾಡಿಕೊಂಡಿದೆ ಎಂದು ಹೇಳಿಕೊಂಡಿದೆ. ನೆಟ್ಫ್ಲಿಕ್ಸ್ ಇಂಡಿಯಾದ ಅಧಿಕೃತ ಸಾಮಾಜಿಕ ಜಾಲತಾಣದಲ್ಲಿ ‘ಪುಷ್ಪ 2’ ಸಿನಿಮಾದ ಕುರಿತು ಮಾಹಿತಿಗಳು ಹರಿದಾಡುತ್ತಿವೆ. ‘ಈ ಪೇಜ್ ಈಗ ಪುಷ್ಪನ ಆಡಳಿತಕ್ಕೆ ಒಳಪಟ್ಟಿದೆ’ ಎಂದು ಬರೆಯಲಾಗಿದೆ. ಆ ಮೂಲಕ ‘ಪುಷ್ಪ 2’ ಸಿನಿಮಾಕ್ಕೆ ವಿಶೇಷ ಗೌರವ ಸಿಕ್ಕಿದೆ.
‘ಪುಷ್ಪ 2’ ಚಿತ್ರಕ್ಕೆ 25 ನಿಮಿಷಗಳ ಹೆಚ್ಚುವರಿ ದೃಶ್ಯಗಳನ್ನು ಸೇರಿಸಿ ನೆಟ್ಫ್ಲಿಕ್ಸ್ನಲ್ಲಿ ಬಿಡುಗಡೆ ಮಾಡಲಾಗಿದೆ. ‘ಪುಷ್ಪ 2’ ಸಿನಿಮಾ ಕನ್ನಡ, ತೆಲುಗು, ತಮಿಳು, ಮಲಯಾಳಂ ಭಾಷೆಗಳಲ್ಲಿ ನೆಟ್ಫ್ಲಿಕ್ಸ್ನಲ್ಲಿ ತೆರೆಗೆ ಬಂದಿದೆ.