ನವದೆಹಲಿ: ಭಾರತೀಯ ರಿಸರ್ವ್ ಬ್ಯಾಂಕ್ಗೆ ನೂತನ ಗವರ್ನರ್ ಆಗಿ ಸಂಜಯ್ ಮಲ್ಹೋತ್ರಾ ನೇಮಕವಾಗಿದ್ದಾರೆ.
ಕೇಂದ್ರ ಕಂದಾಯ ಸಚಿವಾಲಯದ ಕಾರ್ಯದರ್ಶಿಯಾಗಿ ಸಂಜಯ್ ಕಾರ್ಯ ನಿರ್ವಹಿಸುತ್ತಿದ್ದರು. ಆರ್ ಬಿಐ ಗವರ್ನರ್ ಆಗಿರುವ ಶಕ್ತಿಕಾಂತ ದಾಸ್ ಅವರ ಸೇವಾವಧಿ ಡಿ. 10ಕ್ಕೆ ಅಂತ್ಯವಾಗಲಿದೆ. ಮಲ್ಹೋತ್ರಾ ಅವರ ಸೇವಾವಧಿ ಮೂರು ವರ್ಷ ಕಾಲ ಇರಲಿದೆ.
ಸಂಜಯ್ ಮಲ್ಹೋತ್ರಾ ಅವರು ರಾಜಸ್ಥಾನ ಕೇಡರ್ನ 1990ರ ಬ್ಯಾಚ್ನ ಐಎಎಸ್ ಅಧಿಕಾರಿಯಾಗಿದ್ದಾರೆ. ಐಐಟಿ ಕಾನ್ಪುರ್ನಲ್ಲಿ ಕಂಪ್ಯೂಟರ್ ಸೈನ್ಸ್ ಎಂಜಿನಿಯರಿಂಗ್ ಮಾಡಿದ್ದಾರೆ. ಅಮೆರಿಕದ ಪ್ರಿನ್ಸ್ ಟನ್ ಯೂನಿವರ್ಸಿಟಿಯಲ್ಲಿ ಪಬ್ಲಿಕ್ ಪಾಲಿಸಿಯಲ್ಲಿ ಸ್ನಾತಕೋತ್ತರ ವ್ಯಾಸಂಗ ಮಾಡಿದ್ದಾರೆ. ಹಣಕಾಸು ಸಚಿವಾಲಯದಲ್ಲಿ ರೆವೆನ್ಯೂ ಕಾರ್ಯದರ್ಶಿಯಾಗಿ ಸದ್ಯ ಸೇವೆ ಸಲ್ಲಿಸುತ್ತಿದ್ದಾರೆ.
ವಿದ್ಯುತ್ ಸಚಿವಾಲಯದಲ್ಲಿ ಅಪರ ಕಾರ್ಯದರ್ಶಿಯಾಗಿದ್ದ ಅವರು 3 ಲಕ್ಷ ಕೋಟಿ ರೂ ಮೊತ್ತದ ವಿದ್ಯುತ್ ವಿತರಣೆಯಲ್ಲಿ ಸುಧಾರಣಾ ಕ್ರಮಗಳನ್ನು ಜಾರಿಗೆ ತಂದಿದ್ದರು. ಅವರ ಪರಿಣಿತಿ ಪರಿಗಣಿಸಿ ಸರ್ಕಾರ ಈ ನಿರ್ಧಾರ ಕೈಗೊಂಡಿದೆ.