ರಾಜ್ಯದಲ್ಲಿ ಕೊರೊನಾ ಆತಂಕದ ನಡುವೆ ಹೊಸದಾದ ಮಾರ್ಗಸೂಚಿಯನ್ನು ಇಲಾಖೆಯ ವತಿಯಿಂದಲೇ ಬಿಡುಗಡೆ ಮಾಡಲಾಗಿದೆ.
ಹೊಸ ಮಾರ್ಗಸೂಚಿಯಲ್ಲಿ ವೃದ್ಧರು, ಗರ್ಭಿಣಿಯರು ಮಾಸ್ಕ್ ಧರಿಸುವಂತೆ ತಿಳಿಸಲಾಗಿದೆ. ಇದರ ಜೊತೆಗೆ ಸಾಮಾಜಿಕ ಅಂತರ ಕಾಯ್ದುಕೊಳ್ಳಬೇಕು. ಕೆಮ್ಮು, ಜ್ವರ ಅಥವಾ ಶೀತದ ಗುಣಲಕ್ಷಣಗಳು ಕಂಡು ಬಂದರೆ, ತಕ್ಷಣವೇ ಪರೀಕ್ಷೆಗೆ ಒಳಪಡಬೇಕೆಂದು ಮಾರ್ಗಸೂಚಿಯಲ್ಲಿ ಉಲ್ಲೇಖಿಸಲಾಗಿದೆ.