ಬೆಂಗಳೂರು : ವಿಜಯೇಂದ್ರ ಯಡಿಯೂರಪ್ಪ ಅವರು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷರಾಗಿ ಮುಂದುವರಿದರೇ ನಾವು ಹೊಸ ಪಕ್ಷ ಸ್ಥಾಪನೆ ಮಾಡುತ್ತೇವೆ ಎಂದು ಬಿಜೆಪಿಯ ಉಚ್ಚಾಟಿತ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೊಸ ಬಾಂಬ್ ಸಿಡಿಸಿದ್ದಾರೆ.
ವರದಿಗಾರರಿಗೆ ಪ್ರತಿಕ್ರಿಯಿಸಿ ಮಾತನಾಡಿದ ಯತ್ನಾಳ್, ಹೊಸ ಪಕ್ಷ ಕಟ್ಟುವುದರಲ್ಲಿ ಯಾವುದೇ ಸಂಶಯ ಬೇಡ. ಹಿಂದುತ್ವ ಮತ್ತು ಅಭಿವೃದ್ಧಿ ಆಧಾರದ ಮೇಲೆ ಹೊಸ ಪಕ್ಷ ಕಟ್ಟುತ್ತೇವೆ. ನಮ್ಮ ಹೊಸ ಪಕ್ಷಕ್ಕೆ ಕಾಂಗ್ರೆಸ್, ಬಿಜೆಪಿ ಎರಡೂ ಪಕ್ಷಗಳಿಂದ ಬರ್ತಾರೆ. ಮುಂದೆ ರಾಜ್ಯದಲ್ಲಿ ಆಡಳಿತ ಮಾಡುತ್ತೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಶಿವಮೊಗ್ಗದಲ್ಲಿ ಸಿಗಂದೂರು ಸೇತುವೆ ಉದ್ಘಾಟನೆಗೆ ಸಿಎಂ ಸಿದ್ದರಾಮಯ್ಯ ಅವರು ಗೈರಾಗಿರುವ ಕುರಿತಾದ ರಹಸ್ಯವನ್ನು ಬಿಚ್ಚಿಟ್ಟ ಯತ್ನಾಳ್, ಕಾರ್ಯಕ್ರಮದ ವಿಚಾರವಾಗಿ ಸಿಎಂಗೆ ಬರಬೇಡ ಅಂತ ಹೇಳಿದ್ದೇ ಯಡಿಯೂರಪ್ಪ ಎಂದು ಆರೋಪಿಸಿದ್ದಾರೆ.



















