ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಸಿನಿಮಾ-ಮನರಂಜನೆ

ಹೊಸ ಪೊಲೀಸ್ ಸ್ಟೋರಿ ‘ಶೇಷ 2016’..!

February 13, 2026
Share on WhatsappShare on FacebookShare on Twitter

ಬೆಂಗಳೂರು : ಪ್ರಮೋದ್ ಶೆಟ್ಟಿ , ಜಾನ್ ಕೈಪ್ಪಲ್ಲಿ ಹಾಗೂ ಅರ್ಚನಾ ಕೊಟ್ಟಿಗೆ ಅಭಿನಯದ “ಶೇಷ 2016” ಚಿತ್ರ ಬಿಡುಗಡೆ ಮುನ್ನ Amazon ಪ್ರೈಮ್ ಸಂಸ್ಥೆಯು ಓಟಿಟಿ ಗೆ ಒಳ್ಳೆ ಮೊತ್ತಕ್ಕೆ ಪಡೆದುಕೊಂಡಿದೆ.

ಬೆಳ್ಳಿಪರದೆ ಮೇಲೆ ಮತ್ತೊಮ್ಮೆ ಪೋಲಿಸ್ ಕಥಾನಕ ಚಿತ್ರ ಬರಲು ಸಜ್ಜಾಗಿದೆ. ಕನ್ನಡ ಹಾಗೂ ಮಲಯಾಳಂ ಭಾಷೆಗಳಲ್ಲಿ ಚಿತ್ರೀಕರಣವಾದ ಈ ಸಿನಿಮಾದಲ್ಲಿ ಪೊಲೀಸ್ ಇಲಾಖೆಯಲ್ಲಿರುವಂತಹ ಭ್ರಷ್ಟ ಹಾಗೂ ಪ್ರಾಮಾಣಿಕತೆಯ ಸಂಘರ್ಷದ ನಡುವೆ ಸಾಗುವ ಕುತೂಹಲಕಾರಿ ಕಥೆಯನ್ನು ಒಳಗೊಂಡಿದೆಯಂತೆ. ಮರಡಿಗುಡ್ಡ ಎಂಟರ್ಟೈನ್ಮೆಂಟ್ಸ್ ಮೂಲಕ ಉಮೇಶ್ ಗೌಡ , ಮಂಜುವಾಣಿ .ವಿ.ಎಸ್ ಹಾಗೂ ವೀಣಾ. ಎಸ್ ನಿರ್ಮಾಣದ ಈ ಚಿತ್ರವನ್ನು ಯುವ ಪ್ರತಿಭೆ ಪ್ರದೀಪ್ ಅರಸೀಕೆರೆ ನಿರ್ದೇಶನ ಮಾಡಿದ್ದಾರೆ.

ಈಗ ಚಿತ್ರದ ಬಿಡುಗಡೆ ದಿನಾಂಕ ಹಾಗೂ ಓ ಟಿಟಿ ಪ್ಲಾಟ್ಫಾರ್ಮ್ ರೈಟ್ ಪಡೆದಿರುವ ಸಂಸ್ಥೆಯ ಬಗ್ಗೆ ಮಾಹಿತಿಯನ್ನು ನೀಡಲು ಇತ್ತೀಚಿಗೆ ಚಿತ್ರತಂಡ ಜಿಟಿ ಮಾಲ್ ನಲ್ಲಿರುವ ಉತ್ಸವ ಲೆಗಸಿಯಲ್ಲಿ ಪತ್ರಿಕಾಗೋಷ್ಠಿಯನ್ನು ಯೋಜನೆ ಮಾಡಿತ್ತು. ಇನ್ನು ಈ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಪೊಲೀಸ್ ಇಲಾಖೆಯ ಎಸಿಪಿ ಗಣೇಶ್ ಹಾಗೂ ಮೋಹನ್ ಕುಮಾರ್ ದಾನಪ್ಪ ರವರು ಆಗಮಿಸಿ ಚಿತ್ರದ ಬಿಡುಗಡೆ ದಿನಾಂಕದ ಪೋಸ್ಟರ್ ಲಾಂಚ್ ಮಾಡಿದರು.

ತದನಂತರ ಎಸಿಪಿ ಗಣೇಶ್ ಮಾತನಾಡುತ್ತ ಸಾಮಾನ್ಯವಾಗಿ ಪೊಲೀಸ್ ಪಾತ್ರಗಳನ್ನು ನೆಗೆಟಿವ್ ಆಗಿ ತೋರಿಸುವುದೇ ಹೆಚ್ಚು , ಈ ಚಿತ್ರತಂಡ ನನ್ನನ್ನು ಈ ಕಾರ್ಯಕ್ರಮಕ್ಕೆ ಆಹ್ವಾನಿಸಿದಾಗ ಒಂದಷ್ಟು ಕಥೆಯ ಬಗ್ಗೆ ಮಾಹಿತಿ ಪಡೆದುಕೊಂಡೆ. ಪೊಲೀಸ್ ಇಲಾಖೆಯಲ್ಲಿ ಇರುವಂತಹ ಭ್ರಷ್ಟ ವ್ಯಕ್ತಿಗಳ ಜೊತೆಗೆ ಒಳ್ಳೆಯ ಅಧಿಕಾರಿಗಳ ಬಗ್ಗೆ ಕೂಡ ಸಿನಿಮಾದಲ್ಲಿ ತೋರಿಸಿದ್ದಾರಂತೆ. ಜನರಲ್ಲಿ ಜಾಗೃತಿ ಮೂಡಿಸುವ ಸಮಾಜಕ್ಕೆ ಉತ್ತಮ ಚಿತ್ರಗಳನ್ನು ಕೊಡುವ ಕೆಲಸ ಆಗಬೇಕು. ನಾನು ಮೂಲತಃ ಹೊಸಪೇಟೆಯವನು. ನಟ ಅಜಯ್ ರಾವ್ ನನ್ನ ಆತ್ಮೀಯ ಗೆಳೆಯ , ನಾನು ಅವನ ಸಿನಿಮಾ ಬದುಕಿನ ಬಗ್ಗೆ ಹತ್ತಿರದಿಂದ ನೋಡಿದ್ದೇನೆ. ಜನರನ್ನ ಸಿನಿಮಾ ಗೆ ಕರೆ ತರುವುದೇ ಬಹಳ ಕಷ್ಟವಾಗಿದೆ. ಕಲಾವಿದರಾಗಿ ಗುರುತಿಸಿಕೊಳ್ಳುವುದು ಸುಲಭದ ಮಾತಲ್ಲ , ಅವರು ದೈವದಿಂದ ವರ ಪಡೆದ ಪುತ್ರರು. ಓದಿ ಕೆಲಸ ಗಿಟ್ಟಿಸಿಕೊಳ್ಳುವುದು ಆದರೆ ನಟನೆ ಮಾಡುವುದು ಬಹಳ ಕಷ್ಟ. ಎಲ್ಲರೂ ಮೊಬೈಲ್ ನಲ್ಲಿ ನೋಡುವುದಕ್ಕಿಂತ ಚಿತ್ರಮಂದಿರಕ್ಕೆ ಬಂದು ಸಿನಿಮಾ ನೋಡಿ. ಈಗ ಪರಸಿ ಕಡಿವಾಣದ ಬಗೆಯು ಚರ್ಚೆ ನಡೆಯುತ್ತಿದೆ , ಈ ಚಿತ್ರವನ್ನು ನೋಡಿ ಎಂದು ಹೇಳಿದರು.

ಮತ್ತೊಬ್ಬ ಅಧಿಕಾರಿ ರಾಜ್ಯ ಪೊಲೀಸ್ ದೂರುಗಳ ಪ್ರಾಧಿಕಾರದ ಮುಖ್ಯಸ್ಥ ಮೋಹನ್ ಕುಮಾರ್ ದಾನಪ್ಪ ಮಾತನಾಡುತ್ತಾ ನಾನು ಉತ್ತರ ಕರ್ನಾಟಕ ಭಾಗದವನು, ನಾನು ನನ್ನ ಫ್ಯಾಮಿಲಿ ಜೊತೆ ಹೋಗಿ ಕನ್ನಡ ಸಿನಿಮಾಗಳನ್ನ ನೋಡುತ್ತೇನೆ. ಕನ್ನಡದ ಉತ್ತಮ , ಸಾಮಾಜಿಕ ಕಳಕಳಿ ಇರುವಂತಹ ಸಿನಿಮಾ ನೋಡಿ ಪ್ರೋತ್ಸಾಹಿಸಿ ಎಂದರು.

ಇನ್ನು ಈ ಚಿತ್ರದ ಮುಖ್ಯ ಭೂಮಿಕೆಯಲ್ಲಿ ಅಭಿನಯಿಸಿರುವ ಪ್ರಮೋದ್ ಶೆಟ್ಟಿ , ಜಾನ್ ಕೈಪ್ಪಲ್ಲಿ ಕಾಂಬಿನೇಷನ್ನ ಈ “ಶೇಷ 2016” ಚಿತ್ರದ ಓಟಿಟಿ ರೈಟ್ಸ್ ಅನ್ನ ಅಮೆಜಾನ್ ಪ್ರೈಮ್ ವೀಡಿಯೋಸ್ ಒಳ್ಳೆ ಮೊತ್ತಕ್ಕೆ ಪಡೆದುಕೊಂಡಿದೆ. ಹೈದರಾಬಾದ್ ಮೂಲದ ಡಾ. ರಾಜೀವ್ ಹಾಗೂ ಕ್ರಾಂತಿ ಪ್ರಸಾದ್ ಇದರ ಜವಾಬ್ದಾರಿಯನ್ನು ಹೊತ್ತುಕೊಂಡಿದ್ದು , ನಂತರ ಪ್ರಸಾದ್ ಮಾತನಾಡುತ್ತಾ ಸರಿ ಸುಮಾರು ಈಗಾಗಲೇ 1880 ಚಿತ್ರಗಳ ಹಕ್ಕನ್ನು ಪಡೆದುಕೊಂಡಿದ್ದೇವೆ. ಉತ್ತಮ ಕ್ವಾಲಿಟಿ , ಸದಭಿರುಚಿಯ ಚಿತ್ರಗಳು ಬಂದರೆ ಖಂಡಿತ ನಾವು ಸಪೋರ್ಟ್ ಮಾಡುತ್ತೇವೆ. ಹಾಗಾಗಿಯೇ ನಾವು ಈಗ ಶೇಷ 2016 ಚಿತ್ರದ ರೈಟ್ಸ್ ಪಡೆಯುವ ಮೂಲಕ ಚಿತ್ರ ತಂಡಕ್ಕೆ ಬೆನ್ನೆಲುಬಾಗಿ ನಿಂತಿದ್ದೇವೆ ಎಂದರು. ಅದೇ ರೀತಿ ಡಾ. ರಾಜೀವ್ ಕನ್ನಡ ಬರೆದಿದ್ದರು ಇಂಗ್ಲಿಷ್ ನಲ್ಲಿ ಮಾತನಾಡುತ್ತಾ ಒಳ್ಳೆಯ ಚಿತ್ರಗಳಿಗೆ ನಮ್ಮ ಬೆಂಬಲ ಇದ್ದೇ ಇರುತ್ತೆ ಎಂದರು.

ಈ ಚಿತ್ರದ ನಿರ್ದೇಶಕ ಪ್ರದೀಪ್ ಅರಸೀಕೆರೆ ಮಾತನಾಡುತ್ತಾ ಇದು ನನ್ನ ಮೊದಲ ನಿರ್ದೇಶನದ ಚಿತ್ರ. ಒಳ್ಳೇದು ಕೆಟ್ಟದರ ಸಂಘರ್ಷಗಳ ನಂತರ ಉಳಿದಿರುವದನ್ನ ಶೇಷ ಎನ್ನುತ್ತಾರೆ. 2016ರ ಕಾಲದ ಘಟ್ಟದಲ್ಲಿ ಕರ್ನಾಟಕ ಹಾಗೂ ಕೇರಳ ಬಾರ್ಡರ್ ನಲ್ಲಿ ನಡೆಯುವಂತಹ ಕಾಲ್ಪನಿಕ ಘಟನೆಗಳ ಸುತ್ತ ಬೆಸೆದುಕೊಂಡು ಮಾಡಿರುವಂತಹ ಚಿತ್ರ ಇದಾಗಿದೆ. ನನ್ನನ್ನ ನಂಬಿ ನಿರ್ಮಾಣ ಮಾಡಿರುವ ನಿರ್ಮಾಪಕರಿಗೆ ನಾನು ಸದಾ ಋಣಿಯಾಗಿರುತ್ತೇನೆ. ನಾನು ಈ ಹಿಂದೆ ಕೆ.ಇ.ಬಿ ಯಲ್ಲಿ ಕೆಲಸ ಮಾಡುತ್ತಿದ್ದೆ , ಸಿನಿಮಾ ಮೇಲಿನ ಆಸಕ್ತಿಯಿಂದ ಕೆಲಸ ಬಿಟ್ಟು ಈ ಚಿತ್ರವನ್ನು ನಿರ್ದೇಶನ ಮಾಡಿದ್ದೇನೆ. ಈ ಸಬ್ಜೆಕ್ಟ್ ಬಗ್ಗೆ ಬಹಳಷ್ಟು ಚರ್ಚೆ ಮಾಡಿ ಪೊಲೀಸ್ ಇಲಾಖೆಯಲ್ಲಿ ಕೆಲವು ಅಧಿಕಾರಿಗಳು ನಡೆಸುತ್ತಿರುವ ಭ್ರಷ್ಟ ಚಟುವಟಿಕೆಗಳ ಬಗ್ಗೆ ಈ ಚಿತ್ರ ಮಾಡಿದ್ದೇನೆ. ಸಾಮಾನ್ಯವಾಗಿ ನಾವು ಗಮನಿಸಿದರೆ ಎಲ್ಲದಕ್ಕೂ ಒಂದೊಂದು ಪರ್ಯಾಯ ವ್ಯವಸ್ಥೆ ಇದ್ದೆ ಇರುತ್ತದೆ. ಗೌರ್ನಮೆಂಟ್ ಹಾಸ್ಪಿಟಲ್ ಇಲ್ಲದಿದ್ದರೆ ಪ್ರೈವೇಟ್, ಗೌರ್ಮೆಂಟ್ ಸ್ಕೂಲ್ ಇಲ್ಲದಿದ್ದರೆ ಪ್ರೈವೇಟ್ ಹೀಗೆ ಆದರೆ ಸರ್ಕಾರದ ಪೊಲೀಸ್ ಇಲಾಖೆಯಲ್ಲಿ ಬದಲಿ ವ್ಯವಸ್ಥೆ ಇಲ್ಲ. ಇಂಥ ಇಲಾಖೆಯಲ್ಲಿ ನಡೆಯುವ ಭ್ರಷ್ಟಾಚಾರದಿಂದ ಜನರು ಹೇಗೆ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಏನೆಲ್ಲಾ ಕಷ್ಟ , ಕಾರ್ಪಣ್ಯಗಳು ಎದುರಾಗುತ್ತದೆ ಎಂಬ ಸೂಕ್ಷ್ಮ ವಿಚಾರವನ್ನು ಈ ಚಿತ್ರದ ಮೂಲಕ ಹೇಳುವ ಪ್ರಯತ್ನ ಮಾಡಿದ್ದೇನೆ.

ನೈಟ್ ಎಫೆಕ್ಟ್ ಜೊತೆ ಮಳೆಯಲ್ಲಿ ಹೆಚ್ಚು ಚಿತ್ರೀಕರಣ ನಡೆದಿದೆ. ಹಗಲು ರಾತ್ರಿ ಎನ್ನದೆ ಸುಮಾರು 35 ದಿನ ಶೂಟಿಂಗ್ ಮಾಡಿದ್ದು , ಕನ್ನಡ ಹಾಗೂ ಮಲಯಾಳಂ ಭಾಷೆಯಲ್ಲಿ ಏಕಕಾಲಕ್ಕೆ ಚಿತ್ರವನ್ನ ಬಿಡುಗಡೆ ಮಾಡುತ್ತಿದ್ದೇವೆ. ಅದರಲ್ಲೂ amazon ಪ್ರೈಮ್ ಸಂಸ್ಥೆಯು ನಮ್ಮ ಜೊತೆ ಕೈಜೋಡಿಸಿ ಓಟಿಟಿ ಹಕ್ಕನ್ನು ಪಡೆದುಕೊಂಡಿದೆ. ನಮ್ಮ ಚಿತ್ರದ ಕಲಾವಿದರು ತಂತ್ರಜ್ಞರು ಎಲ್ಲರೂ ತುಂಬು ಸಹಕಾರ ನೀಡಿದ್ದಾರೆ. ಮಾರ್ಚ್.6ರಂದು ನಮ್ಮ ಚಿತ್ರ ಬಿಡುಗಡೆಯಾಗುತ್ತಿದೆ ನಿಮ್ಮೆಲ್ಲರ ಸಹಕಾರ ಇರಲಿ ಎಂದು ಕೇಳಿಕೊಂಡರು.

ಈ ಚಿತ್ರದ ನಿರ್ಮಾಪಕ ಉಮೇಶ್ ಗೌಡ ಮಾತನಾಡುತ್ತಾ ನಮ್ಮ ಚಿತ್ರದ ಓ ಟಿ ಟಿ ಹಕ್ಕನ್ನ amazon ಪ್ರೈಮ್ ಸಂಸ್ಥೆಯು ಪಡೆದುಕೊಂಡಿದೆ. ನಮ್ಮ ಚಿತ್ರದ ಪ್ರಚಾರದ ಕಾರ್ಯ ಇಲ್ಲಿಂದ ಆರಂಭಿಸುತ್ತಿದ್ದೇವೆ. ಹುಬ್ಬಳ್ಳಿಯಲ್ಲಿ ಆಡಿಯೋ ಬಿಡುಗಡೆ ಕಾರ್ಯಕ್ರಮ ಸೇರಿದಂತೆ ಕರ್ನಾಟಕದ ನಾನಾ ಭಾಗಗಳಲ್ಲಿ ಪ್ರಚಾರದ ಕಾರ್ಯ ಮಾಡುತ್ತೇವೆ. ಅದೇ ರೀತಿ ಕೇರಳದ ವೈನಾಡು ಸೇರಿದಂತೆ ಹಲವು ಭಾಗಗಳಲ್ಲೂ ಕೂಡ ಪ್ರಚಾರದ ಕೆಲಸ ನಡೆಸಿ ನಂತರ ಮಾರ್ಚ್ 06ರಂದು ಎರಡು ಭಾಷೆಗಳಲ್ಲಿ ಏಕಕಾಲದಲ್ಲಿ ಬಿಡುಗಡೆ ಮಾಡುವ ಯೋಜನೆ ಹಾಕಿಕೊಂಡಿದ್ದೇವೆ. ಉಳಿದ ಭಾಷೆಗಳಲ್ಲಿ ಡಬ್ ಮಾಡಿ ಬಿಡುಗಡೆ ಮಾಡುವ ಉದ್ದೇಶವಿದೆ. ನಮ್ಮ ತಂಡಕ್ಕೆ ನಿಮ್ಮ ಬೆಂಬಲ ಇರಲಿ ಎಂದು ಕೇಳಿಕೊಂಡರು.

ನಟ ಪ್ರಮೋದ್ ಶೆಟ್ಟಿ ಮಾತನಾಡುತ್ತಾ ನನಗೆ ಪೊಲೀಸ್ ಪಾತ್ರಗಳು ಹೆಚ್ಚಾಗಿ ಹುಡುಕಿಕೊಂಡು ಬರುತ್ತದೆ. ಆದರೆ ಈ ಚಿತ್ರ ಬಹಳ ವಿಭಿನ್ನವಾಗಿದೆ, ಕನ್ನಡ ಹಾಗೂ ಮಲಯಾಳಂ ಭಾಷೆ ಎರಡರಲ್ಲೂ ಸಿದ್ಧವಾಗಿದೆ. ನಾನೇ ಮಲಯಾಳಂ ಡಬ್ ಕೂಡ ಮಾಡಿದ್ದೇನೆ. ಇದು ಸ್ಟೇಷನ್ ಸುತ್ತ ನಡೆಯೋ ಘಟನೆ. ಒಂದು ರೀತಿ ಬೆಲ್ ಬಾಟಮ್ ಫೀಲ್ ಕೊಡುತ್ತೆ.. ಈ ಚಿತ್ರ ಬಹಳ ಕುತೂಹಲಕಾರಿಯಾಗಿದೆ ನೀವೆಲ್ಲರೂ ನೋಡಿ ಎಂದು ಕೇಳಿಕೊಂಡರು. ಹಿರಿಯ ನಟ ಸಿದ್ಲಿಂಗು ಶ್ರೀಧರ್ ಮಾತನಾಡುತ್ತಾ ನಾನು ಹೆಡ್ ಕಾನ್ಸ್ಟೇಬಲ್ ಪಾತ್ರ ಮಾಡಿದ್ದೇನೆ. ಸುಮಾರು 15 ದಿನಗಳ ಕಾಲ ಚಿತ್ರೀಕರಣದಲ್ಲಿ ತೊಡಗಿಕೊಂಡಿದೆ. ಇದೊಂದು ರೀತಿ ಸೀಟ್ ಎಡ್ಜ್ ಚಿತ್ರವಾಗಿದೆ ಇಂತಹ ಚಿತ್ರಗಳು ಗೆಲ್ಲಬೇಕು ಎಂದರು. ಅದೇ ರೀತಿ ನಟಿ ಅರ್ಚನಾ ಕೊಟ್ಟಿಗೆ ಮಾತನಾಡುತ್ತಾ ನನ್ನದು ಇದರಲ್ಲಿ ಪೊಲೀಸ್ ಪಾತ್ರವೇ , ಆದರೆ ಚಿತ್ರದ ಬಗ್ಗೆ ಹೆಚ್ಚು ಮಾಹಿತಿ ಹೇಳೋ ಹಾಗಿಲ್ಲ , ನೀವೆಲ್ಲರೂ ನಮ್ಮ ಚಿತ್ರವನ್ನು ನೋಡಿ ಯಶಸ್ವಿಗೊಳಿಸಿ ಎಂದರು. ಅದೇ ರೀತಿ ನಟ ಸಾಯಿ ಭೈರವ ಕೂಡ ತಮ್ಮ ಅನುಭವಗಳನ್ನು ಹಂಚಿಕೊಂಡರು.

ಇನ್ನು ಈ ಚಿತ್ರದಲ್ಲಿ ಮಲಯಾಳಂನ ಪ್ರತಿಭೆ ಜಾನ್ ಕೈಪ್ಪಲ್ಲಿ ಪ್ರಮುಖ ಪೊಲೀಸ್ ಅಧಿಕಾರಿಯ ಪಾತ್ರದಲ್ಲಿ ಅಭಿನಯಿಸಿದ್ದಾರೆ. ಈ ಚಿತ್ರದಲ್ಲಿ ಹಿರಿಯ ನಟ ದೇವರಾಜ್ ಎಸ್ ಪಿ ಪಾತ್ರವನ್ನು ನಿರ್ವಹಿಸಿದ್ದಾರೆ. ಉಳಿದಂತೆ ಹಲವಾರು ಯುವ ಕಲಾವಿದರು ಅಭಿನಯಿಸಿದ್ದಾರೆ. ಈ ಚಿತ್ರಕ್ಕೆ ಪೂರ್ಣಚಂದ್ರ ತೇಜಸ್ವಿ ಸಂಗೀತ ನೀಡಿದ್ದು , ಆರ್. ಎಸ್ .ಆನಂದ್ ಕುಮಾರ್ ಛಾಯಾಗ್ರಹಣ ಮಾಡಿದ್ದಾರೆ. ಈ ಒಂದು ಕಾರ್ಯಕ್ರಮಕ್ಕೆ ರವಿ ಸಿಂಧನೂರು ಸೇರಿದಂತೆ ಹಲವಾರು ಬಂದು ತಂಡಕ್ಕೆ ಶುಭವನ್ನ ಕೋರಿದರು. ಎರಡು ಭಾಷೆಯಲ್ಲಿ ನಿರ್ಮಾಣಗೊಂಡಿರುವ ಈ ಚಿತ್ರ ಮಾರ್ಚ್.06ರಂದು ಅದ್ದೂರಿಯಾಗಿ ಬಿಡುಗಡೆಯಾಗಲಿದೆ.

ಇದನ್ನೂ ಓದಿ : ಪಿಜ್ಜಾ ಮೇಕರ್‌ನ ಸ್ಪಿನ್ ಜಾದುಗೆ ತತ್ತರಿಸಿದ ನೇಪಾಳ | ಇಟಲಿಗೆ ಟಿ20 ವಿಶ್ವಕಪ್‌ನಲ್ಲಿ ಐತಿಹಾಸಿಕ ಮೊದಲ ಜಯ!

Tags: Karnataka News beat
SendShareTweet
Previous Post

ಪಿಜ್ಜಾ ಮೇಕರ್‌ನ ಸ್ಪಿನ್ ಜಾದುಗೆ ತತ್ತರಿಸಿದ ನೇಪಾಳ | ಇಟಲಿಗೆ ಟಿ20 ವಿಶ್ವಕಪ್‌ನಲ್ಲಿ ಐತಿಹಾಸಿಕ ಮೊದಲ ಜಯ!

Next Post

ಸಿದ್ದಗಂಗಾ ಮಠದ ಮ್ಯಾನೇಜರ್ ನಿಧನ

Related Posts

ಡೆವಿಲ್ ಗಾಯಕ ಅನಿರುದ್ದ್ ಶಾಸ್ತ್ರಿಗೆ ಕೂಡಿ ಬಂತು ಕಂಕಣ ಭಾಗ್ಯ | ಭರತನಾಟ್ಯ ಕಲಾವಿದೆಯೊಂದಿಗೆ ಸಪ್ತಪದಿ ತುಳಿಯಲು ಸಜ್ಜು!
ಸಿನಿಮಾ-ಮನರಂಜನೆ

ಡೆವಿಲ್ ಗಾಯಕ ಅನಿರುದ್ದ್ ಶಾಸ್ತ್ರಿಗೆ ಕೂಡಿ ಬಂತು ಕಂಕಣ ಭಾಗ್ಯ | ಭರತನಾಟ್ಯ ಕಲಾವಿದೆಯೊಂದಿಗೆ ಸಪ್ತಪದಿ ತುಳಿಯಲು ಸಜ್ಜು!

‘ಲೈಫ್ ಟುಡೇ’ ಹಾಡಿನ ಕಿಕ್..!
ಸಿನಿಮಾ-ಮನರಂಜನೆ

‘ಲೈಫ್ ಟುಡೇ’ ಹಾಡಿನ ಕಿಕ್..!

“ಕಿಂಗ್” ಆಗ್ತಿದಾರೆ ಲೂಸ್ ಮಾದ ಯೋಗಿ..!
ಸಿನಿಮಾ-ಮನರಂಜನೆ

“ಕಿಂಗ್” ಆಗ್ತಿದಾರೆ ಲೂಸ್ ಮಾದ ಯೋಗಿ..!

‘ಕರಿಯ’ ರೀ ರಿಲೀಸ್.. ಕೌಂಟ್‌ಡೌನ್‌ ಶುರು..!
ಸಿನಿಮಾ-ಮನರಂಜನೆ

‘ಕರಿಯ’ ರೀ ರಿಲೀಸ್.. ಕೌಂಟ್‌ಡೌನ್‌ ಶುರು..!

ಸಂಕಷ್ಟದಲ್ಲಿರುವ ನಟ ರಾಜಪಾಲ್ ಯಾದವ್‌ಗೆ ಆಸರೆ | 1.11 ಕೋಟಿ ರೂ. ಆರ್ಥಿಕ ನೆರವು ಘೋಷಿಸಿದ ಖ್ಯಾತ ಸಂಗೀತ ನಿರ್ಮಾಪಕ!
ಸಿನಿಮಾ-ಮನರಂಜನೆ

ಸಂಕಷ್ಟದಲ್ಲಿರುವ ನಟ ರಾಜಪಾಲ್ ಯಾದವ್‌ಗೆ ಆಸರೆ | 1.11 ಕೋಟಿ ರೂ. ಆರ್ಥಿಕ ನೆರವು ಘೋಷಿಸಿದ ಖ್ಯಾತ ಸಂಗೀತ ನಿರ್ಮಾಪಕ!

ಲಾಯರ್ ಕೋಟ್ ತೆಗೆದು ಬಿಡ್ತಾರಾ ‘ಭಾರ್ಗವಿ’..?
ಸಿನಿಮಾ-ಮನರಂಜನೆ

ಲಾಯರ್ ಕೋಟ್ ತೆಗೆದು ಬಿಡ್ತಾರಾ ‘ಭಾರ್ಗವಿ’..?

Next Post
ಸಿದ್ದಗಂಗಾ ಮಠದ ಮ್ಯಾನೇಜರ್ ನಿಧನ

ಸಿದ್ದಗಂಗಾ ಮಠದ ಮ್ಯಾನೇಜರ್ ನಿಧನ

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಡೆವಿಲ್ ಗಾಯಕ ಅನಿರುದ್ದ್ ಶಾಸ್ತ್ರಿಗೆ ಕೂಡಿ ಬಂತು ಕಂಕಣ ಭಾಗ್ಯ | ಭರತನಾಟ್ಯ ಕಲಾವಿದೆಯೊಂದಿಗೆ ಸಪ್ತಪದಿ ತುಳಿಯಲು ಸಜ್ಜು!

ಡೆವಿಲ್ ಗಾಯಕ ಅನಿರುದ್ದ್ ಶಾಸ್ತ್ರಿಗೆ ಕೂಡಿ ಬಂತು ಕಂಕಣ ಭಾಗ್ಯ | ಭರತನಾಟ್ಯ ಕಲಾವಿದೆಯೊಂದಿಗೆ ಸಪ್ತಪದಿ ತುಳಿಯಲು ಸಜ್ಜು!

ಯಾವ ಪುರುಷಾರ್ಥಕ್ಕೆ ಕಾಂಗ್ರೆಸ್ ಸರ್ಕಾರ ಸಾವಿರ ದಿನಗಳ ಸಮಾವೇಶ ಮಾಡ್ತಿದೆ? | ಆರ್.ಅಶೋಕ್ ಕಿಡಿ

ಯಾವ ಪುರುಷಾರ್ಥಕ್ಕೆ ಕಾಂಗ್ರೆಸ್ ಸರ್ಕಾರ ಸಾವಿರ ದಿನಗಳ ಸಮಾವೇಶ ಮಾಡ್ತಿದೆ? | ಆರ್.ಅಶೋಕ್ ಕಿಡಿ

ಪಾಕ್‌ ವಿರುದ್ಧದ ಪಂದ್ಯಕ್ಕೆ ಅಭಿಷೇಕ್ ಶರ್ಮಾ ಅಲಭ್ಯ? ಸೂರ್ಯಕುಮಾರ್ ಯಾದವ್ ಮಹತ್ವದ ಸುಳಿವು

ಪಾಕ್‌ ವಿರುದ್ಧದ ಪಂದ್ಯಕ್ಕೆ ಅಭಿಷೇಕ್ ಶರ್ಮಾ ಅಲಭ್ಯ? ಸೂರ್ಯಕುಮಾರ್ ಯಾದವ್ ಮಹತ್ವದ ಸುಳಿವು

ಪ್ರಧಾನಿ ಕಾರ್ಯಾಲಯ ‘ಸೇವಾ ತೀರ್ಥ’ಕ್ಕೆ ಸ್ಥಳಾಂತರ | ಪಿಎಂಒಗೆ ಹೊಸ ವಿಳಾಸ

ಪ್ರಧಾನಿ ಕಾರ್ಯಾಲಯ ‘ಸೇವಾ ತೀರ್ಥ’ಕ್ಕೆ ಸ್ಥಳಾಂತರ | ಪಿಎಂಒಗೆ ಹೊಸ ವಿಳಾಸ

Recent News

ಡೆವಿಲ್ ಗಾಯಕ ಅನಿರುದ್ದ್ ಶಾಸ್ತ್ರಿಗೆ ಕೂಡಿ ಬಂತು ಕಂಕಣ ಭಾಗ್ಯ | ಭರತನಾಟ್ಯ ಕಲಾವಿದೆಯೊಂದಿಗೆ ಸಪ್ತಪದಿ ತುಳಿಯಲು ಸಜ್ಜು!

ಡೆವಿಲ್ ಗಾಯಕ ಅನಿರುದ್ದ್ ಶಾಸ್ತ್ರಿಗೆ ಕೂಡಿ ಬಂತು ಕಂಕಣ ಭಾಗ್ಯ | ಭರತನಾಟ್ಯ ಕಲಾವಿದೆಯೊಂದಿಗೆ ಸಪ್ತಪದಿ ತುಳಿಯಲು ಸಜ್ಜು!

ಯಾವ ಪುರುಷಾರ್ಥಕ್ಕೆ ಕಾಂಗ್ರೆಸ್ ಸರ್ಕಾರ ಸಾವಿರ ದಿನಗಳ ಸಮಾವೇಶ ಮಾಡ್ತಿದೆ? | ಆರ್.ಅಶೋಕ್ ಕಿಡಿ

ಯಾವ ಪುರುಷಾರ್ಥಕ್ಕೆ ಕಾಂಗ್ರೆಸ್ ಸರ್ಕಾರ ಸಾವಿರ ದಿನಗಳ ಸಮಾವೇಶ ಮಾಡ್ತಿದೆ? | ಆರ್.ಅಶೋಕ್ ಕಿಡಿ

ಪಾಕ್‌ ವಿರುದ್ಧದ ಪಂದ್ಯಕ್ಕೆ ಅಭಿಷೇಕ್ ಶರ್ಮಾ ಅಲಭ್ಯ? ಸೂರ್ಯಕುಮಾರ್ ಯಾದವ್ ಮಹತ್ವದ ಸುಳಿವು

ಪಾಕ್‌ ವಿರುದ್ಧದ ಪಂದ್ಯಕ್ಕೆ ಅಭಿಷೇಕ್ ಶರ್ಮಾ ಅಲಭ್ಯ? ಸೂರ್ಯಕುಮಾರ್ ಯಾದವ್ ಮಹತ್ವದ ಸುಳಿವು

ಪ್ರಧಾನಿ ಕಾರ್ಯಾಲಯ ‘ಸೇವಾ ತೀರ್ಥ’ಕ್ಕೆ ಸ್ಥಳಾಂತರ | ಪಿಎಂಒಗೆ ಹೊಸ ವಿಳಾಸ

ಪ್ರಧಾನಿ ಕಾರ್ಯಾಲಯ ‘ಸೇವಾ ತೀರ್ಥ’ಕ್ಕೆ ಸ್ಥಳಾಂತರ | ಪಿಎಂಒಗೆ ಹೊಸ ವಿಳಾಸ

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಡೆವಿಲ್ ಗಾಯಕ ಅನಿರುದ್ದ್ ಶಾಸ್ತ್ರಿಗೆ ಕೂಡಿ ಬಂತು ಕಂಕಣ ಭಾಗ್ಯ | ಭರತನಾಟ್ಯ ಕಲಾವಿದೆಯೊಂದಿಗೆ ಸಪ್ತಪದಿ ತುಳಿಯಲು ಸಜ್ಜು!

ಡೆವಿಲ್ ಗಾಯಕ ಅನಿರುದ್ದ್ ಶಾಸ್ತ್ರಿಗೆ ಕೂಡಿ ಬಂತು ಕಂಕಣ ಭಾಗ್ಯ | ಭರತನಾಟ್ಯ ಕಲಾವಿದೆಯೊಂದಿಗೆ ಸಪ್ತಪದಿ ತುಳಿಯಲು ಸಜ್ಜು!

ಯಾವ ಪುರುಷಾರ್ಥಕ್ಕೆ ಕಾಂಗ್ರೆಸ್ ಸರ್ಕಾರ ಸಾವಿರ ದಿನಗಳ ಸಮಾವೇಶ ಮಾಡ್ತಿದೆ? | ಆರ್.ಅಶೋಕ್ ಕಿಡಿ

ಯಾವ ಪುರುಷಾರ್ಥಕ್ಕೆ ಕಾಂಗ್ರೆಸ್ ಸರ್ಕಾರ ಸಾವಿರ ದಿನಗಳ ಸಮಾವೇಶ ಮಾಡ್ತಿದೆ? | ಆರ್.ಅಶೋಕ್ ಕಿಡಿ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat