ರಾಜ್ಯ ಕಾಂಗ್ರೆಸ್ನಲ್ಲಿ ತಲ್ಲಣ ಸೃಷ್ಟಿಸಿರುವ ‘ಸ್ಟಿಂಗ್’ ಪ್ರಕರಣದಲ್ಲಿ ದಿನಕ್ಕೊಂದು ತಿರುವು ಸಿಗುತ್ತಿದ್ದು, ರಾಹುಲ್ ಗಾಂಧಿಗೆ ಮಾಜಿ ಸಿಎಂ ಸಿದ್ದರಾಮಯ್ಯ ದೂರು ನೀಡಿದ್ದಾರೆ ಎನ್ನಲಾಗಿದೆ. ಈ ಮಧ್ಯೆ, ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ತೀವ್ರ ಕೆಂಡಕಾರಿರುವ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ, ರಾಜ್ಯದ ಗೃಹ ಸಚಿವರು ‘ಅನ್ಫಿಟ್’ ಎಂದು ವಾಗ್ದಾಳಿ ನಡೆಸಿದ್ದಾರೆ.
ಕಾಂಗ್ರೆಸ್ನ ಕೆಲವು ನಾಯಕರಿಂದಲೇ ಸಿದ್ದರಾಮಯ್ಯ ಅವರನ್ನು ಮುಗಿಸಲು ಯತ್ನ ನಡೆಯುತ್ತಿದೆ, ಇದರ ಫಲ 2028ಕ್ಕೆ ಗೊತ್ತಾಗಲಿದೆ ಎಂದಿದ್ದಾರೆ. ಪ್ರಕರಣದ ತನಿಖೆಯ ಹಾದಿ ಸಂಪೂರ್ಣ ದಿಕ್ಕು ತಪ್ಪಿದೆ ಮತ್ತು ಸಂತ್ರಸ್ತೆಯ ಇ-ಮೇಲ್ ಎಲ್ಲಿದೆ ಎಂದು ಪ್ರಶ್ನಿಸಿದ್ದಾರೆ.


















