ಬೆಂಗಳೂರು: ಇಡೀ ಜಗತ್ತಿಗೆ ಕೊರೊನಾ ಹೆಮ್ಮಾರಿಯ ಕೊಡುಗೆ ನೀಡಿದ್ದ ಚೀನಾದಲ್ಲಿ ಮತ್ತೊಂದು ವೈರಸ್ ತಾಂಡವವಾಡುತ್ತಿದೆ. ಹೀಗಾಗಿ ಕೇಂದ್ರ ಆರೋಗ್ಯ ಇಲಾಖೆ ಅಲರ್ಟ್ ಆಗಿದ್ದು, ಕರ್ನಾಟಕ ಸೇರಿದಂತೆ ಎಲ್ಲ ರಾಜ್ಯಗಳಿಗೆ ಮಾರ್ಗಸೂಚಿ ನೀಡಿದೆ.
ಚೀನಾ ದೇಶದಲ್ಲಿ ಹೊಸ ವೈರಸ್ ಆತಂಕ ಸೃಷ್ಟಿಸಿದೆ. ಇದರ ಬೆನ್ನಲ್ಲೇ ಕೇಂದ್ರ ಆರೋಗ್ಯ ಇಲಾಖೆ ಅಧಿಕಾರಿಗಳು ಸಭೆ ನಡೆಸಿದ್ದಾರೆ. ಐಎಲ್ ಐ, ಸಾರಿ ಪ್ರಕರಣಗಳು ಕಂಡು ಬಂದರೆ ಟೆಸ್ಟಿಂಗ್ ಮಾಡುವಂತೆ ಎಲ್ಲ ರಾಜ್ಯಗಳಿಗೆ ಸೂಚನೆ ನೀಡಿದೆ. ಆದರೆ, ಹೊಸ ವೈರಸ್ ಗೆ ಆತಂಕ ಪಡುವ ಅಗತ್ಯ ಇಲ್ಲ ಎಂದು ಕೇಂದ್ರ ಸರ್ಕಾರ ಸೂಚಿಸಿದೆ.
ಈ ಸೀಸನ್ ನಲ್ಲಿ ವೈರಸ್ ಹೆಚ್ಚಾಗಿ ಬರುತ್ತದೆ. ವೈರಸ್ ಹೆಚ್ಚಾಗುವುದರಿಂದ ಉಸಿರಾಟದ ಸಮಸ್ಯೆ ಕಾಣಿಸಿಕೊಳ್ಳುತ್ತದೆ. ಜ್ವರ, ಕೆಮ್ಮಿನಿಂದ ಬಳಲುವವರು ಮಾಸ್ಕ್ ಹಾಕಬೇಕು ಎಂದು ಸಲಹೆ ನೀಡಿದ್ದಾರೆ.