ಬೆಂಗಳೂರು : ನವಜಾತ ಶಿಶುಯೊಂದು ಜನ್ಮ ಪಡೆದ ಕೆಲವೇ ಗಂಟೆಗಳಲ್ಲಿ ಬೀದಿ ಹೆಣವಾಗಿರುವ ಹೃದಯವಿದ್ರವಾಕ ಘಟನೆ ಬೆಂಗಳೂರು ಹೊರವಲಯದ ಹೊಸಕೋಟೆ ನಗರದ ದೊಡ್ಡಕೆರೆ ಏರಿ ಬಳಿ ನಡೆದಿದೆ.
ನವಜಾತ ಹೆಣ್ಣು ಮಗುವನ್ನು ಪಾಪಿಗಳು ರಸ್ತೆ ಪಕ್ಕಕ್ಕೆ ಬಿಸಾಡಿ ಹೋಗಿರುವುದನ್ನು ಕಂಡ ಸೈಳಿಯರು ತಕ್ಷಣ ಪೊಲೀಸರಿಗೆ ತಿಳಿಸಿದ್ದಾರೆ. ಸ್ಥಳೀಯರಿಂದ ಮಾಹಿತಿ ಬಂದ ಹಿನ್ನೆಲೆ ಕೂಡಲೇ ಸ್ಥಳಕ್ಕೆ ಬಂದ ಹೊಸಕೋಟೆ ಪೊಲೀಸರು ಸಾವನ್ನಪ್ಪಿರುವ ಮಗುವನ್ನು ಸ್ಥಳೀಯ ಆಸ್ಪತ್ರೆಗೆ ರವಾನೆ ಮಾಡಿದ್ದಾರೆ.
ಸದ್ಯ ಈ ಸಂಬಂಧ ಹೊಸಕೋಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ. ಎಂದು ತಿಳಿದು ಬಂದಿದೆ.
ಇದನ್ನೂ ಓದಿ: ಮೈಸೂರು | ಇಬ್ಬರು ಮಕ್ಕಳನ್ನು ಕೊಲೆ ಮಾಡಿ ಆತ್ಮಹತ್ಯೆ ಮಾಡಿಕೊಂಡ ತಾಯಿ



















