ಶಿವಮೊಗ್ಗ : ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಲಕ್ಕುಂದ ಸಮೀಪ ಪತ್ರೊಡೆ ಎಲೆ ಕೀಳಲು ಮರ ಏರಿದ್ದ ಯುವಕ ವಿದ್ಯುತ್ ಶಾಕ್‌ಗೆ ಒಳಗಾಗಿ ಮೃತಪಟ್ಟಿರುವ ದುರ್ಘಟನೆ ನಡೆದಿದೆ. ಮರದ ಪಕ್ಕದಲ್ಲಿದ್ದ ವಿದ್ಯುತ್ ತಂತಿ ಆಕಸ್ಮಿಕವಾಗಿ ಸ್ಪರ್ಶಗೊಂಡ ಪರಿಣಾಮ ಯುವಕ ಸ್ಥಳದಲ್ಲೇ ಸಾವನ್ನಪ್ಪಿದ್ದು, ಕುಟುಂಬದ ಆಕ್ರಂದನ ಮುಗಿಲು ಮುಟ್ಟಿದೆ.
ಮೃತ ಯುವಕನನ್ನು ತೀರ್ಥಹಳ್ಳಿ ಪಟ್ಟಣದ ಇಂದಿರಾನಗರ ನಿವಾಸಿ ಅಭಿಷೇಕ್ ಶೆಟ್ಟಿ ಎಂದು ಗುರುತಿಸಲಾಗಿದೆ. ಪತ್ರೊಡೆ ಎಲೆ ಕೀಳಲು ಮರ ಏರಿದ್ದ ವೇಳೆ ಮರದ ಪಕ್ಕದಲ್ಲಿದ್ದ ವಿದ್ಯುತ್ ತಂತಿ ತಗುಲಿ ತೀವ್ರ ಶಾಕ್ ಹೊಡೆದಿದ್ದು, ಅಭಿಷೇಕ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.
ಅಭಿಷೇಕ್ ಶೆಟ್ಟಿಗೆ ಇತ್ತೀಚೆಗಷ್ಟೇ ವಿವಾಹವಾಗಿತ್ತು. ಹೊಸ ಜೀವನ ಆರಂಭಿಸಿದ್ದ ಯುವಕನ ಅಕಾಲಿಕ ನಿಧನ ಕುಟುಂಬಸ್ಥರು, ಬಂಧು-ಬಳಗ ಹಾಗೂ ಸ್ನೇಹಿತರಲ್ಲಿ ತೀವ್ರ ದುಃಖ ಮೂಡಿಸಿದೆ. ಸಂತಸದ ದಿನಗಳ ನಡುವೆ ನಡೆದ ಈ ದುರ್ಘಟನೆ ಎಲ್ಲರನ್ನೂ ಕಣ್ಣೀರಿನಲ್ಲಿ ಮುಳುಗಿಸಿದೆ.
ಘಟನೆ ಸಂಬಂಧ ಆಗುಂಬೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಘಟನೆಯ ಕುರಿತು ಹೆಚ್ಚಿನ ತನಿಖೆ ಮುಂದುವರಿದಿದೆ.
ಇದನ್ನೂ ಓದಿ : ಬಿಸಿಲಿಗೆ ಯುರೋಪ್ ಧಗಧಗ : ಪ್ಯಾರಿಸ್‌ನಲ್ಲಿ 148 ವರ್ಷಗಳ ಹಳೆಯ ದಾಖಲೆ ಉಡೀಸ್!

















