ಚಿಕ್ಕಬಳ್ಳಾಪುರ: ಪ್ರಿಯಕರ ಹಾಗೂ ಯುವತಿ ಇಬ್ಬರೂ ಕೃಷಿ ಹೊಂಡಕ್ಕೆ ಬಿದ್ದು ಸಾವನ್ನಪ್ಪಿರುವ ಘಟನೆ ನಡೆದಿದೆ.
ಈ ಘಟನೆ ಚಿಂತಾಮಣಿ(Chintamani) ತಾಲೂಕಿನ ದೊಡ್ಡಪಲ್ಲಿ ಎಂಬಲ್ಲಿ ನಡೆದಿದೆ. ಮಾಜಿ ಪ್ರಿಯಕರನೊಂದಿಗೆ (Ex Lover) ವಿವಾಹಿತ ಯುವತಿ (Married Woman) ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.
ಅನುಷಾ (19), ವೇಣು (21) ಸಾವನ್ನಪ್ಪಿದ ದುರ್ದೈವಿಗಳು. ಈ ಜೋಡಿಗಳು 2 ವರ್ಷದಿಂದ ಪರಸ್ಪರ ಪ್ರೀತಿಸುತ್ತಿದ್ದರು. ಆದರೆ, ಅವರ ಪ್ರೀತಿಗೆ (Love) ಮನೆಯಲ್ಲಿ ಒಪ್ಪಿಗೆ ಸೂಚಿಸಿರಲಿಲ್ಲ. ವಿರೋಧ ವ್ಯಕ್ತಪಡಿಸಿದ ಯುವತಿಯ ಕುಟುಂಬಸ್ಥರು ಬೇರೆ ಯುವಕನೊಂದಿಗೆ ಮದುವೆ ಮಾಡಿದ್ದರು. ಆದರೂ ಯುವತಿ ಮತ್ತೆ ಹಳೆ ಪ್ರೇಮಿಯ ಜೊತೆ ಸಂಪರ್ಕ ಬೆಳೆಸಿದ್ದಳು. ಮೊದಲೇ ಪ್ರೀತಿಗೆ ನಿರಾಕರಿಸಿದ್ದ ಕುಟುಂಬ. ಒಬ್ಬರನ್ನೊಬ್ಬರು ಬಿಟ್ಟಿರಲು ಆಗದೆ ಆತ್ಮಹತ್ಯೆಗೆ ಶರಣಾಗಿದ್ದಾರೆ ಎನ್ನಲಾಗಿದೆ.
ಆಷಾಡಕ್ಕೆಂದು ತವರು ಮನೆಗೆ ಬಂದಿದ್ದ ನವವಿವಾಹಿತೆ ಆತ್ಮಹತ್ಯೆಗೆ ಶರಣಾಗಿದ್ದಾಳೆ. ಸೊಂಟಕ್ಕೆ ವೇಲ್ ಬಿಗಿದುಕೊಂಡು ಕೃಷಿ ಹೊಂಡಕ್ಕೆ ಬಿದ್ದು ಇಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕೆಂಚಾರ್ಲಹಳ್ಳಿ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ.