ಬೆಂಗಳೂರು : ಕರ್ನಾಟಕದ ಧಾರವಾಡದಲ್ಲಿರುವ ರಾಷ್ಟ್ರೀಯ ವಿಧಿವಿಜ್ಞಾನಗಳ ವಿಶ್ವವಿದ್ಯಾಲಯದಲ್ಲಿ ಖಾಲಿ ಇರುವ 2 ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಲಾಗಿದೆ. 2 ಅಸಿಸ್ಟಂಟ್ ಪ್ರೊಫೆಸರ್ ಹುದ್ದೆಗಳನ್ನು ನೇಮಕಾತಿ (NFSU Recruitment 2026) ಮಾಡಿಕೊಳ್ಳಲಾಗುತ್ತಿದ್ದು, ಅರ್ಹರಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅಭ್ಯರ್ಥಿಗಳಿಗೆ ಆನ್ ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಲು ಅವಕಾಶ ನೀಡಲಾಗಿದೆ. ನೇಮಕಾತಿಗೆ ಸಂಬಂಧಿಸಿದಂತೆ ಹೆಚ್ಚಿನ ಮಾಹಿತಿ ಇಲ್ಲಿದೆ.
ಹುದ್ದೆಗಳ ವಿವರ
ನೇಮಕಾತಿ ಸಂಸ್ಥೆ: ರಾಷ್ಟ್ರೀಯ ವಿಧಿವಿಜ್ಞಾನಗಳ ವಿಶ್ವವಿದ್ಯಾಲಯ
ಒಟ್ಟು ಹುದ್ದೆಗಳು: 02
ಹುದ್ದೆಗಳ ಹೆಸರು: ಅಸಿಸ್ಟಂಟ್ ಪ್ರೊಫೆಸರ್
ಉದ್ಯೋಗ ಸ್ಥಳ: ಧಾರವಾಡ
ಅರ್ಜಿ ಸಲ್ಲಿಸಲು ಕೊನೆಯ ದಿನ: ಸೆಪ್ಟೆಂಬರ್ 20
ಮಾನ್ಯತೆ ಪಡೆದ ಯಾವುದೇ ವಿಶ್ವವಿದ್ಯಾಲಯ ಅಥವಾ ಮಂಡಳಿಗಳಲ್ಲಿ ಎಂಸಿಎ, ಎಂಎಸ್ಸಿ, ಎಂಇ, ಎಂ.ಟೆಕ್, ಪಿಎಚ್.ಡಿ ಮುಗಿಸಿದವರು ಅರ್ಜಿ ಸಲ್ಲಿಸಬಹುದಾಗಿದೆ. ನೇಮಕಾತಿ ಹೊಂದಿದವರಿಗೆ ಮಾಸಿಕ 75 ಸಾವಿರ ರೂ.ನಿಂದ 90 ಸಾವಿರ ರೂಪಾಯಿವರೆಗೆ ಸಂಬಳ ನೀಡಲಾಗುತ್ತದೆ. ಅರ್ಜಿ ಸಲ್ಲಿಸುವವರಿಗೆ ಗರಿಷ್ಠ 45 ವರ್ಷಗಳ ವಯೋಮಿತಿಯನ್ನು ನಿಗದಿಪಡಿಸಲಾಗಿದೆ. ಅರ್ಜಿ ಸಲ್ಲಿಸುವವರಿಗೆ ಯಾವುದೇ ಶುಲ್ಕವಿರುವುದಿಲ್ಲ ಎಂದು ತಿಳಿಸಲಾಗಿದೆ. ಸಲ್ಲಿಕೆಯಾದ ಅರ್ಜಿಗಳನ್ನು ಮೊದಲು ಪರಿಶೀಲನೆ ಮಾಡಲಾಗುತ್ತದೆ. ಇದಾದ ಬಳಿಕ ಅಭ್ಯರ್ಥಿಗಳನ್ನು ಸಂದರ್ಶನದ ಮೂಲಕ ನೇಮಕಾತಿ ಮಾಡಿಕೊಳ್ಳಲಾಗುತ್ತದೆ.
ಅರ್ಜಿ ಸಲ್ಲಿಸುವುದು ಹೇಗೆ?
ಮೊದಲಿಗೆ nfsu.ac.in ವೆಬ್ ಸೈಟ್ ಗೆ ಭೇಟಿ ನೀಡಬೇಕು
ನಿಮಗೆ ಬೇಕಾದ ಹುದ್ದೆ ಆಯ್ಕೆ ಮಾಡಿಕೊಳ್ಳಬೇಕು
ಅರ್ಜಿ ಸಲ್ಲಿಕೆ ಕುರಿತ ಅಧಿಸೂಚನೆ ಓದಿಕೊಳ್ಳಬೇಕು
ಅರ್ಜಿಯನ್ನು ಯಾವುದೇ ತಪ್ಪುಗಳಿಲ್ಲದೆ ಭರ್ತಿ ಮಾಡಬೇಕು
ಅಗತ್ಯ ದಾಖಲೆಗಳೊಂದಿಗೆ ಅರ್ಜಿಯನ್ನು ಸಲ್ಲಿಸಬೇಕು
ಫ್ಯೂಚರ್ ರೆಫರೆನ್ಸಿಗಾಗಿ ಅರ್ಜಿ ನಮೂನೆಯ ಪ್ರಿಂಟೌಟ್ ತೆಗೆದುಕೊಂಡಿರಬೇಕು
ಇದನ್ನೂ ಓದಿ : ಮೈಸೂರು ದಸರಾದಲ್ಲಿ ಸ್ಯಾಂಡಲ್‌ವುಡ್ ಕಳೆ ; ಈ ಬಾರಿ ಜಂಬೂಸವಾರಿಯಲ್ಲಿ ಸ್ಟಾರ್‌ಗಳ ಮೆರವಣಿಗೆ!



















