ಬೆಂಗಳೂರು: ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದಲ್ಲಿ (NHAI Recruitment 2025) 15 ಹುದ್ದೆಗಳು ಖಾಲಿ ಇದ್ದು, ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಲಾಗಿದೆ. ಜನರಲ್ ಮ್ಯಾನೇಜರ್ ಹುದ್ದೆಗಳ ನೇಮಕಾತಿಗಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆನ್ ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಆಗಸ್ಟ್ 28 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಆಸಕ್ತ ಅಭ್ಯರ್ಥಿಗಳು ಕೂಡಲೇ ಅರ್ಜಿ ಸಲ್ಲಿಸಿ, ಉದ್ಯೋಗ ಗಿಟ್ಟಿಸಿಕೊಳ್ಳಬಹುದಾಗಿದೆ.
ಹುದ್ದೆಗಳ ವಿವರ
ನೇಮಕಾತಿ ಸಂಸ್ಥೆ: ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ
ಒಟ್ಟು ಹುದ್ದೆಗಳು: 15
ಹುದ್ದೆಗಳ ಹೆಸರು: ಜನರಲ್ ಮ್ಯಾನೇಜರ್
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಆಗಸ್ಟ್ 28
ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ನೇಮಕಾತಿ ಅಧಿಕೃತ ಅಧಿಸೂಚನೆ ಪ್ರಕಾರ, ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಯು ದೇಶದ ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ ಸಿವಿಲ್ ಎಂಜಿನಿಯರಿಂಗ್ ನಲ್ಲಿ ಪದವಿ ಪಡೆದಿರಬೇಕು ಎಂದು ತಿಳಿಸಲಾಗಿದೆ.
ಗರಿಷ್ಠ 56 ವರ್ಷದ ವಯೋಮಿತಿಯನ್ನು ಪ್ರಾಧಿಕಾರ ನಿಗದಿಪಡಿಸಿದೆ. ಜನರಲ್ ಹಾಗೂ ಒಬಿಸಿ ಅಭ್ಯರ್ಥಿಗಳಿಗೆ 3 ವರ್ಷಗಳ ವಯೋಮಿತಿ ಸಡಿಲಿಕೆ ಇದೆ. ಇನ್ನು, ಎಸ್ಸಿ, ಎಸ್ಟಿಯವರಿಗೆ 5 ವರ್ಷಗಳ ಸಡಿಲಿಕೆ ಇದೆ. ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ.ಗೇಟ್ 2024 ಸ್ಕೋರ್ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ.
ಅರ್ಜಿ ಸಲ್ಲಿಸೋದು ಹೇಗೆ?
- ಮೊದಲಿಗೆ ಅಧಿಕೃತ ವೆಬ್ಸೈಟ್ https://nhai.gov.in/ಗೆ ಭೇಟಿ ನೀಡಿ
- ಜನರಲ್ ಮ್ಯಾನೇಜರ್ ಉದ್ಯೋಗಗಳ ಅಧಿಸೂಚನೆಯನ್ನು ತೆರೆಯಿರಿ
- ಯಾವುದೇ ತಪ್ಪುಗಳಿಲ್ಲದೆ ಅರ್ಜಿ ನಮೂನೆಯನ್ನು ಭರ್ತಿ ಮಾಡಿ.
- ಕೊನೆಯ ದಿನಾಂಕಕ್ಕೂ ಮೊದಲು ಅರ್ಜಿ ನಮೂನೆಯನ್ನು ಸಲ್ಲಿಸಿ
- ಫ್ಯೂಚರ್ ರೆಫರೆನ್ಸಿಗಾಗಿ ಅರ್ಜಿ ನಮೂನೆಯ ಸಂಖ್ಯೆ/ಸ್ವೀಕಾರ ಸಂಖ್ಯೆಯನ್ನು ಸುರಕ್ಷಿತವಾಗಿಡಿ.



















