ಬೆಂಗಳೂರು: ಕೇಂದ್ರ ಸರ್ಕಾರದ ಅಧೀನದಲ್ಲಿ ಕಾರ್ಯನಿರ್ವಹಿಸುವ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದಲ್ಲಿ ಖಾಲಿ ಇರುವ 84 ಹುದ್ದೆಗಳ ನೇಮಕಾತಿಗಾಗಿ (NHAI Recruitment 2025) ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಡೆಪ್ಯೂಟಿ ಮ್ಯಾನೇಜರ್ ಸೇರಿ ಹಲವು ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುತ್ತಿದೆ. ಅಭ್ಯರ್ಥಿಗಳಿಗೆ ಆನ್ ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಲು ಅವಕಾಶ ನೀಡಲಾಗಿದೆ. ಇದರೊಂದಿಗೆ ಸರ್ಕಾರದ ಹುದ್ದೆಗಳನ್ನು ಹುಡುಕುತ್ತಿರುವವರಿಗೆ ಒಳ್ಳೆಯ ಅವಕಾಶ ಸಿಕ್ಕಂತಾಗಿದೆ.
ಹುದ್ದೆಗಳ ಸಂಕ್ಷಿಪ್ತ ವಿವರ
ನೇಮಕಾತಿ ಸಂಸ್ಥೆ: ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ (NHAI)
ಖಾಲಿ ಇರುವ ಹುದ್ದೆಗಳು: 84
ಹುದ್ದೆಗಳ ಹೆಸರು: ಡೆಪ್ಯೂಟಿ ಮ್ಯಾನೇಜರ್ ಇತ್ಯಾದಿ
ಅರ್ಜಿ ಸಲ್ಲಿಕೆ ವಿಧಾನ: ಆನ್ ಲೈನ್
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಡಿಸೆಂಬರ್ 15
ಉದ್ಯೋಗ ಸ್ಥಳ: ದೇಶಾದ್ಯಂತ
ಡೆಪ್ಯೂಟಿ ಮ್ಯಾನೇಜರ್, ಲೈಬ್ರರಿ ಆ್ಯಂಡ್ ಇನ್ಫಾರ್ಮೇಷನ್ ಅಸಿಸ್ಟಂಟ್, ಜೂನಿಯರ್ ಟ್ರಾನ್ಸ್ ಲೇಷನ್ ಆಫೀಸರ್, ಅಕೌಂಟಂಟ್, ಸ್ಟೆನೊಗ್ರಾಫರ್ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುತ್ತಿದೆ. ನೇಮಕಾತಿ ಹೊಂದಿದವರಿಗೆ ಆಯಾ ಹುದ್ದೆಗಳಿಗೆ ಅನುಗುಣವಾಗಿ 1.77 ಲಕ್ಷ ರೂಪಾಯಿವರೆಗೆ ಸಂಬಳ ನೀಡಲಾಗುತ್ತದೆ. ಎಂಬಿಎ, ಲೈಬ್ರರಿ ಸೈನ್ಸ್ ನಲ್ಲಿ ಪದವಿ, ಸ್ನಾತಕೋತ್ತರ ಪದವಿ ಕೋರ್ಸ್ ಮುಗಿಸಿದವರು ಅರ್ಜಿಗಳನ್ನು ಸಲ್ಲಿಸಲು ಅರ್ಹರಾಗಿದ್ದಾರೆ.
ಗರಿಷ್ಠ 30 ವರ್ಷದೊಳಗಿನ ಅಭ್ಯರ್ಥಿಗಳು ಅರ್ಜಿಗಳನ್ನು ಸಲ್ಲಿಸಲು ಅರ್ಹರಾಗಿದ್ದಾರೆ. ಕಂಪ್ಯೂಟರ್ ಆಧಾರಿತ ಪರೀಕ್ಷೆ, ಸಂದರ್ಶನ ಹಾಗೂ ಕೌಶಲ ಪರೀಕ್ಷೆಯ ಮೂಲಕ ನೇಮಕಾತಿ ಮಾಡಿಕೊಳ್ಳಲಾಗುತ್ತದೆ. ಒಬಿಸಿ, ಇಡಬ್ಲ್ಯೂಎಸ್ ಸಮುದಾಯದವರಿಗೆ 500 ರೂಪಾಯಿ ಅರ್ಜಿ ಶುಲ್ಕವಿದೆ. ಉಳಿದವರಿಗೆ ಅರ್ಜಿ ಶುಲ್ಕದಿಂದ ವಿನಾಯಿತಿ ನೀಡಲಾಗಿದೆ.
ಅರ್ಜಿ ಸಲ್ಲಿಸುವುದು ಹೇಗೆ?
ಮೊದಲಿಗೆ ಅಧಿಕೃತ ವೆಬ್ ಸೈಟ್ ಆಗಿರುವ https://nhai.gov.in/ ಗೆ ಭೇಟಿ ನೀಡಬೇಕು
ನಿಮಗೆ ಬೇಕಾದ ಹುದ್ದೆಗಳ ಅಧಿಸೂಚನೆಯನ್ನು ಓದಿ ಅರ್ಹತೆ ಪರಿಶೀಲಿಸಬೇಕು.
ಆನ್ ಲೈನ್ ಅರ್ಜಿ ನಮೂನೆಯ ಲಿಂಕ್ ತೆರೆದು, ಭರ್ತಿ ಮಾಡಬೇಕು
ಅಗತ್ಯ ದಾಖಲೆಗಳೊಂದಿಗೆ ಅರ್ಜಿಯನ್ನು ಸಲ್ಲಿಸಬೇಕು
ಫ್ಯೂಚರ್ ರೆಫರೆನ್ಸಿಗಾಗಿ ಅರ್ಜಿ ನಮೂನೆಯ ಪ್ರಿಂಟೌಟ್ ತೆಗೆದಿಟ್ಟುಕೊಳ್ಳಬೇಕು
ಇದನ್ನು ಓದಿ : ಕರ್ನಾಟಕ ಪರೀಕ್ಷಾ ಪ್ರಾಧಿಕಾರದಲ್ಲಿ 44 ಹುದ್ದೆಗಳ ನೇಮಕ: ಕೂಡಲೇ ಅರ್ಜಿ ಸಲ್ಲಿಸಿ



















