ಬೆಂಗಳೂರು: ಬ್ಯಾಂಕಿಂಗ್ ಕ್ಷೇತ್ರದಲ್ಲಿ ಭವಿಷ್ಯ ರೂಪಿಸಿಕೊಳ್ಳಬೇಕು ಎಂದು ಕನಸು ಕಾಣುತ್ತಿರುವವರಿಗೆ ಗುಡ್ ನ್ಯೂಸ್ ಸಿಕ್ಕಿದೆ. ನ್ಯಾಷನಲ್ ಹೌಸಿಂಗ್ ಬ್ಯಾಂಕಿನಲ್ಲಿ (NHB Recruitment 2025) ಖಾಲಿ ಇರುವ 7 ಹುದ್ದೆಗಳ ನೇಮಕಾತಿಗಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆನ್ ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಲು ಅವಕಾಶ ನೀಡಲಾಗಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಅರ್ಜಿಗಳನ್ನು ಸಲ್ಲಿಸುವ ಮೂಲಕ ಉದ್ಯೋಗ ಗಿಟ್ಟಿಸಿಕೊಳ್ಳಬಹುದಾಗಿದೆ.
“ಹುದ್ದೆಗಳ ವಿವರ”
ನೇಮಕಾತಿ ಸಂಸ್ಥೆ: ನ್ಯಾಷನಲ್ ಹೌಸಿಂಗ್ ಬ್ಯಾಂಕ್
ಹುದ್ದೆಗಳ ಹೆಸರು: ಜನರಲ್ ಮ್ಯಾನೇಜರ್, ಡೆಪ್ಯುಟಿ ಮ್ಯಾನೇಜರ್ ಇತ್ಯಾದಿ
ಒಟ್ಟು ಹುದ್ದೆಗಳು: 07
ಅರ್ಜಿ ಸಲ್ಲಿಕೆ ವಿಧಾನ: ಆನ್ ಲೈನ್
ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ: ಅಕ್ಟೋಬರ್ 21
ಉದ್ಯೋಗ ಸ್ಥಳ: ಅಖಿಲ ಭಾರತ
ಜನರಲ್ ಮ್ಯಾನೇಜರ್ (ಕ್ರೆಡಿಟ್ ಮಾನಿಟರಿಂಗ್), ಡೆಪ್ಯುಟಿ ಮ್ಯಾನೇಜರ್ (ಎಚ್ ಆರ್), ಡೆಪ್ಯುಟಿ ಮ್ಯಾನೇಜರ್ (ಆಡಿಟ್), ಜನರಲ್ ಮ್ಯಾನೇಜರ್ (ಎಚ್ ಆರ್) ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುತ್ತಿದೆ. ಸಿಎ, ಎಂಬಿಎ, ಸ್ನಾತಕೋತ್ತರ ಪದವಿ, ಪದವಿ, ಪಿಜಿಡಿಎಂ ಕೋರ್ಸ್ ಗಳನ್ನು ಮುಗಿಸಿದವರು ಅರ್ಜಿಗಳನ್ನು ಸಲ್ಲಿಸಲು ಅರ್ಹರಾಗಿದ್ದಾರೆ.
ಕನಿಷ್ಠ 23ರಿಂದ ಗರಿಷ್ಠ 56 ವರ್ಷದೊಳಗಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಎಸ್ಸಿ, ಎಸ್ಟಿ, ಪಿಡಬ್ಲ್ಯೂಬಿಡಿ ಅಭ್ಯರ್ಥಿಗಳಿಗೆ 175 ರೂಪಾಯಿ ಅರ್ಜಿ ಶುಲ್ಕವಿದೆ. ಉಳಿದೆಲ್ಲ ಸಮುದಾಯದವರಿಗೆ 850 ರೂಪಾಯಿ ಅರ್ಜಿ ಶುಲ್ಕವನ್ನು ನಿಗದಿಪಡಿಸಲಾಗಿದೆ. ನೇಮಕಾತಿ ಹೊಂದಿದವರಿಗೆ ಮಾಸಿಕ 1.73 ಲಕ್ಷ ರೂಪಾಯಿ ಸಂಬಳ ನೀಡಲಾಗುತ್ತದೆ. ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು nhb.org.in ವೆಬ್ ಸೈಟ್ ಗೆ ಭೇಟಿ ನೀಡಬಹುದಾಗಿದೆ.