ಬೆಂಗಳೂರು : ಕೇಂದ್ರ ಸರ್ಕಾರದ ಅಧೀನದಲ್ಲಿ ಕಾರ್ಯನಿರ್ವಹಿಸುವ ನ್ಯಾಷನಲ್ ಹೈವೇಸ್ ಆ್ಯಂಡ್ ಇನ್ ಫ್ರಾಸ್ಟ್ರಕ್ಚರ್ ಡೆವಲಪ್ ಮೆಂಟ್ ಕಾರ್ಪೊರೇಷನ್ ಲಿಮಿಟೆಡ್ ಸಂಸ್ಥೆಯಲ್ಲಿ (NHIDCL Recruitment 2026) ಖಾಲಿ ಇರುವ 15 ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಲಾಗಿದೆ. ಡೆಪ್ಯೂಟಿ ಮ್ಯಾನೇಜರ್ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುತ್ತಿದೆ. ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ. ಅರ್ಜಿ ಸಲ್ಲಿಸುವುದು ಹೇಗೆ ಎಂಬುದು ಸೇರಿ ವಿವಿಧ ಮಾಹಿತಿ ಇಲ್ಲಿದೆ.
ಹುದ್ದೆಗಳ ವಿವರ
ನೇಮಕಾತಿ ಸಂಸ್ಥೆ: ನ್ಯಾಷನಲ್ ಹೈವೇಸ್ ಆ್ಯಂಡ್ ಇನ್ ಫ್ರಾಸ್ಟ್ರಕ್ಚರ್ ಡೆವಲಪ್ ಮೆಂಟ್ ಕಾರ್ಪೊರೇಷನ್ ಲಿಮಿಟೆಡ್ (NHIDCL)
ಹುದ್ದೆ ಹೆಸರು: ಡೆಪ್ಯೂಟಿ ಮ್ಯಾನೇಜರ್
ಒಟ್ಟು ಹುದ್ದೆ: 15
ಉದ್ಯೋಗ ಸ್ಥಳ: ದೇಶಾದ್ಯಂತ
ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ: ಮಾರ್ಚ್ 27
ದೇಶದ ಯಾವುದೇ ಭಾಗದಲ್ಲಿ ಕೆಲಸ ಮಾಡಲು ಇಚ್ಛಿಸುವವರು ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಬಯಸುವವರು ಮಾನ್ಯತೆ ಪಡೆದ ಯಾವುದೇ ವಿಶ್ವವಿದ್ಯಾಲಯ ಅಥವಾ ಮಂಡಳಿಗಳಿಂದ ಸಿಎ, ಸಿಎಂಎ, ಎಂ.ಕಾಂ ಹಾಗೂ ಎಂಬಿಎ ಕೋರ್ಸ್ ಮುಗಿಸಿರಬೇಕು ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ. ಗರಿಷ್ಠ 34 ವರ್ಷದೊಳಗಿನವರು ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ. ಅರ್ಜಿ ಸಲ್ಲಿಸಲು ಯಾವುದೇ ಶುಲ್ಕ ಇರುವುದಿಲ್ಲ.
ಎಸ್ಸಿ, ಎಸ್ಟಿ ಅಭ್ಯರ್ಥಿಗಳಿಗೆ 5 ವರ್ಷಗಳ ವಯೋಮಿತಿ ಸಡಿಲಿಕೆ ಇದೆ. ಒಬಿಸಿ ಸಮುದಾಯದವರಿಗೆ 3 ವರ್ಷಗಳ ಸಡಿಲಿಕೆ ಇದೆ. ಸಲ್ಲಿಕೆಯಾದ ಅರ್ಜಿಗಳನ್ನು ಮೊದಲು ಪರಿಶೀಲನೆ ಮಾಡಲಾಗುತ್ತದೆ. ಇದಾದ ಬಳಿಕ ಲಿಖಿತ ಪರೀಕ್ಷೆ ಹಾಗೂ ಸಂದರ್ಶನದ ಮೂಲಕ ನೇಮಕಾತಿ ಮಾಡಿಕೊಳ್ಳಲಾಗುತ್ತದೆ ಎಂದು ಅಧಿಸೂಚನೆಯಲ್ಲಿ ಮಾಹಿತಿ ನೀಡಲಾಗಿದೆ.
ಅರ್ಜಿ ಸಲ್ಲಿಸೋದು ಹೇಗೆ?
ಮೊದಲಿಗೆ ಅಧಿಕೃತ ವೆಬ್ ಸೈಟ್ nhidcl.com ಗೆ ಭೇಟಿ ನೀಡಬೇಕು.
ನಿಮಗೆ ಬೇಕಾದ ಹುದ್ದೆಯ ವಿಭಾಗವನ್ನು ಆಯ್ಕೆ ಮಾಡಬೇಕು.
ಹುದ್ದೆಯ ಅಧಿಸೂಚನೆ ಓದಬೇಕು
ಅರ್ಜಿಯ ಪ್ರಿಂಟೌಟ್ ತೆಗದುಕೊಂಡು ಭರ್ತಿ ಮಾಡಬೇಕು
ಅಗತ್ಯ ದಾಖಲೆಗಳೊಂದಿಗೆ ಅರ್ಜಿಯನ್ನು ಸಲ್ಲಿಸಬೇಕು
ಫ್ಯೂಚರ್ ರೆಫರೆನ್ಸಿಗಾಗಿ ಅರ್ಜಿ ನಮೂನೆಯ ಪ್ರಿಂಟೌಟ್ ತೆಗೆದುಕೊಳ್ಳಬೇಕು
ಇದನ್ನೂ ಓದಿ : ದಾವಣಗೆರೆ ದುರ್ಗಾಂಭಿಕಾ ದೇವಿ ಜಾತ್ರೆಯಲ್ಲಿ ಕಿಡಿಗೇಡಿಗಳ ಅಟ್ಟಾಹಾಸ | ಸಿಕ್ಕಸಿಕ್ಕವರ ಮೇಲೆ ಹಲ್ಲೆ ಮಾಡಿದ ಯುವಕರು!



















