ಬೆಂಗಳೂರು : ಕರ್ನಾಟಕ ಸರ್ಕಾರದ ಸಂಸ್ಥೆಯಲ್ಲಿ ಕೆಲಸ ಮಾಡಬೇಕು ಎಂದು ಬಯಸುತ್ತಿರುವವರಿಗೆ ಶುಭ ಸಮಾಚಾರ ದೊರೆತಿದೆ. ರಾಜ್ಯ ಸರ್ಕಾರದ ಅಧೀನದಲ್ಲಿ ಕಾರ್ಯನಿರ್ವಹಿಸುವ ರಾಷ್ಟ್ರೀಯ ಆರೋಗ್ಯ ಮಿಷನ್‌ನಲ್ಲಿ ಖಾಲಿ ಇರುವ 13 ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಲಾಗಿದೆ. ನೇರ ಸಂದರ್ಶನದ ಮೂಲಕ ನೇಮಕಾತಿ (NHM Karnataka Recruitment 2026) ಮಾಡಿಕೊಳ್ಳಲಾಗುತ್ತಿದೆ. ಸಂದರ್ಶನದ ದಿನಾಂಕ ಸೇರಿ ನೇಮಕಾತಿಗೆ ಸಂಬಂಧಿಸಿದ ಹೆಚ್ಚಿನ ಮಾಹಿತಿ ಇಲ್ಲಿದೆ.
ಹುದ್ದೆಗಳ ವಿವರ
ನೇಮಕಾತಿ ಸಂಸ್ಥೆ: ರಾಷ್ಟ್ರೀಯ ಆರೋಗ್ಯ ಮಿಷನ್, ಕರ್ನಾಟಕ
ಒಟ್ಟು ಹುದ್ದೆಗಳ ಸಂಖ್ಯೆ: 13
ಹುದ್ದೆ ಹೆಸರು: ಮೆಡಿಕಲ್ ಆಫೀಸರ್, ಟೆಕ್ನಿಕಲ್ ಆಫೀಸರ್ ಇತ್ಯಾದಿ
ಉದ್ಯೋಗ ಸ್ಥಳ: ಬೆಂಗಳೂರು
ಸಂದರ್ಶನದ ದಿನಾಂಕ: ಏಪ್ರಿಲ್ 6
ಮೆಡಿಕಲ್ ಆಫೀಸರ್, ಟೆಕ್ನಿಕಲ್ ಆಫೀಸರ್, ಕನ್ಸಲ್ಟಂಟ್, ವ್ಯಾಕ್ಸಿನ್ ಲಾಜಿಸ್ಟಿಕ್ ಮ್ಯಾನೇಜರ್, ಮ್ಯಾನೇಜರ್ ಹುದ್ದೆಗಳ ನೇಮಕಾತಿ ನಡೆಯುತ್ತಿದೆ. ಮಾನ್ಯತೆ ಪಡೆದ ಯಾವುದೇ ವಿಶ್ವವಿದ್ಯಾಲಯದಿಂದ ಡಿಪ್ಲೋಮಾ, ಡಿಗ್ರಿ, ಎಂಬಿಬಿಎಸ್, ಎಲ್ ಎಲ್ ಬಿ, ಎಂಸಿಎ, ಎಂಬಿಎ ಕೋರ್ಸ್ ಪೂರ್ಣಗೊಳಿಸಿದವರು ಅರ್ಜಿ ಸಲ್ಲಿಸಬಹುದಾಗಿದೆ. ಅಭ್ಯರ್ಥಿಗಳಿಗೆ ಗರಿಷ್ಠ 45 ವರ್ಷಗಳ ವಯೋಮಿತಿ ನಿಗದಿಪಡಿಸಲಾಗಿದೆ.
ನೇಮಕಾತಿ ಹೊಂದಿದವರಿಗೆ ಆಯಾ ಹುದ್ದೆಗಳಿಗೆ ಅನುಗುಣವಾಗಿ ಮಾಸಿಕ 80 ಸಾವಿರ ರೂಪಾಯಿವರೆಗೆ ಸಂಬಳ ನೀಡಲಾಗುತ್ತದೆ. ಹೆಚ್ಚಿನ ಮಾಹಿತಿಗೆ nhm.karnataka.gov.in ಗೆ ಭೇಟಿ ನೀಡಬಹುದಾಗಿದೆ. ಗ್ರಾಮೀಣ ಮತ್ತು ನಗರ ಪ್ರದೇಶಗಳ ಜನರಿಗೆ, ವಿಶೇಷವಾಗಿ ಬಡವರು ಮತ್ತು ದುರ್ಬಲ ಗುಂಪುಗಳಿಗೆ ಗುಣಮಟ್ಟದ ಆರೋಗ್ಯ ಸೇವೆ ಒದಗಿಸಲು ಕರ್ನಾಟಕದಲ್ಲಿ ರಾಷ್ಟ್ರೀಯ ಆರೋಗ್ಯ ಮಿಷನ್ ಸ್ಥಾಪಿಸಲಾಗಿದೆ.
ಸಂದರ್ಶನ ನಡೆಯುವ ಸ್ಥಳ
The office of Chief Administrative Officer, National Health Mission, 1st Floor West wing, Arogya Soudha, Magadi Road, 1st Cross, Bengaluru 560023
ಇದನ್ನೂ ಓದಿ : “ಕೆಕೆಆರ್ ಎಂದರೆ ಮೊದಲು ಶಾರುಖ್ ಖಾನ್, ಆಮೇಲೆ ರಿಂಕು ಸಿಂಗ್” | ಅಜಿಂಕ್ಯ ರಹಾನೆ



















