ಬೆಂಗಳೂರು: ಕೇಂದ್ರ ಸರ್ಕಾರದ ಅಧೀನದಲ್ಲಿ ಕಾರ್ಯನಿರ್ವಹಿಸುವ ರಾಷ್ಟ್ರೀಯ ಜಲ ವಿದ್ಯುತ್ ನಿಗಮ (NHPC)ದಲ್ಲಿ ಖಾಲಿ ಇರುವ 361 ಹುದ್ದೆಗಳ ನೇಮಕಾತಿಗಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಇದರೊಂದಿಗೆ ಸರ್ಕಾರಿ ಉದ್ಯೋಗ ಪಡೆಯಬೇಕು ಎಂಬ ಹಂಬಲ ಹೊಂದಿದವರಿಗೆ ಶುಭ ಸುದ್ದಿ ಸಿಕ್ಕಂತಾಗಿದೆ. ಆನ್ ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದ್ದು, ಅಭ್ಯರ್ಥಿಗಳು ಆಗಸ್ಟ್ 11ರೊಳಗೆ ಅರ್ಜಿ ಸಲ್ಲಿಸಬೇಕಾಗಿದೆ.
ಹುದ್ದೆಗಳ ವಿವರ
ಹುದ್ದೆಯ ಹೆಸರು: ಅಪ್ರೆಂಟಿಸ್
ಒಟ್ಟು ಹುದ್ದೆಗಳು: 361
ಉದ್ಯೋಗ ಸ್ಥಳ: ದೇಶಾದ್ಯಂತ
ಅರ್ಜಿ ಸಲ್ಲಿಕೆ ಆರಂಭ: ಜುಲೈ 11
ಕೊನೆಯ ದಿನಾಂಕ: ಆಗಸ್ಟ್ 11
ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಪದವಿ, ಡಿಪ್ಲೋಮಾ, ಐಟಿಐ, ಬಿಎಸ್ಸಿ, ಬಿಟೆಕ್ ಕೋರ್ಸ್ ಗಳನ್ನು ಮುಗಿಸಿರಬೇಕು ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ. ಕನಿಷ್ಠ 18ರಿಂದ 30 ವರ್ಷದ ವಯೋಮಿತಿಯವರು ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಯಾವುದೇ ಶುಲ್ಕವಿರುವುದಿಲ್ಲ.
ನೇಮಕಾತಿ ಹೊಂದಿದವರಿಗೆ ಮಾಸಿಕ 12 ಸಾವಿರ ರೂಪಾಯಿಯಿಂದ 15 ಸಾವಿರ ರೂಪಾಯಿವರೆಗೆ ವೇತನ ನೀಡಲಾಗುತ್ತದೆ. ಮೊದಲು ಸಲ್ಲಿಕೆಯಾದ ಅರ್ಜಿಗಳನ್ನು ಪರಿಶೀಲನೆ ಮಾಡಲಾಗುತ್ತದೆ. ನಂತರ ಮೆರಿಟ್ ಪಟ್ಟಿಯನ್ನು ಬಿಡುಗಡೆ ಮಾಡುವ ಮೂಲಕ ನೇಮಕಾತಿ ಮಾಡಿಕೊಳ್ಳಲಾಗುತ್ತದೆ.
ಅಭ್ಯರ್ಥಿಗಳು ಮೊದಲಿಗೆ ಅಧಿಕೃತ ವೆಬ್ಸೈಟ್ ಆಗಿರುವ https://www.nhpcindia.com/ಗೆ ಭೇಟಿ ನೀಡಬೇಕು. ಅಧಿಸೂಚನೆಯನ್ನು ಓದಿಕೊಂಡು ಅರ್ಹತೆಗಳನ್ನು ಪರಿಶೀಲನೆ ಮಾಡಬೇಕು. ನಂತರ ಆನ್ ಲೈನ್ ಮೂಲಕವೇ ಅರ್ಜಿಯನ್ನು ಭರ್ತಿ ಮಾಡಬೇಕು. ಅಗತ್ಯ ದಾಖಲೆಗಳನ್ನು ಅಪ್ ಲೋಡ್ ಮಾಡುವ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.



















