ದೆಹಲಿ : ನವೆಂಬರ್ 10ರ ಸಂಜೆ ದೆಹಲಿಯ ಕೆಂಪು ಕೋಟೆ ಬಳಿ ನಡೆದ ಉಗ್ರರ ಅಟ್ಟಹಾಸಕ್ಕೆ ದೇಶವೇ ಬೆಚ್ಚಿ ಬಿದ್ದಿದೆ. ಶಂಕಿತ ಆತ್ಮಹತ್ಯಾ ಬಾಂಬರ್ ಕಾರು ಸ್ಫೋಟಿಸಿ 12 ಮಂದಿಯನ್ನು ಬಲಿ ಪಡೆದುಕೊಂಡಿದ್ದಾನೆ. ಇದೀಗ ಭಾರತ ಭಯೋತ್ಪಾದಕರಿಗೆ ಎಚ್ಚರಿಕೆಯ ಸಂದೇಶ ರವಾನಿಸಿದ್ದು, ಕಠಿಣ ಕ್ರಮದ ಸೂಚನೆ ನೀಡಿದೆ.

ಈ ಬೆನ್ನಲ್ಲೇ ಪ್ರಕರಣದ ತನಿಖೆಯ ಹೊಣೆಯನ್ನು ಎನ್ಐಎ (ರಾಷ್ಟ್ರೀಯ ತನಿಖಾ ಸಂಸ್ಥೆ)ಗೆ ವಹಿಸಲಾಗಿದೆ. ಇಂದು (ಮಂಗಳವಾರ) ಬೆಳಿಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ನಿವಾಸದಲ್ಲಿ ನಡೆದ ಉನ್ನತ ಮಟ್ಟದ ಭದ್ರತಾ ಪರಿಶೀಲನಾ ಸಭೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ಈ ಮೂಲಕ 12 ಜನರು ಸಾವನ್ನಪ್ಪಿ 25ಕ್ಕೂ ಹೆಚ್ಚು ಜನರು ಗಾಯಗೊಂಡ ದೆಹಲಿ ಕೆಂಪು ಕೋಟೆ ಸ್ಫೋಟದ ತನಿಖೆಯನ್ನು ರಾಷ್ಟ್ರೀಯ ತನಿಖಾ ಸಂಸ್ಥೆ (NIA) ಅಧಿಕೃತವಾಗಿ ವಹಿಸಿಕೊಂಡಿದೆ.
ದೆಹಲಿ ಪೊಲೀಸರು ಪಹರ್‌ಗಂಜ್, ದರಿಯಾಗಂಜ್ ಮತ್ತು ಹತ್ತಿರದ ಪ್ರದೇಶಗಳಲ್ಲಿನ ಹೋಟೆಲ್‌ಗಳಲ್ಲಿ ರಾತ್ರಿಯಿಡೀ ದಾಳಿ ನಡೆಸಿ, ಹೋಟೆಲ್ ನೋಂದಣಿಗಳನ್ನು ಸಂಪೂರ್ಣವಾಗಿ ಪರಿಶೀಲಿಸುತ್ತಿದ್ದಾರೆ. ಹಲವರನ್ನು ವಿಚಾರಣೆಗಾಗಿ ವಶಕ್ಕೆ ಪಡೆಯಲಾಗಿದೆ. ಈಗಾಗಲೇ ದೆಹಲಿಯಲ್ಲಿ ಹೆಚ್ಚಿನ ಕಟ್ಟೆಚ್ಚರ ವಹಿಸಲಾಗಿದ್ದು, ವಿಮಾನ ನಿಲ್ದಾಣಗಳು, ರೈಲು ನಿಲ್ದಾಣಗಳು ಮತ್ತು ಬಸ್ ಟರ್ಮಿನಲ್‌ಗಳಲ್ಲಿ ಕಟ್ಟುನಿಟ್ಟಿನ ಎಚ್ಚರ ವಹಿಸಲಾಗಿದೆ.
ಇದನ್ನೂ ಓದಿ : ದೆಹಲಿ ಸ್ಫೋಟದಲ್ಲಿ ಬಾಧಿತರಿಗೆ ನಮ್ಮ ಪ್ರಾರ್ಥನೆಗಳಿವೆ | RCB ಸಂತಾಪ



















