ಬೆಂಗಳೂರು : ರಾಷ್ಟ್ರೀಯ ತನಿಖಾ ಸಂಸ್ಥೆಯಲ್ಲಿ ಖಾಲಿ ಇರುವ 29 ಹುದ್ದೆಗಳ ನೇಮಕಾತಿಗಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅಸಿಸ್ಟಂಟ್, ಸ್ಟೆನೊಗ್ರಾಫರ್ ಸೇರಿ ಹಲವು ಹುದ್ದೆಗಳನ್ನು ಭರ್ತಿ (NIA Recruitment 2026) ಮಾಡಿಕೊಳ್ಳಲಾಗುತ್ತಿದೆ. ಅರ್ಹ ಹಾಗೂ ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ನೇಮಕಾತಿಗೆ ಸಂಬಂಧಿಸಿದ ಪ್ರತಿಯೊಂದು ಮಾಹಿತಿ ಇಲ್ಲಿದೆ.
ಹುದ್ದೆಗಳ ಸಂಕ್ಷಿಪ್ತ ವಿವರ
ನೇಮಕಾತಿ ಸಂಸ್ಥೆ: ರಾಷ್ಟ್ರೀಯ ತನಿಖಾ ಸಂಸ್ಥೆ
ಒಟ್ಟು ಹುದ್ದೆಗಳು: 29
ಹುದ್ದೆಗಳ ಹೆಸರು: ಅಸಿಸ್ಟಂಟ್, ಸ್ಟೆನೊಗ್ರಾಫರ್ ಇತ್ಯಾದಿ
ಉದ್ಯೋಗ ಸ್ಥಳ: ದೇಶಾದ್ಯಂತ
ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ: ಮೇ 17
3 ಸೆಕ್ಷನ್ ಆಫೀಸರ್, 3 ಅಸಿಸ್ಟಂಟ್, 14 ಸ್ಟೆನೊಗ್ರಾಫರ್, 3 ಅಪ್ಪರ್ ಡಿವಿಷನ್ ಕ್ಲರ್ಕ್, 6 ಲೋವರ್ ಡಿವಿಷನ್ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುತ್ತಿದೆ. ಅರ್ಜಿ ಸಲ್ಲಿಸುವವರು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪಿಯುಸಿ, ಪದವಿ ಕೋರ್ಸ್ ಮುಗಿಸಿರಬೇಕು ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ. ಅರ್ಜಿ ಸಲ್ಲಿಸುವವರಿಗೆ ಗರಿಷ್ಠ 56 ವರ್ಷಗಳ ವಯೋಮಿತಿಯನ್ನು ನಿಗದಿಪಡಿಸಲಾಗಿದೆ. ನೇಮಕಾತಿ ಹೊಂದಿದವರಿಗೆ ಆಯಾ ಹುದ್ದೆಗಳಿಗೆ ಅನುಗುಣವಾಗಿ ಮಾಸಿಕ 1.12 ಲಕ್ಷ ರೂಪಾಯಿ ಸಂಬಳ ನೀಡಲಾಗುತ್ತದೆ.
ಅರ್ಜಿ ಸಲ್ಲಿಸುವುದು ಹೇಗೆ?
ಮೊದಲಿಗೆ ಅಧಿಕೃತ ವೆಬ್ ಸೈಟ್ ಆಗಿರುವ nia.gov.in ಗೆ ಭೇಟಿ ನೀಡಬೇಕು
ನಿಮಗೆ ಬೇಕಾದ ಹುದ್ದೆಗಳ ಅಧಿಸೂಚನೆಯನ್ನು ಓದಿ ಅರ್ಹತೆ ಪರಿಶೀಲಿಸಬೇಕು.
ಅರ್ಜಿಯ ಪ್ರಿಂಟೌಟ್ ತೆಗೆದುಕೊಂಡು ಭರ್ತಿ ಮಾಡಬೇಕು
ಅಗತ್ಯ ದಾಖಲೆಗಳೊಂದಿಗೆ ಅರ್ಜಿಯನ್ನು ಈ ಕೆಳಗಿನ ವಿಳಾಸಕ್ಕೆ ಕಳುಹಿಸಬೇಕು
ಅರ್ಜಿ ಸಲ್ಲಿಸಬೇಕಾದ ವಿಳಾಸ
DIG (Admin), NIA Hqrs, CGO Complex, Lodhi Road, New Delhi – 110003
ಇದನ್ನೂ ಓದಿ : ಮಣಿಪಾಲ ಅಪಹರಣ ಕೇಸ್ – ತೆಲಂಗಾಣದಲ್ಲಿ ಆರೋಪಿಗಳ ಬಂಧನ!



















