ನಟ ಪ್ರವೀರ್ ಶೆಟ್ಟಿ ಅಭಿನಯದ ’ನಿದ್ರಾದೇವಿ Next Door’ ಚಿತ್ರದ ಟೀಸರ್ ಬಿಡುಗಡೆಯಾಗಿದ್ದು, ಭಾರೀ ನಿರೀಕ್ಷೆ ಮೂಡಿಸಿದೆ.
ಇತ್ತೀಚೆಗಷ್ಟೇ ಚಿತ್ರದ ಟೀಸರ್ ಬಿಡುಗಡೆಯಾಗಿದ್ದು, ಸಿನಿ ರಸಿಕರು ಮೆಚ್ಚಿಕೊಳ್ಳುತ್ತಿದ್ದಾರೆ. ಸೈರನ್ ಸಿನಿಮಾ ಮೂಲಕ ಸ್ಯಾಂಡಲ್ ವುಡ್ ಗೆ ಎಂಟ್ರಿ ಕೊಟ್ಟಿದ್ದ ಪ್ರವೀರ್ ಶೆಟ್ಟಿ ಈಗ ’ನಿದ್ರಾದೇವಿ Next Door’ ಚಿತ್ರದ ಮೂಲಕ ಪ್ರೇಕ್ಷಕರನ್ನು ರಂಜಿಸಲು ಬರುತ್ತಿದ್ದಾರೆ. ಅಲ್ಲದೇ, ಉತ್ತಮ ಕಂಟೆಂಟ್ ಹೊಂದಿರುವ ಚಿತ್ರದಲ್ಲಿ ಪ್ರವೀರ್ ಕಾಣಿಸಿಕೊಂಡಿದ್ದಾರೆ ಎಂದು ಜನರು ಮಾತನಾಡಿಕೊಳ್ಳುತ್ತಿದ್ದಾರೆ.
ಮಲಯಾಳಿ ಸಿನಿಮಾಗಳ ರೀತಿ ಈ ಚಿತ್ರವೂ ಉತ್ತಮ ಕೆಂಟಂಟ್ ಬೇಸ್ ಹೊಂದಿದೆ. ಚಿತ್ರದ ಗ್ರಾಫಿಕ್ಸ್, ಮ್ಯೂಜಿಕ್, ಕ್ಯಾಮೆರಾದ ಕೆಲಸಗಳು ಸಿನಿ ರಸಿಕರನ್ನು ಕೈ ಬೀಸಿ ಕರೆಯುವಂತಿವೆ. ಸುರಾಗ್ ಸಾಗರ್ ನಿರ್ದೇಶನದ ಚೊಚ್ಚಲ ಚಿತ್ರ ಇದಾಗಿದ್ದು, ಪ್ರವೀರ್ ಶೆಟ್ಟಿ ಜೊತೆಗೆ ಶೈನ್ ಶೆಟ್ಟಿ ಕೂಡ ನಟಿಸಿದ್ದಾರೆ. ಪ್ರವೀರ್ ಶೆಟ್ಟಿ ಚಿತ್ರದಲ್ಲಿ ಉತ್ತಮವಾಗಿ ನಟಿಸಿದ್ದಾರೆ. ನಾಯಕಿಯಾಗಿ ರಿಷಿಕಾ ಅಭಿನಯಿಸಿದ್ದಾರೆ. ಹಿರಿಯ ನಟಿ ಸುಧಾರಾಣಿ, ಶ್ರೀವತ್ಸ, ಕಾರ್ತಿಕ್ ಪತ್ತಾರ್ ಮತ್ತು ಅನುರಾಗ್ ಪಾಟೀಲ್ ಸೇರಿದಂತೆ ಹಲವರು ನಟಿಸಿದ್ದಾರೆ.
ಸೂರಂ ಮೂವೀಸ್ ಬ್ಯಾನರ್ ಅಡಿಯಲ್ಲಿ ಜಯರಾಮ್ ದೇವಸಮುದ್ರ ಬಂಡವಾಳ ಹೂಡಿದ್ದಾರೆ. ಇತ್ತೀಚೆಗೆ ಹೊಸಬರ ತಂಡಕ್ಕೆ ಹಾಗೂ ಹೊಸ ಕಂಟೆಂಟ್ ಗೆ ಯಾರೂ ಬಂಡವಾಳ ಹೂಡಲು ಮುಂದೆ ಬರುತ್ತಿಲ್ಲ. ಈ ವೇಳೆ ಜಯರಾಮ್ ದೇವಸಮುದ್ರ ಅವರು ಈ ಚಿತ್ರಕ್ಕೆ ಕೋಟಿ ಕೋಟಿ ಬಂಡವಾಳ ಹೂಡಿದ್ದಾರೆ. ಈ ಚಿತ್ರಕ್ಕೆ ಅಜಯ್ ಕುಲಕರ್ಣಿ ಅವರ ಛಾಯಾಗ್ರಹಣ ಮತ್ತು ನಕುಲ್ ಅಭ್ಯಂಕರ್ ಅವರ ಸಂಗೀತವಿದೆ.