ರಾಮನಗರ: ಚನ್ನಪಟ್ಟಣ ವಿಧಾನಸಭಾ ಉಪ ಚುನಾವಣೆಯಲ್ಲಿ ಎನ್ ಡಿಎ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿಗೆ ಸೋಲಾಗಿದ್ದಕ್ಕೆ ಮನನೊಂದ ಅಭಿಮಾನಿಗ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ನಡೆದಿದೆ.
ಚನ್ನಪಟ್ಟಣದ ಕೂಡ್ಲುರು ಬಳಿಯ ಶ್ರೀರಂಪುರ ಗ್ರಾಮದ ಮಂಜುನಾಥ್ ಎಂಬ ವ್ಯಕ್ತಿ ಆತ್ಮಹತ್ಯೆಗೆ ಯತ್ನಿಸಿದ್ದು, ಮಂಡ್ಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸ ನೀಡಲಾಗುತ್ತಿದೆ. ನಾನು ನಿಖಿಲ್ ಅಭಿಮಾನಿ, ನನ್ನ ಸಾವಿಗೆ ನಾನೇ ಕಾರಣ, ಜೈ ಜೆಡಿಎಸ್’ ಎಂದು ಪತ್ರ ಬರೆದಿಟ್ಟು ವಿಷ ಸೇವನೆ ಮಾಡಿದ್ದಾನೆ ಎನ್ನಲಾಗಿದೆ.
ಸ್ಥಳಕ್ಕೆ ಭೇಟಿ ನೀಡಿರುವ ಪೊಲೀಸರು, ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ. ಚನ್ನಪಟ್ಟಣ ವಿಧಾನಸಭೆ ಚುನಾವಣೆಯಲ್ಲಿ ಜೆಡಿಎಸ್ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ, ಕಾಂಗ್ರೆಸ್ ಅಭ್ಯರ್ಥಿ ಸಿ.ಪಿ. ಯೋಗೇಶ್ವರ್ ವಿರುದ್ಧ ಸೋಲು ಕಂಡಿದ್ದಾರೆ. ಸಹಜವಾಗಿ ಇದು ಜೆಡಿಎಸ್ ಕಾರ್ಯಕರ್ತರಿಗೆ ನೋವು ತಂದಿದೆ.
ಚನ್ನಪಟ್ಟಣ ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸಿಪಿ ಯೋಗೇಶ್ವರ್ 25,515 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ. ಯೋಗೇಶ್ವರ್ಗೆ 1,12,642 ಮತ ದೊರೆತರೆ, ಎನ್ಡಿಎ ಅಭ್ಯರ್ಥಿ ನಿಖಿಲ್‌ಗೆ 87,229 ಮತಗಳು ಲಭಿಸಿವೆ.