ನವದೆಹಲಿ: ಹ್ಯಾಟ್ರಿಕ್ ಸೋಲು ಕಂಡ ನಿಖಿಲ್ ಕುಮಾರಸ್ವಾಮಿಗೆ ರಾಜ್ಯಾಧ್ಯಕ್ಷ ಸ್ಥಾನ ಸಿಗುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ.
ಈ ಕುರಿತು ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಎಚ್.ಡಿ. ದೇವೇಗೌಡ ಸುಳಿವು ನೀಡಿದ್ದು, ನಿಖಿಲ್ ಕುಮಾರಸ್ವಾಮಿ ಅವರು ನಮ್ಮ ಪಕ್ಷ ಮುನ್ನಡೆಸಲಿದ್ದಾರೆ ಎಂದಿದ್ದಾರೆ.
ಶಾಸಕರಾಗುವುದು ಒಂದೇ ಪ್ರಶ್ನೆಯಲ್ಲ. ಆತ ಯುವಕನಿದ್ದಾನೆ. ರಾಜ್ಯದ ಜವಾಬ್ದಾರಿ, ಪಕ್ಷವನ್ನು ಬೆಳೆಸುವುದಕ್ಕೆ ಅನುಭವ ಇದೆ. ಕುಟುಂಬದ ಹಿನ್ನೆಲೆ ಇದೆ. ಆತನಿಗೆ ಹೆಚ್ಚು ಹೊಣೆಗಾರಿಕೆ ಕೊಟ್ಟು ಪಕ್ಷವನ್ನು ಉಳಿಸಿ ಬೆಳೆಸುತ್ತೇವೆ ಎಂದು ಹೇಳಿದ್ದಾರೆ.
ನಾವು ಕೊನೆಯವರೆಗೂ ಬಿಜೆಪಿಯೊಂದಿಗೆ ಮುನ್ನಡೆಯಲಿದ್ದೇವೆ. ಕಾಂಗ್ರೆಸ್ ನ ದುರಾಡಳಿತ ಹಾಗೂ ಅವರ ಆರೋಪಗಳಿಗೆ ಕುಮಾರಸ್ವಾಮಿ, ನಿಖಿಲ್ ಕುಮಾರಸ್ವಾಮಿ ಹಾಗೂ ನಮ್ಮ ಪಕ್ಷಗಳು ಉತ್ತರ ನೀಡುತ್ತವೆ. ಹಾಸನದಲ್ಲೇ ಸಮಾವೇಶ ಮಾಡಿದ್ದಕ್ಕೆ ನನಗೇನೂ ಬೇಸರವಿಲ್ಲ. ಅವರು ದೇವೇಗೌಡರ ಕುಟುಂಬವನ್ನೇ ಮುಗಿಸುತ್ತೇವೆ ಎಂದರು. ಮುಗಿಸುವುದು ಬಿಡುವುದು ಭಗವಂತನ ಇಚ್ಛೆ ಹಾಗೂ ಜನರ ಇಚ್ಛೆ. ಅದು ಯಾರೋ ಒಬ್ಬರ ಕೈಯಲ್ಲಿಲ್ಲ ಎಂದು ಹೇಳಿದ್ದಾರೆ.