ಚನ್ನಪಟ್ಟಣ: ಚನ್ನಪಟ್ಟಣದಲ್ಲಿ ನಿಖಿಲ್ ಗೆಲ್ಲಿಸುವುದರ ಮೂಲಕ ಸಿಎಂ ಸಿದ್ದರಾಮಯ್ಯಗೆ ತಕ್ಕ ಪಾಠ ಕಲಿಸಿ ಎಂದು ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಗುಡುಗಿದ್ದಾರೆ.
ಚನ್ನಪಟ್ಟಣದಲ್ಲಿ ನಡೆದ ನಿಖಿಲ್ ಪರ ಪ್ರಚಾರ ಸಭೆಯಲ್ಲಿ ಮಾತನಾಡಿದ ಅವರು, ಕ್ಷೇತ್ರದಲ್ಲಿ ಯೋಗೇಶ್ವರ್ ಗೆಲ್ಲುವುದರಿಂದ ಉಪಯೋಗವಿಲ್ಲ. ಒಂದು ರಸ್ತೆ ಗುಂಡಿ ಮುಚ್ಚುವ ಯೋಗ್ಯತೆಯೂ ಈ ಸರ್ಕಾರಕ್ಕೆ ಇಲ್ಲ. ಇಲ್ಲಿ ಕಾಂಗ್ರೆಸ್ ಗೆಲ್ಲಿಸಿದರೆ, ಅಭಿವೃದ್ಧಿ ಶೂನ್ಯವಾಗುತ್ತದೆ. ಈ ಸರ್ಕಾರ ಭ್ರಷ್ಟಾಚಾರದಲ್ಲಿ ಮುಳುಗಿ ಹೋಗಿದೆ ಎಂದು ಆರೋಪಿಸಿದ್ದಾರೆ.
ಈ ಸರ್ಕಾರ ನಾವು ಜಾರಿಗೆ ತಂದ ಹಲವಾರು ಜನಪರ ಯೋಜನೆಗಳನ್ನು ನಿಲ್ಲಿಸಿದೆ. ಇದು ದಿವಾಳಿ ಸರ್ಕಾರ. ಹೀಗಾಗಿ ಕಾಂಗ್ರೆಸ್ ಅಭ್ಯರ್ಥಿಗೆ ಮತ ನೀಡಿ. ಈ ಬಾರಿ ನಿಖಿಲ್ ನನ್ನು 25 ಸಾವಿರಕ್ಕಿಂತ ಹೆಚ್ಚು ಮತಗಳಿಂದ ಗೆಲ್ಲಿಸಿ ಎಂದಿದ್ದಾರೆ.