ರಾಮನಗರ: ಚನ್ನಪಟ್ಟಣ ಉಪಚುನಾವಣೆಯಲ್ಲಿ ಸೋತಿದ್ದಕ್ಕೆ ಮನನೊಂದು ಆತ್ಮಹತ್ಯೆಗೆ ಯತ್ನಿಸಿದ ಕಾರ್ಯಕರ್ತನ ಮನೆಗೆ ನಿಖಿಲ್ ಕುಮಾರಸ್ವಾಮಿ ಭೇಟಿ ನೀಡಿ ಆರೋಗ್ಯ ವಿಚಾರಿಸಿದ್ದಾರೆ.
ಕೂಡ್ಲೂರು ಪಂಚಾಯಿತಿಯ ಶ್ರೀರಾಂಪುರ ಗ್ರಾಮದ ಜೆಡಿಎಸ್ ಕಾರ್ಯಕರ್ತ ಮಂಜುನಾಥ್ ಅವರ ನಿವಾಸಕ್ಕೆ ನಿಖಿಲ್ ಕುಮಾರಸ್ವಾಮಿ ಭೇಟಿ ನೀಡಿ, ಆರೋಗ್ಯ ವಿಚಾರಿಸಿದರು. ಈ ಸಂದರ್ಭದಲ್ಲಿ ಯುವಕನಿಗೆ ಧೈರ್ಯ ತುಂಬಿ, ದುಡುಕಿನ ನಿರ್ಧಾರ ಕೈಗೊಳ್ಳದಂತೆ ಹೇಳಿದ್ದಾರೆ.
ಸೋಲೇ ಗೆಲುವಿನ ಮೆಟ್ಟಿಲು. ಹೀಗಾಗಿ ಯಾರೂ ಧೃತಿಗೆಡಬಾರದು, ನಾವೆಲ್ಲರೂ ಪಕ್ಷದ ಜತೆ ನಿಂತು ಕೆಲಸ ಮಾಡೋಣ, ಹೋರಾಟ ಮಾಡೋಣ ಎಂದು ಈ ವೇಳೆ ಮಾತನಾಡಿದ್ದಾರೆ.