ಬೆಂಗಳೂರು: ನಿಕಾನ್ ಇಂಡಿಯಾ ಪ್ರೈವೇಟ್ ಲಿಮಿಟೆಡ್ (Nikon Scholarship Program 2025-26) ಸಂಸ್ಥೆಯು 2025-26ನೇ ಸಾಲಿನಗೆ ವಿದ್ಯಾರ್ಥಿ ವೇತನ ಘೋಷಣೆ ಮಾಡಿದೆ. ವಿದ್ಯಾರ್ಥಿಗಳಿಗೆ ಒಂದು ಲಕ್ಷ ರೂಪಾಯಿವರೆಗೆ ವಿದ್ಯಾರ್ಥಿ ವೇತನ ನೀಡಲಾಗುತ್ತದೆ. ಅರ್ಹ ಹಾಗೂ ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸುವುದು ಹೇಗೆ? ಏನೆಲ್ಲ ಅರ್ಹತೆಗಳು ಇರಬೇಕು ಎಂಬುದರ ಮಾಹಿತಿ ಇಲ್ಲಿದೆ.
ಫೋಟೋಗ್ರಫಿ ಸೇರಿ ಸೃಜನಶೀಲ ಕೋರ್ಸ್ ಗಳನ್ನು ಅಧ್ಯಯನ ಮಾಡುತ್ತಿರುವವರಿಗೆ ಅನುಕೂಲವಾಗಲಿ ಎಂದು ನಿಕಾನ್ ಇಂಡಿಯಾ ಸಂಸ್ಥೆಯು ಪ್ರತಿ ವರ್ಷ ವಿದ್ಯಾರ್ಥಿವೇತನ ನೀಡುತ್ತಿದೆ. ಈ ಬಾರಿಯೂ ಒಂದು ಲಕ್ಷ ರೂಪಾಯಿ ಸ್ಕಾಲರ್ ಶಿಪ್ ಘೋಷಣೆ ಮಾಡಿದೆ. ಅರ್ಜಿ ಸಲ್ಲಿಸಲು ನವೆಂಬರ್ 28 ಕೊನೆಯ ದಿನವಾಗಿದೆ.
ಯಾರೆಲ್ಲ ಅರ್ಜಿ ಸಲ್ಲಿಸಬಹುದು?
- ದೇಶದ ಯಾವುದೇ ಭಾಗದ ಮಾನ್ಯತೆ ಪಡೆದ ಕಾಲೇಜುಗಳಲ್ಲಿ ಫೋಟೊಗ್ರಫಿಗೆ ಸಂಬಂಧಿಸಿದ ಕೋರ್ಸ್ ಅಧ್ಯಯನ ಮಾಡುತ್ತಿರಬೇಕು
- ಅರ್ಜಿ ಸಲ್ಲಿಸುವವರು ಪಿಯುಸಿಯಲ್ಲಿ ಕನಿಷ್ಠ ಶೇ.60ರಷ್ಟು ಮಾರ್ಕ್ಸ್ ಪಡೆದಿರಬೇಕು
- ಅರ್ಜಿ ಸಲ್ಲಿಸುವವರ ಕುಟುಂಬದ ವಾರ್ಷಿಕ ಆದಾಯ 6 ಲಕ್ಷ ರೂಪಾಯಿ ಮೀರಬಾರದು .
- ನಿಕಾನ್ ಇಂಡಿಯಾ ಪ್ರೈವೇಟ್ ಲಿಮಿಟೆಡ್, ಅದರ ಅಂಗಸಂಸ್ಥೆಗಳು ಮತ್ತು ಬಡ್ಡಿ4ಸ್ಟಡಿ ಉದ್ಯೋಗಿಗಳ ಮಕ್ಕಳು ಅರ್ಜಿ ಸಲ್ಲಿಸಲು ಅರ್ಹರಲ್ಲ.
ಅರ್ಜಿ ಸಲ್ಲಿಸುವುದು ಹೇಗೆ?
- ಅರ್ಜಿ ಸಲ್ಲಿಸುವವರು ಮೊದಲಿಗೆ https://www.buddy4study.com/page/nikon-scholarship-program ವೆಬ್ ಸೈಟ್ ಗೆ ಭೇಟಿ ನೀಡಬೇಕು
- ವೆಬ್ ಸೈಟ್ ನಲ್ಲಿ ಹೆಸರು ನೋಂದಣಿ ಮಾಡಿಕೊಂಡು, ಲಾಗಿನ್ ಆಗಬೇಕು
- ನಿಕಾನ್ ಇಂಡಿಯಾ ಸ್ಕಾಲರ್ ಶಿಪ್ 2025-26 ಅರ್ಜಿ ನಮೂನೆ ಪುಟಕ್ಕೆ ಓಪನ್ ಮಾಡಬೇಕು
- ಅರ್ಜಿ ಪ್ರಕ್ರಿಯೆಯನ್ನು ಪ್ರಾರಂಭಿಸಲು ಅಪ್ಲಿಕೇಶನ್ ಪ್ರಾರಂಭಿಸಿ ಮೇಲೆ ಕ್ಲಿಕ್ ಮಾಡಬೇಕು
- ಆನ್ ಲೈನ್ ಅರ್ಜಿ ನಮೂನೆಯಲ್ಲಿ ಅಗತ್ಯವಿರುವ ವಿವರವನ್ನು ಭರ್ತಿ ಮಾಡಬೇಕು
- ಅಗತ್ಯ ದಾಖಲೆಗಳನ್ನು ಅಪ್ ಲೋಡ್ ಮಾಡಿ ಅರ್ಜಿ ಸಲ್ಲಿಸಬೇಕು
ಇದನ್ನೂ ಓದಿ: ಕೇಂದ್ರ ಸರ್ಕಾರದ NCBS ಸಂಸ್ಥೆಯಲ್ಲಿ ನೇಮಕಾತಿಗೆ ಅರ್ಜಿ ಆಹ್ವಾನ : ಹೀಗೆ ಅರ್ಜಿ ಸಲ್ಲಿಸಿ



















