ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿರುವ ರಾಷ್ಟ್ರೀಯ ಮಾನಸಿಕ ಆರೋಗ್ಯ ಮತ್ತು ನರವಿಜ್ಞಾನ ಸಂಸ್ಥೆ (ನಿಮ್ಹಾನ್ಸ್)ಯಲ್ಲಿ ಖಾಲಿ ಇರುವ 3 ಹುದ್ದೆಗಳ ನೇಮಕಾತಿಗಾಗಿ (NIMHANS Recruitment 2025) ಅಧಿಸೂಚನೆ ಹೊರಡಿಸಲಾಗಿದೆ. ಮನೋವೈದ್ಯಕೀಯ ಸಾಮಾಜಿಕ ಕಾರ್ಯಕರ್ತ ಹುದ್ದೆಗಳನ್ನು ನೇಮಕಾತಿ ಮಾಡಿಕೊಳ್ಳಲಾಗುತ್ತಿದೆ. ಅಭ್ಯರ್ಥಿಗಳು ಆಫ್ ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಲು ಅವಕಾಶ ನೀಡಲಾಗಿದೆ.
ಹುದ್ದೆಗಳ ಸಂಕ್ಷಿಪ್ತ ವಿವರ
ನೇಮಕಾತಿ ಸಂಸ್ಥೆ: ರಾಷ್ಟ್ರೀಯ ಮಾನಸಿಕ ಆರೋಗ್ಯ ಮತ್ತು ನರವಿಜ್ಞಾನ ಸಂಸ್ಥೆ
ಒಟ್ಟು ಹುದ್ದೆಗಳು: 03
ಉದ್ಯೋಗ ಸ್ಥಳ: ಬೆಂಗಳೂರು, ಕರ್ನಾಟಕ
ಅರ್ಜಿ ಸಲ್ಲಿಕೆ ವಿಧಾನ: ಆಫ್ ಲೈನ್
ಹುದ್ದೆಗಳ ಹೆಸರು: ಮನೋವೈದ್ಯಕೀಯ ಸಾಮಾಜಿಕ ಕಾರ್ಯಕರ್ತ
ಅರ್ಜಿ ಸಲ್ಲಿಸಲು ಕೊನೆಯ ದಿನ: ಡಿಸೆಂಬರ್ 27
ಮಾನ್ಯತೆ ಪಡೆದ ಯಾವುದೇ ವಿಶ್ವವಿದ್ಯಾಲಯ ಅಥವಾ ಮಂಡಳಿಗಳ ಮೂಲಕ ಸ್ನಾತಕೋತ್ತರ ಪದವಿ ಹಾಗೂ ಎಂ.ಫಿಲ್ ಕೋರ್ಸ್ ಗಳನ್ನು ಮುಗಿಸಿದವರು ಅರ್ಜಿ ಸಲ್ಲಿಸಲು ಅರ್ಹರಾಗಿದ್ದಾರೆ. ಗರಿಷ್ಠ 35 ವರ್ಷದೊಳಗಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಒಬಿಸಿ, ಇಡಬ್ಲ್ಯೂಎಸ್ ಅಭ್ಯರ್ಥಿಗಳಿಗೆ 590 ರೂಪಾಯಿ ಹಾಗೂ ಎಸ್ಸಿ, ಎಸ್ಟಿ ಅಭ್ಯರ್ಥಿಗಳಿಗೆ 295 ರೂಪಾಯಿ ಅರ್ಜಿ ಶುಲ್ಕವಿದೆ. ನೇಮಕಾತಿ ಹೊಂದಿದವರಿಗೆ ಮಾಸಿಕ 1.12 ಲಕ್ಷ ರೂಪಾಯಿವರೆಗೆ ಸಂಬಳ ನೀಡಲಾಗುತ್ತದೆ.
ಅರ್ಜಿ ಸಲ್ಲಿಸುವುದು ಹೇಗೆ?
ಸಲ್ಲಿಕೆಯಾದ ಅರ್ಜಿಗಳನ್ನು ಮೊದಲು ಪರಿಶೀಲನೆ ನಡೆಸಲಾಗುತ್ತದೆ. ನಂತರ ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನು ನೇಮಕಾತಿ ಮಾಡಿಕೊಳ್ಳಲಾಗುತ್ತದೆ. ಅಭ್ಯರ್ಥಿಗಳು ಮೊದಲು nimhans.ac.in ಭೇಟಿ ನೀಡಿ ಅಧಿಸೂಚನೆಯನ್ನು ಓದಬೇಕು. ಇದಾದ ಬಳಿಕ ಅರ್ಜಿಯ ಪ್ರಿಂಟೌಟ್ ತೆಗೆದುಕೊಂಡು ಭರ್ತಿ ಮಾಡಬೇಕು. ಅಗತ್ಯ ದಾಖಲೆಗಳೊಂದಿಗೆ ಭರ್ತಿ ಮಾಡಿದ ಅರ್ಜಿಯನ್ನು The Registrar, NIMHANS, P.B No. 2900 Hosur Road, Bengaluru – 560029 ವಿಳಾಸಕ್ಕೆ ಕಳುಹಿಸಬೇಕು.
ಇದನ್ನೂ ಓದಿ; ಸರ್ಕಾರಿ ನೌಕರರು ಈ ಕೆಲಸ ಮಾಡದಿದ್ದರೆ ಮುಂದಿನ ತಿಂಗಳಿಂದ ಸಂಬಳವೇ ಕಟ್ : ಇಲ್ಲಿದೆ ಮಾಹಿತಿ



















