ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿರುವ ರಾಷ್ಟ್ರೀಯ ಮಾನಸಿಕ ಆರೋಗ್ಯ ಮತ್ತು ನರವಿಜ್ಞಾನ ಸಂಸ್ಥೆ (ನಿಮ್ಹಾನ್ಸ್)ಯಲ್ಲಿ ಖಾಲಿ ಇರುವ 8 ಹುದ್ದೆಗಳ ನೇಮಕಾತಿಗಾಗಿ (NIMHANS Recruitment 2025) ಅಧಿಸೂಚನೆ ಹೊರಡಿಸಲಾಗಿದೆ. ಪೀರ್ ಕೌನ್ಸೆಲರ್, ಸೀನಿಯರ್ ರೆಸಿಡೆಂಟ್ ಸೇರಿ ಹಲವು ಹುದ್ದೆಗಳನ್ನು ನೇಮಕಾತಿ ಮಾಡಿಕೊಳ್ಳಲಾಗುತ್ತಿದೆ. ನೇರ ಸಂದರ್ಶನದ ಮೂಲಕ ನೇಮಕಾತಿ ಮಾಡಿಕೊಳ್ಳಲಾಗುವುದು ಎಂದು ನಿಮ್ಹಾನ್ಸ್ ಅಧಿಸೂಚನೆಯಲ್ಲಿ ತಿಳಿಸಿದೆ.
ಹುದ್ದೆಗಳ ಸಂಕ್ಷಿಪ್ತ ವಿವರ
ನೇಮಕಾತಿ ಸಂಸ್ಥೆ: ರಾಷ್ಟ್ರೀಯ ಮಾನಸಿಕ ಆರೋಗ್ಯ ಮತ್ತು ನರವಿಜ್ಞಾನ ಸಂಸ್ಥೆ
ಒಟ್ಟು ಹುದ್ದೆಗಳು: 08
ಉದ್ಯೋಗ ಸ್ಥಳ: ಬೆಂಗಳೂರು, ಕರ್ನಾಟಕ
ನೇಮಕಾತಿ ವಿಧಾನ: ವಾಕ್ ಇನ್ ಇಂಟರ್ ವ್ಯೂ
ಮಾನ್ಯತೆ ಪಡೆದ ಯಾವುದೇ ವಿಶ್ವವಿದ್ಯಾಲಯ ಅಥವಾ ಮಂಡಳಿಗಳ ಮೂಲಕ ಎಸ್ಸೆಸ್ಸೆಲ್ಸಿ, ಪಿಯುಸಿ, ಎಂಎ, ಎಂ.ಫಿಲ್, ಪಿಎಚ್.ಡಿ, ಬಿಎಸ್ಸಿ ಕೋರ್ಸ್ ಗಳನ್ನು ಮುಗಿಸಿದವರು ಅರ್ಜಿ ಸಲ್ಲಿಸಲು ಅರ್ಹರಾಗಿದ್ದಾರೆ. ಗರಿಷ್ಠ 50 ವರ್ಷದೊಳಗಿನ ಅಭ್ಯರ್ಥಿಗಳು ಅಗತ್ಯ ದಾಖಲೆಗಳೊಂದಿಗೆ ಸಂದರ್ಶನಕ್ಕೆ ಹಾಜರಾಗಬಹುದಾಗಿದೆ. ಹೆಚ್ಚಿನ ಮಾಹಿತಿಗೆ ಅಭ್ಯರ್ಥಿಗಳು nimhans.ac.in ವೆಬ್ ಸೈಟ್ ಗೆ ಭೇಟಿ ನೀಡಬಹುದಾಗಿದೆ.
ಯಾವ ಹುದ್ದೆ ಎಷ್ಟು ಖಾಲಿ?
ಸೀನಿಯರ್ ರಿಸರ್ಚ್ ಫೆಲೋಶಿಪ್- 01
ಪೀರ್ ಕೌನ್ಸೆಲರ್- 04
ಸೀನಿಯರ್ ರೆಸಿಡೆಂಟ್- 02
ನರ್ಸಿಂಗ್ ಸೂಪರ್ ವೈಸರ್- 01
ಲಿಖಿತ ಪರೀಕ್ಷೆ ಅಥವಾ ಕೌಶಲ ಪರೀಕ್ಷೆ ಹಾಗೂ ಸಂದರ್ಶನದ ಮೂಲಕ ನೇಮಕಾತಿ ಮಾಡಿಕೊಳ್ಳಲಾಗುತ್ತದೆ. ನೇಮಕಾತಿ ಹೊಂದಿದವರಿಗೆ ಆಯಾ ಹುದ್ದೆಗಳಿಗೆ ಅನುಗುಣವಾಗಿ ಮಾಸಿಕ 80 ಸಾವಿರ ರೂಪಾಯಿವರೆಗೆ ಸಂಬಳ ನೀಡಲಾಗುತ್ತದೆ. ಸಂದರ್ಶನಕ್ಕೆ ಹಾಜರಾಗುವ ಅಭ್ಯರ್ಥಿಗಳು ಗುರುತಿನ ಚೀಟಿ, ಶೈಕ್ಷಣಿಕ ದಾಖಲೆಗಳು ಸೇರಿ ಅಗತ್ಯ ದಾಖಲೆಗಳನ್ನು ತೆಗೆದುಕೊಂಡು ಹೋಗಬೇಕು ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.
ಸಂದರ್ಶನ ನಡೆಯುವ ಸ್ಥಳದ ವಿವರ
ಸೀನಿಯರ್ ರಿಸರ್ಚ್ ಫೆಲೋಶಿಪ್: Board Room 1st Floor, NBRC Building Administrative Block, NIMHANS, Bengaluru – 560029
ಸಂದರ್ಶನದ ದಿನಾಂಕ: ನವೆಂಬರ್ 4
ಸೀನಿಯರ್ ರೆಸಿಡೆಂಟ್: Board Room 1st Floor, NBRC Building opposite to NIMHANS Library, Bengaluru-560029
ಸಂದರ್ಶನದ ದಿನಾಂಕ: ನವೆಂಬರ್ 7
ಪೀರ್ ಕೌನ್ಸೆಲರ್, ನರ್ಸಿಂಗ್ ಸೂಪರ್ ವೈಸರ್: Boardroom & Exam Hall 4th Floor, NBRC Building Administrative Block, NIMHANS, Bengaluru-560029
ಸಂದರ್ಶನದ ದಿನಾಂಕ: ನವೆಂಬರ್ 10
ಇದನ್ನೂ ಓದಿ: ನವೆಂಬರ್ 1ರಿಂದ ಹಲವು ಹಣಕಾಸು ನಿಯಮಗಳು ಬದಲು: ಜನರಿಗೆ ಏನೆಲ್ಲ ಹೊರೆ?



















