ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿರುವ ರಾಷ್ಟ್ರೀಯ ಮಾನಸಿಕ ಆರೋಗ್ಯ ಮತ್ತು ನರವಿಜ್ಞಾನ ಸಂಸ್ಥೆ (ನಿಮ್ಹಾನ್ಸ್)ಯಲ್ಲಿ ಖಾಲಿ ಇರುವ ಐದು ಹುದ್ದೆಗಳ ನೇಮಕಾತಿಗಾಗಿ (NIMHANS Recruitment 2025) ಅಧಿಸೂಚನೆಯನ್ನು ಹೊರಡಿಸಲಾಗಿದೆ. ಹಾಸನದ ಬೇಲೂರಿನಲ್ಲಿ ಕಾರ್ಯನಿರ್ವಹಿಸಲು ಇಚ್ಚಿಸುವವರು ಹುದ್ದೆಗಳನ್ನು ಗಿಟ್ಟಿಸಿಕೊಳ್ಳಬಹುದಾಗಿದೆ. ಫೀಲ್ಡ್ ಡೇಟಾ ಕಲೆಕ್ಟರ್ ಹುದ್ದೆಗಳನ್ನು ನಿಮ್ಹಾನ್ಸ್ ನೇಮಕಾತಿ ಮಾಡಿಕೊಳ್ಳುತ್ತಿದೆ. ನೇರ ಸಂದರ್ಶನದ ಮೂಲಕ ನೇಮಕಾತಿ ಮಾಡಿಕೊಳ್ಳಲಾಗುವುದು ಎಂದು ನಿಮ್ಹಾನ್ಸ್ ತಿಳಿಸಿದೆ.
ಹುದ್ದೆಗಳ ಸಂಕ್ಷಿಪ್ತ ವಿವರ
ನೇಮಕಾತಿ ಸಂಸ್ಥೆ: ರಾಷ್ಟ್ರೀಯ ಮಾನಸಿಕ ಆರೋಗ್ಯ ಮತ್ತು ನರವಿಜ್ಞಾನ ಸಂಸ್ಥೆ
ಒಟ್ಟು ಹುದ್ದೆಗಳು: 05
ಉದ್ಯೋಗ ಸ್ಥಳ: ಬೇಲೂರು, ಕರ್ನಾಟಕ
ನೇಮಕಾತಿ ವಿಧಾನ: ವಾಕ್ ಇನ್ ಇಂಟರ್ ವ್ಯೂ
ನಿಮ್ಹಾನ್ ಅಧಿಸೂಚನೆಯ ಪ್ರಕಾರ, ಮಾನ್ಯತೆ ಪಡೆದ ಯಾವುದೇ ವಿಶ್ವವಿದ್ಯಾಲಯ ಅಥವಾ ಮಂಡಳಿಗಳ ಮೂಲಕ ಪಿಯುಸಿ ಪಾಸಾದವರು ಸಂದರ್ಶನಕ್ಕೆ ಹಾಜರಾಗಬಹುದಾಗಿದೆ. 30 ವರ್ಷದೊಳಗಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಅರ್ಹರಾಗಿದ್ದಾರೆ. ಹೆಚ್ಚಿನ ಮಾಹಿತಿಗೆ ಅಭ್ಯರ್ಥಿಗಳು nimhans.ac.in ವೆಬ್ ಸೈಟ್ ಗೆ ಭೇಟಿ ನೀಡಬಹುದಾಗಿದೆ.
ಲಿಖಿತ ಪರೀಕ್ಷೆ ಹಾಗೂ ಸಂದರ್ಶನದ ಮೂಲಕ ನೇಮಕಾತಿ ಮಾಡಿಕೊಳ್ಳಲಾಗುತ್ತದೆ. ನೇಮಕಾತಿ ಹೊಂದಿದವರಿಗೆ ಮಾಸಿಕ 18 ಸಾವಿರ ರೂಪಾಯಿ ಸಂಬಳ ನೀಡಲಾಗುತ್ತದೆ. ಸಂದರ್ಶನಕ್ಕೆ ಹಾಜರಾಗುವ ಅಭ್ಯರ್ಥಿಗಳು ಗುರುತಿನ ಚೀಟಿ, ಶೈಕ್ಷಣಿಕ ದಾಖಲೆಗಳು ಸೇರಿ ಅಗತ್ಯ ದಾಖಲೆಗಳನ್ನು ತೆಗೆದುಕೊಂಡು ಹೋಗಬೇಕು ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.
ಸಂದರ್ಶನ ನಡೆಯುವ ಸ್ಥಳ: Board Room and Exam Hall on the 4th floor of NBRC NIMHANS, Bangalore-560029, Karnataka
ಸಂದರ್ಶನದ ದಿನಾಂಕ: ಆಗಸ್ಟ್ 25
ಸಮಯ: ಬೆಳಗ್ಗೆ 10 ಗಂಟೆ



















