ಬೆಂಗಳೂರು: ನೀವು ಬೆಂಗಳೂರಿನಲ್ಲೇ ಉದ್ಯೋಗಕ್ಕಾಗಿ ಅಲೆದಾಡುತ್ತಿದ್ದೀರಾ? ಹಾಗಾದರೆ, ನಿಮಗೊಂದು ಒಳ್ಳೆಯ ಅವಕಾಶ ಬಂದಿದೆ. ಬೆಂಗಳೂರಿನಲ್ಲಿರುವ ರಾಷ್ಟ್ರೀಯ ಮಾನಸಿಕ ಆರೋಗ್ಯ ಮತ್ತು ನರವಿಜ್ಞಾನ ಸಂಸ್ಥೆ (ನಿಮ್ಹಾನ್ಸ್)ಯಲ್ಲಿ ಖಾಲಿ ಇರುವ ಒಂದು ಹುದ್ದೆಯ ನೇಮಕಾತಿಗಾಗಿ (NIMHANS Recruitment 2026) ಅಧಿಸೂಚನೆ ಹೊರಡಿಸಲಾಗಿದೆ. ಒಂದು ರಿಸರ್ಚ್ ಅಸೋಸಿಯೇಟ್ ಹುದ್ದೆಯನ್ನು ನೇಮಕಾತಿ ಮಾಡಿಕೊಳ್ಳಲಾಗುತ್ತಿದೆ. ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಲು ಅವಕಾಶ ನೀಡಲಾಗಿದೆ.
ಹುದ್ದೆಗಳ ಸಂಕ್ಷಿಪ್ತ ವಿವರ
ನೇಮಕಾತಿ ಸಂಸ್ಥೆ: ರಾಷ್ಟ್ರೀಯ ಮಾನಸಿಕ ಆರೋಗ್ಯ ಮತ್ತು ನರವಿಜ್ಞಾನ ಸಂಸ್ಥೆ
ಒಟ್ಟು ಹುದ್ದೆಗಳು: 1
ಉದ್ಯೋಗ ಸ್ಥಳ: ಬೆಂಗಳೂರು
ಅರ್ಜಿ ಸಲ್ಲಿಕೆ ವಿಧಾನ: ಆನ್ ಲೈನ್
ಹುದ್ದೆಗಳ ಹೆಸರು: ರಿಸರ್ಚ್ ಅಸೋಸಿಯೇಟ್
ಅರ್ಜಿ ಸಲ್ಲಿಸಲು ಕೊನೆಯ ದಿನ: ಸೆಪ್ಟೆಂಬರ್ 12
ಅರ್ಜಿ ಸಲ್ಲಿಸಲು ಬಯಸುವವರು ಮಾನ್ಯತೆ ಪಡೆದ ಯಾವುದೇ ವಿಶ್ವವಿದ್ಯಾಲಯ ಅಥವಾ ಮಂಡಳಿಗಳ ಮೂಲಕ ಪಿಎಚ್.ಡಿ, ಎಂಡಿ, ಎಂಎಸ್ ಮುಗಿಸಿರಬೇಕು ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ. ಅರ್ಜಿ ಸಲ್ಲಿಸುವವರಿಗೆ ಗರಿಷ್ಠ 40 ವರ್ಷಗಳ ವಯೋಮಿತಿಯನ್ನು ನಿಗದಿಪಡಿಸಲಾಗಿದೆ. ಅರ್ಜಿ ಸಲ್ಲಿಸಲು ಯಾವುದೇ ಶುಲ್ಕವನ್ನು ನಿಗದಿಪಡಿಸಿಲ್ಲ. ನೇಮಕಾತಿ ಹೊಂದಿದವರಿಗೆ ಮಾಸಿಕ 67 ಸಾವಿರ ರೂಪಾಯಿ ಸಂಬಳ ನೀಡಲಾಗುತ್ತದೆ ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.
ಅರ್ಜಿ ಸಲ್ಲಿಸುವುದು ಹೇಗೆ?
ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಮೊದಲು nimhans.ac.in ಭೇಟಿ ನೀಡಿ ಅಧಿಸೂಚನೆಯನ್ನು ಓದಬೇಕು. ಅರ್ಜಿಯ ಪ್ರಿಂಟೌಟ್ ತೆಗೆದುಕೊಂಡು ಭರ್ತಿ ಮಾಡಬೇಕು. ಅರ್ಜಿ ಹಾಗೂ ಅಗತ್ಯ ದಾಖಲೆಗಳ ಸಾಫ್ಟ್ ಕಾಪಿಗಳನ್ನು drvijaysh@nimhans.net ಗೆ ಮೇಲ್ ಮಾಡಬೇಕು ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.


















