ಬೆಂಗಳೂರು : ಬೆಂಗಳೂರಿನಲ್ಲಿರುವ ರಾಷ್ಟ್ರೀಯ ಮಾನಸಿಕ ಆರೋಗ್ಯ ಮತ್ತು ನರವಿಜ್ಞಾನ ಸಂಸ್ಥೆ (NIMHANS)ಯಲ್ಲಿ ಖಾಲಿ ಇರುವ 7 ಹುದ್ದೆಗಳ ನೇಮಕಾತಿಗಾಗಿ (NIMHANS Recruitment 2026) ಅಧಿಸೂಚನೆ ಹೊರಡಿಸಲಾಗಿದೆ. 7 ಡ್ಯೂಟಿ ಮೆಡಿಕಲ್ ಆಫೀಸರ್ ಹುದ್ದೆಗಳನ್ನು ಭರ್ತ ಮಾಡಿಕೊಳ್ಳಲಾಗುತ್ತಿದೆ. ಅರ್ಹ ಹಾಗೂ ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಆಫ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಅರ್ಜಿಗಳನ್ನು ಸಲ್ಲಿಸುವುದು ಹೇಗೆ? ವಿದ್ಯಾರ್ಹತೆ ಏನು ಎಂಬುದು ಸೇರಿ ನೇಮಕಾತಿಗೆ ಸಂಬಂಧಿಸಿದ ಸಂಪೂರ್ಣ ಮಾಹಿತಿ ಇಲ್ಲಿದೆ.
ನೇಮಕಾತಿ ಸಂಸ್ಥೆ: ರಾಷ್ಟ್ರೀಯ ಮಾನಸಿಕ ಆರೋಗ್ಯ ಮತ್ತು ನರವಿಜ್ಞಾನ ಸಂಸ್ಥೆ
ಒಟ್ಟು ಹುದ್ದೆಗಳು: 7
ಉದ್ಯೋಗ ಸ್ಥಳ: ಬೆಂಗಳೂರು
ಅರ್ಜಿ ಸಲ್ಲಿಕೆ ವಿಧಾನ: ಆಫ್ ಲೈನ್
ಹುದ್ದೆಗಳ ಹೆಸರು: ಡ್ಯೂಟಿ ಮೆಡಿಕಲ್ ಆಫೀಸರ್
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಮೇ 15
ಅರ್ಜಿ ಸಲ್ಲಿಸಲು ಬಯಸುವವರು ಮಾನ್ಯತೆ ಪಡೆದ ಯಾವುದೇ ವಿಶ್ವವಿದ್ಯಾಲಯದಲ್ಲಿ ಪದವಿ ಅಥವಾ ಎಂಬಿಬಿಎಸ್ ಕೋರ್ಸ್ ಮುಗಿಸಿರಬೇಕು ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ. ಅರ್ಜಿ ಸಲ್ಲಿಸುವವರಿಗೆ ಗರಿಷ್ಠ 40 ವರ್ಷಗಳ ವಯೋಮಿತಿಯನ್ನು ನಿಗದಿಪಡಿಸಲಾಗಿದೆ. ನೇಮಕಾತಿ ಹೊಂದಿದವರಿಗೆ ಮಾಸಿಕ 66 ಸಾವಿರ ರೂಪಾಯಿ ಸಂಬಳ ನೀಡಲಾಗುತ್ತದೆ. ಒಬಿಸಿ ಅಭ್ಯರ್ಥಿಗಳಿಗೆ 1,180 ರೂ. ಅರ್ಜಿ ಶುಲ್ಕವಿದೆ. ಉಳಿದವರಿಗೆ 885 ರೂಪಾಯಿ ಅರ್ಜಿ ಶುಲ್ಕವನ್ನು ನಿಗದಿಪಡಿಸಲಾಗಿದೆ.
ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಹಾಗೂ ಸಂದರ್ಶನದ ಮೂಲಕ ನೇಮಕಾತಿ ಮಾಡಿಕೊಳ್ಳಲಾಗುತ್ತದೆ. ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮೊದಲಿಗೆ nimhans.ac.in ವೆಬ್ ಸೈಟ್ ಗೆ ಭೇಟಿ ನೀಡಿ, ಅರ್ಜಿ ನಮೂನೆಯನ್ನು ಡೌನ್ ಲೋಡ್ ಮಾಡಿಕೊಳ್ಳಬೇಕು. ನಂತರ ಈ ಕೆಳಗಿನ ವಿಳಾಸಕ್ಕೆ ಅಗತ್ಯ ದಾಖಲೆಗಳೊಂದಿಗೆ ನಿಗದಿತ ಗಡುವಿನೊಳಗೆ ಸಲ್ಲಿಸಬೇಕು.
ಅರ್ಜಿ ಸಲ್ಲಿಸಬೇಕಾದ ವಿಳಾಸ
The Registrar, NIMHANS, P.B.No.2900, Hosur Road, Bengaluru – 560029.
ಇದನ್ನೂ ಓದಿ : ದೆಹಲಿಯ ‘ರೆಹಮಾನ್ ಡಕಾಯಿತ’ ಕೇಜ್ರಿವಾಲ್ : ‘ಶೀಶ್ ಮಹಲ್ 2’ ಫೋಟೋ ರಿಲೀಸ್ ಮಾಡಿದ ಬಿಜೆಪಿ



















