ಬೆಂಗಳೂರು : ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿರುವ ರಾಷ್ಟ್ರೀಯ ಮಾನಸಿಕ ಆರೋಗ್ಯ ಮತ್ತು ನರವಿಜ್ಞಾನ ಸಂಸ್ಥೆ (ನಿಮ್ಹಾನ್ಸ್)ಯಲ್ಲಿ ಖಾಲಿ ಇರುವ ಒಂದು ಹುದ್ದೆಯ ನೇಮಕಾತಿಗಾಗಿ (NIMHANS Recruitment 2026) ಅಧಿಸೂಚನೆ ಹೊರಡಿಸಲಾಗಿದೆ. ಒಂದು ಪ್ರಾಜೆಕ್ಟ್ ರಿಸರ್ಚ್ ಸೈಂಟಿಸ್ಟ್– II ಹುದ್ದೆಯನ್ನು ನೇಮಕಾತಿ ಮಾಡಿಕೊಳ್ಳಲಾಗುತ್ತಿದೆ. ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಲು ಅವಕಾಶ ನೀಡಲಾಗಿದೆ.
ಹುದ್ದೆಗಳ ಸಂಕ್ಷಿಪ್ತ ವಿವರ
ನೇಮಕಾತಿ ಸಂಸ್ಥೆ: ರಾಷ್ಟ್ರೀಯ ಮಾನಸಿಕ ಆರೋಗ್ಯ ಮತ್ತು ನರವಿಜ್ಞಾನ ಸಂಸ್ಥೆ
ಒಟ್ಟು ಹುದ್ದೆಗಳು: 1
ಉದ್ಯೋಗ ಸ್ಥಳ: ಬೆಂಗಳೂರು
ಅರ್ಜಿ ಸಲ್ಲಿಕೆ ವಿಧಾನ: ಆನ್ ಲೈನ್
ಹುದ್ದೆಗಳ ಹೆಸರು: ಪ್ರಾಜೆಕ್ಟ್ ರಿಸರ್ಚ್ ಸೈಂಟಿಸ್ಟ್– II
ಅರ್ಜಿ ಸಲ್ಲಿಸಲು ಕೊನೆಯ ದಿನ: ಜೂನ್ 7
ಮಾನ್ಯತೆ ಪಡೆದ ಯಾವುದೇ ವಿಶ್ವವಿದ್ಯಾಲಯ ಅಥವಾ ಮಂಡಳಿಗಳ ಮೂಲಕ ಸ್ನಾತಕೋತ್ತರ ಪದವಿ ಮುಗಿಸಿದವರು ಅರ್ಜಿ ಸಲ್ಲಿಸಲು ಅರ್ಹರಾಗಿದ್ದಾರೆ. ಅರ್ಜಿ ಸಲ್ಲಿಸುವವರಿಗೆ ಗರಿಷ್ಠ 40 ವರ್ಷಗಳ ವಯೋಮಿತಿಯನ್ನು ನಿಗದಿಪಡಿಸಲಾಗಿದೆ. ಅರ್ಜಿ ಸಲ್ಲಿಸಲು ಯಾವುದೇ ಶುಲ್ಕವನ್ನು ನಿಗದಿಪಡಿಸಿಲ್ಲ. ನೇಮಕಾತಿ ಹೊಂದಿದವರಿಗೆ ಮಾಸಿಕ 67 ಸಾವಿರ ರೂಪಾಯಿ ಸಂಬಳ ನೀಡಲಾಗುತ್ತದೆ ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.
ಅರ್ಜಿ ಸಲ್ಲಿಸುವುದು ಹೇಗೆ?
ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಮೊದಲು nimhans.ac.in ಭೇಟಿ ನೀಡಿ ಅಧಿಸೂಚನೆಯನ್ನು ಓದಬೇಕು. ಇದಾದ ಬಳಿಕ ಅಗತ್ಯ ದಾಖಲೆಗಳನ್ನು ಸಿದ್ಧಪಡಿಸಿಕೊಳ್ಳಬೇಕು. ಆನ್ ಲೈನ್ ಮೂಲಕ ಅರ್ಜಿ ಹಾಗೂ ಅಗತ್ಯ ದಾಖಲೆಗಳನ್ನು ಸಲ್ಲಿಸಬೇಕು. ಬೆಂಗಳೂರಿನಲ್ಲಿಯೇ ಕೈತುಂಬ ಸಂಬಳದ ಉದ್ಯೋಗ ಪಡೆಯಬೇಕು ಎಂದು ಬಯಸುತ್ತಿರುವವರಿಗೆ ಇದು ಗುಡ್ ನ್ಯೂಸ್ ಎನಿಸಿದೆ.
ಇದನ್ನೂ ಓದಿ : ಕೇಂದ್ರ ಪರಿಸರ ಸಚಿವಾಲಯದಲ್ಲಿ 4 ಹುದ್ದೆಗಳ ನೇಮಕಾತಿ : ಕೂಡಲೇ ಅರ್ಜಿ ಸಲ್ಲಿಸಿ



















