ಬೆಂಗಳೂರು | ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿರುವ ರಾಷ್ಟ್ರೀಯ ಮಾನಸಿಕ ಆರೋಗ್ಯ ಮತ್ತು ನರವಿಜ್ಞಾನ ಸಂಸ್ಥೆ (ನಿಮ್ಹಾನ್ಸ್)ಯಲ್ಲಿ ಖಾಲಿ ಇರುವ 52 ಹುದ್ದೆಗಳ ನೇಮಕಾತಿಗಾಗಿ (NIMHANS Recruitment 2026) ಅಧಿಸೂಚನೆ ಹೊರಡಿಸಲಾಗಿದೆ. ಗ್ರೂಪ್ ಬಿ ಹಾಗೂ ಗ್ರೂಪ್ ಸಿ ಹುದ್ದೆಗಳನ್ನು ನೇಮಕಾತಿ ಮಾಡಿಕೊಳ್ಳಲಾಗುತ್ತಿದೆ. ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಲು ಅವಕಾಶ ನೀಡಲಾಗಿದೆ.
ಹುದ್ದೆಗಳ ಸಂಕ್ಷಿಪ್ತ ವಿವರ
ನೇಮಕಾತಿ ಸಂಸ್ಥೆ: ರಾಷ್ಟ್ರೀಯ ಮಾನಸಿಕ ಆರೋಗ್ಯ ಮತ್ತು ನರವಿಜ್ಞಾನ ಸಂಸ್ಥೆ
ಒಟ್ಟು ಹುದ್ದೆಗಳು: 52
ಉದ್ಯೋಗ ಸ್ಥಳ: ಬೆಂಗಳೂರು, ಕರ್ನಾಟಕ
ಅರ್ಜಿ ಸಲ್ಲಿಕೆ ವಿಧಾನ: ಆನ್ ಲೈನ್
ಹುದ್ದೆಗಳ ಹೆಸರು: ಗ್ರೂಪ್ ಬಿ ಮತ್ತು ಸಿ
ಅರ್ಜಿ ಸಲ್ಲಿಸಲು ಕೊನೆಯ ದಿನ: ಮಾರ್ಚ್ 04
ಸೀನಿಯರ್ ಸೈಂಟಿಫಿಕ್ ಅಸಿಸ್ಟಂಟ್, ಲೈಬ್ರರಿ ಅಸಿಸ್ಟಂಟ್, ಫೋಟೊಗ್ರಾಫರ್, ಬಾರ್ಬರ್, ಹಾಸ್ಪಿಟಲ್ ಅಸಿಸ್ಟಂಟ್ ಸೇರಿ ಹಲವು ಹುದ್ದೆಗಳನ್ನು ನೇಮಕಾತಿ ಮಾಡಿಕೊಳ್ಳಲಾಗುತ್ತಿದೆ. ಮಾನ್ಯತೆ ಪಡೆದ ಯಾವುದೇ ವಿಶ್ವವಿದ್ಯಾಲಯ ಅಥವಾ ಮಂಡಳಿಗಳ ಮೂಲಕ ಎಸ್ಸೆಸ್ಸೆಲ್ಸಿ, ಪದವಿ, ಡಿಪ್ಲೋಮಾ, ಸ್ನಾತಕೋತ್ತರ ಪದವಿ ಪಡೆದವರು ಅರ್ಜಿ ಸಲ್ಲಿಸಲು ಅರ್ಹರಾಗಿದ್ದಾರೆ. ಒಬಿಸಿ, ಇಡಬ್ಲ್ಯೂಎಸ್ ಅಭ್ಯರ್ಥಿಗಳಿಗೆ 1,180 ರೂಪಾಯಿ ಹಾಗೂ ಎಸ್ಸಿ, ಎಸ್ಟಿ ಅಭ್ಯರ್ಥಿಗಳಿಗೆ 885 ರೂಪಾಯಿ ಅರ್ಜಿ ಶುಲ್ಕವಿದೆ.
ಅರ್ಜಿ ಸಲ್ಲಿಸುವುದು ಹೇಗೆ?
ಸಲ್ಲಿಕೆಯಾದ ಅರ್ಜಿಗಳನ್ನು ಮೊದಲು ಪರಿಶೀಲನೆ ನಡೆಸಲಾಗುತ್ತದೆ. ಇದಾದ ಬಳಿಕ ಕೌಶಲ ಪರೀಕ್ಷೆ, ದಾಖಲೆ ಪರೀಕ್ಷೆ ಹಾಗೂ ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನು ನೇಮಕಾತಿ ಮಾಡಿಕೊಳ್ಳಲಾಗುತ್ತದೆ. ಅಭ್ಯರ್ಥಿಗಳು ಮೊದಲು nimhans.ac.in ಭೇಟಿ ನೀಡಿ ಅಧಿಸೂಚನೆಯನ್ನು ಓದಬೇಕು. ಇದಾದ ಬಳಿಕ ಅಗತ್ಯ ದಾಖಲೆಗಳನ್ನು ಸಿದ್ಧಪಡಿಸಿಕೊಳ್ಳಬೇಕು. ಆನ್ ಲೈನ್ ಮೂಲಕ ಅರ್ಜಿ ಹಾಗೂ ಅಗತ್ಯ ದಾಖಲೆಗಳನ್ನು ಸಲ್ಲಿಸಬೇಕು.
ಇದನ್ನೂ ಓದಿ : ನಮ್ಮ ಮೆಟ್ರೋ ಪ್ರಯಾಣಿಕರಿಗೆ ಗುಡ್ ನ್ಯೂಸ್ | ಸೋಮವಾರದಿಂದ ದರ ಏರಿಕೆ ಇಲ್ಲ – ಸಂಸದ ತೇಜಸ್ವಿ ಸೂರ್ಯ ಮಾಹಿತಿ


















