ಬೆಂಗಳೂರು : ನೀವು ಬಿ.ಇ, ಬಿ.ಟೆಕ್ ಕೋರ್ಸ್ ಮುಗಿಸಿದ್ದೀರಾ? ಬೆಂಗಳೂರಿನಲ್ಲೇ ಒಳ್ಳೆಯ ಸಂಬಳದ ಉದ್ಯೋಗ ಹುಡುಕುತ್ತಿದ್ದೀರಾ? ಹಾಗಾದರೆ, ನಿಮಗೊಂದು ಸಿಹಿ ಸುದ್ದಿ ದೊರೆತಿದೆ. ಬೆಂಗಳೂರಿನಲ್ಲಿರುವ ರಾಷ್ಟ್ರೀಯ ಮಾನಸಿಕ ಆರೋಗ್ಯ ಮತ್ತು ನರವಿಜ್ಞಾನ ಸಂಸ್ಥೆ (NIMHANS)ಯಲ್ಲಿ ಖಾಲಿ ಇರುವ 2 ಹುದ್ದೆಗಳ ನೇಮಕಾತಿಗಾಗಿ (NIMHANS Recruitment 2026) ಅಧಿಸೂಚನೆ ಹೊರಡಿಸಲಾಗಿದೆ. ನೇರ ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನು ನೇಮಕಾತಿ ಮಾಡಿಕೊಳ್ಳಲಾಗುತ್ತದೆ. ನೇಮಕಾತಿಗೆ ಸಂಬಂಧಿಸಿದ ಹೆಚ್ಚಿನ ವಿವರ ಇಲ್ಲಿದೆ.
ಹುದ್ದೆಗಳ ಸಂಕ್ಷಿಪ್ತ ವಿವರ
ನೇಮಕಾತಿ ಸಂಸ್ಥೆ: ರಾಷ್ಟ್ರೀಯ ಮಾನಸಿಕ ಆರೋಗ್ಯ ಮತ್ತು ನರವಿಜ್ಞಾನ ಸಂಸ್ಥೆ
ಒಟ್ಟು ಹುದ್ದೆಗಳು: 2
ಹುದ್ದೆಗಳ ಹೆಸರು: ಪ್ರಾಜೆಕ್ಟ್ ಕೋ-ಆರ್ಡಿನೇಟರ್ ಇತ್ಯಾದಿ
ಉದ್ಯೋಗ ಸ್ಥಳ: ಬೆಂಗಳೂರು
ನೇಮಕಾತಿ ವಿಧಾನ: ಸಂದರ್ಶನ
ಸಂದರ್ಶನದ ದಿನಾಂಕ: ಏಪ್ರಿಲ್ 29
ಪ್ರಾಜೆಕ್ಟ್ ಕೋ-ಆರ್ಡಿನೇಟರ್, ಕ್ಲಿನಿಕಲ್ ಪೋಸ್ಟ್ ಡಾಕ್ಟೊರಲ್ ಫೆಲೋ ತಲಾ ಒಂದೊಂದು ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುತ್ತಿದೆ. ಸಂದರ್ಶನಕ್ಕೆ ಹಾಜರಾಗಲು ಬಯಸುವವರು ಮಾನ್ಯತೆ ಪಡೆದ ಯಾವುದೇ ವಿಶ್ವವಿದ್ಯಾಲಯ ಅಥವಾ ಮಂಡಳಿಗಳಲ್ಲಿ ಬಿ.ಇ, ಬಿ.ಟೆಕ್, ಎಂ.ಇ, ಎಂ.ಟೆಕ್, ಎಂಡಿ ಕೋರ್ಸ್ ಮುಗಿಸಿರಬೇಕು ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ. ಗರಿಷ್ಠ 35 ವರ್ಷದೊಳಗಿನ ಅಭ್ಯರ್ಥಿಗಳು ಅಗತ್ಯ ದಾಖಲೆಗಳೊಂದಿಗೆ ಸಂದರ್ಶನಕ್ಕೆ ಹಾಜರಾಗಬಹುದಾಗಿದೆ.
ನೇಮಕಾತಿ ಹೊಂದಿದವರಿಗೆ 1.2 ಲಕ್ಷ ರೂಪಾಯಿವರೆಗೆ ಸಂಬಳ ನೀಡಲಾಗುತ್ತದೆ. ಸಂದರ್ಶನಕ್ಕೆ ಹಾಜರಾಗುವ ಅಭ್ಯರ್ಥಿಗಳು ಗುರುತಿನ ಚೀಟಿ, ಶೈಕ್ಷಣಿಕ ದಾಖಲೆಗಳು ಸೇರಿ ಅಗತ್ಯ ದಾಖಲೆಗಳನ್ನು ತೆಗೆದುಕೊಂಡು ಹೋಗಬೇಕು ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ. ಹೆಚ್ಚಿನ ಮಾಹಿತಿಗೆ ಅಭ್ಯರ್ಥಿಗಳು nimhans.ac.in ವೆಬ್ ಸೈಟ್ ಗೆ ಭೇಟಿ ನೀಡಬಹುದಾಗಿದೆ.
ಸಂದರ್ಶನ ನಡೆಯುವ ಸ್ಥಳ
Board Room and Exam Hall on the 4th floor of NBRC Building, NIMHANS, Bangalore – 560029
ಇದನ್ನೂ ಓದಿ : ಬುಮ್ರಾ ಗಾಯಗೊಂಡಿದ್ದಾರೆಯೇ? ವಿಕೆಟ್ ಸಿಗದಿರಲು ಅಸಲಿ ಕಾರಣ ಬಿಚ್ಚಿಟ್ಟ ಇರ್ಫಾನ್ ಪಠಾಣ್



















