ಬೆಂಗಳೂರು : ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿರುವ ರಾಷ್ಟ್ರೀಯ ಮಾನಸಿಕ ಆರೋಗ್ಯ ಮತ್ತು ನರವಿಜ್ಞಾನ ಸಂಸ್ಥೆ (NIMHANS)ಯಲ್ಲಿ ಖಾಲಿ ಇರುವ 8 ಹುದ್ದೆಗಳ ನೇಮಕಾತಿಗಾಗಿ (NIMHANS Recruitment 2026) ಅಧಿಸೂಚನೆ ಹೊರಡಿಸಲಾಗಿದೆ. 8 ಫೀಲ್ಡ್ ಡೇಟಾ ಕಲೆಕ್ಟರ್ ಹುದ್ದೆಗಳನ್ನು ನೇಮಕಾತಿ ಮಾಡಿಕೊಳ್ಳಲಾಗುತ್ತಿದೆ. ನೇರ ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನು ನೇಮಕಾತಿ ಮಾಡಿಕೊಳ್ಳಲಾಗುತ್ತದೆ. ನೇಮಕಾತಿ ಕುರಿತ ಹೆಚ್ಚಿನ ವಿವರ ಇಲ್ಲಿದೆ.
ಹುದ್ದೆಗಳ ಸಂಕ್ಷಿಪ್ತ ವಿವರ
ನೇಮಕಾತಿ ಸಂಸ್ಥೆ: ರಾಷ್ಟ್ರೀಯ ಮಾನಸಿಕ ಆರೋಗ್ಯ ಮತ್ತು ನರವಿಜ್ಞಾನ ಸಂಸ್ಥೆ
ಒಟ್ಟು ಹುದ್ದೆಗಳು: 08
ಹುದ್ದೆಗಳ ಹೆಸರು: ಫೀಲ್ಡ್ ಡೇಟಾ ಕಲೆಕ್ಟರ್
ಉದ್ಯೋಗ ಸ್ಥಳ: ಬೆಂಗಳೂರು
ನೇಮಕಾತಿ ವಿಧಾನ: ಸಂದರ್ಶನ
ಸಂದರ್ಶನದ ದಿನಾಂಕ: ಮಾರ್ಚ್ 28
1 ಫೀಲ್ಡ್ ಕೋ-ಆರ್ಡಿನೇಟರ್ ಹಾಗೂ 7 ಫೀಲ್ಡ್ ಡೇಟಾ ಕಲೆಕ್ಟರ್ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುತ್ತದೆ. ಮಾನ್ಯತೆ ಪಡೆದ ಯಾವುದೇ ವಿಶ್ವವಿದ್ಯಾಲಯ ಅಥವಾ ಮಂಡಳಿಗಳಲ್ಲಿ ಜಿಎನ್ಎಂ, ಡಿಎಂಎಲ್ ಟಿ, ಎಎನ್ಎಂ, ಬಿಎಸ್ಸಿ ಕೋರ್ಸ್ ಗಳನ್ನು ಮುಗಿಸಿದವರು ಸಂದರ್ಶನಕ್ಕೆ ಹಾಜರಾಗಬಹುದು. ಗರಿಷ್ಠ 40 ವರ್ಷದೊಳಗಿನ ಅಭ್ಯರ್ಥಿಗಳು ಅಗತ್ಯ ದಾಖಲೆಗಳೊಂದಿಗೆ ಸಂದರ್ಶನಕ್ಕೆ ಹಾಜರಾಗಬಹುದಾಗಿದೆ. ಹೆಚ್ಚಿನ ಮಾಹಿತಿಗೆ ಅಭ್ಯರ್ಥಿಗಳು nimhans.ac.in ವೆಬ್ ಸೈಟ್ ಗೆ ಭೇಟಿ ನೀಡಬಹುದಾಗಿದೆ.
ಲಿಖಿತ ಪರೀಕ್ಷೆ ಅಥವಾ ಹಾಗೂ ಸಂದರ್ಶನದ ಮೂಲಕ ನೇಮಕಾತಿ ಮಾಡಿಕೊಳ್ಳಲಾಗುತ್ತದೆ. ನೇಮಕಾತಿ ಹೊಂದಿದವರಿಗೆ ಆಯಾ ಹುದ್ದೆಗಳಿಗೆ ಅನುಗುಣವಾಗಿ ಮಾಸಿಕ 20 ಸಾವಿರ ರೂಪಾಯಿಯಿಂದ 30 ಸಾವಿರ ರೂಪಾಯಿವರೆಗೆ ಸಂಬಳ ನೀಡಲಾಗುತ್ತದೆ. ಸಂದರ್ಶನಕ್ಕೆ ಹಾಜರಾಗುವ ಅಭ್ಯರ್ಥಿಗಳು ಗುರುತಿನ ಚೀಟಿ, ಶೈಕ್ಷಣಿಕ ದಾಖಲೆಗಳು ಸೇರಿ ಅಗತ್ಯ ದಾಖಲೆಗಳನ್ನು ತೆಗೆದುಕೊಂಡು ಹೋಗಬೇಕು ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.
ಸಂದರ್ಶನ ನಡೆಯುವ ಸ್ಥಳ
Board Room & Exam Hall NBRC Building 4th Floor NIMHANS Bengaluru-560029
ಇದನ್ನೂ ಓದಿ : IPL ಬಳಿಕ ರೋಹಿತ್ ಶರ್ಮಾ ನಿವೃತ್ತಿ? ಕಾಡ್ಗಿಚ್ಚಿನಂತೆ ಹಬ್ಬಿದ ವೈರಲ್ ಸುದ್ದಿಯ ಅಸಲಿ ಸತ್ಯ ಇಲ್ಲಿದೆ!



















